ಬೆಂಗಳೂರು: ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿಯಲ್ಲಿ ಎಲ್ಲಾ 70 ವರ್ಷ ತುಂಬಿದವರಿಗೂ ಉಚಿತ ಆರೋಗ್ಯ ಸೇವೆ ನೀಡಲು ಕ್ಯಾಬಿನೆಟ್‌ನಲ್ಲಿ ತೀರ್ಮಾನಿಸಲಾಗಿದೆ. 70 ತುಂಬಿದ ಹಿರಿಯ ನಾಗರಿಕರಿಗೆ ವಯೋ ವಂದನಾ ಯೋಜನೆಯ ಅನುಸಾರ ಆರೋಗ್ಯ ಸೇವೆ ನೀಡಲು ನಿರ್ಧಾರ ತೆಗೆದುಕೊಳ್ಳಲಾಗಿದೆ.
ಏನಿದು ವಯೋ ವಂದನಾ? – ಆಯುಷ್ಮಾನ್ ಭಾರತ್ ಯೋಜನೆಯಡಿ ಬಡತನ ರೇಖೆಗಿಂತ ಕೆಳಗಿನ ಕುಟುಂಬಗಳಿಗೆ 5 ಲಕ್ಷ ರೂ. ಮೊತ್ತದವರೆಗೆ ಉಚಿತವಾಗಿ ಆರೋಗ್ಯ ಸೌಲಭ್ಯ ಒದಗಿಸಲಾಗುತ್ತದೆ. ಇದನ್ನೂ ಓದಿ: ಅಲ್ಪಸಂಖ್ಯಾತರ ಹಿಂದುಳಿದ ಕಾಲೋನಿಗಳ ಅಭಿವೃದ್ಧಿಗೆ 398 ಕೋಟಿ ರಿಲೀಸ್ – ಸಂಪುಟ ನಿರ್ಧಾರಕ್ಕೆ ಬಿಜೆಪಿ ತೀವ್ರ ಟೀಕೆ
ಈ ಯೋಜನೆಯನ್ನು ವಿಸ್ತರಿಸಿರುವ ಕೇಂದ್ರ ಸರ್ಕಾರ ಯಾವುದೇ ಸ್ತರದವರಾದರೂ 70 ವರ್ಷ ಮೇಲ್ಪಟ್ಟ ವೃದ್ಧರಿಗೆ 5 ಲಕ್ಷ ರೂ. ಮೊತ್ತದವರೆಗೆ ಉಚಿತವಾಗಿ ಆರೋಗ್ಯ ಸೇವೆ ಒದಗಿಸಲು ಜಾರಿಗೆ ತಂದ ಯೋಜನೆ ಇದಾಗಿದೆ. ಇದನ್ನೂ ಓದಿ: ಬಿಜೆಪಿಯವರು ಮದ್ದೂರು ಬಂದ್ ಮಾಡಿದ್ದೇ ಶಾಂತಿ ಕದಡೋಕೆ: ಚಲುವರಾಯಸ್ವಾಮಿ