ಮಂಡ್ಯ: ಮದ್ದೂರು (Maddur) ಪಟ್ಟಣಕ್ಕೆ ಭೇಟಿ ನೀಡಿದ್ದ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂಬ ಆರೋಪದಡಿಯಲ್ಲಿ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಗಣೇಶ ಮೆರವಣಿಗೆ ವೇಳೆ ನಡೆದಿದ್ದ ಕಲ್ಲು ತೂರಾಟದ ಬಳಿಕ ಗುರುವಾರ (ಸೆ.11) ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮದ್ದೂರಿಗೆ ಭೇಟಿ ನೀಡಿದ್ದರು. ಈ ವೇಳೆ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ್ದರು. ಭಾಷಣದ ವೇಳೆ ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಮದ್ದೂರು ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಮಂಜುನಾಥ್ ಅವರ ದೂರಿನನ್ವಯ ಪ್ರಕರಣ ದಾಖಲಾಗಿದೆ.ಇದನ್ನೂ ಓದಿ: ಪಾಕಿಸ್ತಾನಕ್ಕೆ ಜೈ ಎಂದವರ ಬಾಯಿಗೆ ಗುಂಡು ಹೊಡೆಯಬೇಕು: ಯತ್ನಾಳ್ ಕಿಡಿ
ಸಕ್ಕರೆ ನಾಡಿನ ಅಕ್ಕರೆಯ ಜನತೆಯ ಒಗ್ಗಟ್ಟಿಗೆ, ಪ್ರೀತಿಗೆ ನಾನು ಸದಾ ಚಿರಋಣಿ
ಮದ್ದೂರಿನಲ್ಲಿ ಗಣೇಶ ವಿಸರ್ಜನೆಯ ಸಮಯದಲ್ಲಿ ಆದ ಗಲಭೆ, ಕಲ್ಲು ತೂರಾಟವನ್ನು ಖಂಡಿಸಲು ಹಾಗೂ ಇಲ್ಲಿನ ನಮ್ಮ ಹಿಂದೂಗಳಿಗೆ ಧೈರ್ಯ ತುಂಬಲು ಇಂದು ಮದ್ದೂರಿಗೆ ಭೇಟಿ ನೀಡಿ ಹಿಂದೂ ಜನತೆಯನ್ನುದ್ದೇಶಿಸಿ ಮಾತನಾಡಿದೆ. ಭರ್ಜರಿ ಸ್ವಾಗತ, ಗೌರವ ನೀಡಿದ ಮದ್ದೂರಿನ ಜನತೆಗೆ… pic.twitter.com/AKzGv3frF7
— Basanagouda R Patil (Yatnal) (@BasanagoudaBJP) September 11, 2025
ಬಿಎನ್‌ಎಸ್ ಸೆಕ್ಷನ್ 196(1)(ಚಿ), 299, 353(2) ಅನ್ಯಕೋಮಿಗೆ ಧಕ್ಕೆ ಹಾಗೂ ಕೋಮುಗಳ ನಡುವೆ ವೈರತ್ವ ಉಂಟುಮಾಡುವ ಭಾಷಣ ಮಾಡಿರುವ ಆರೋಪದಡಿ ಎಫ್‌ಐಆರ್ ದಾಖಲಾಗಿದೆ.
ಇದಕ್ಕೂ ಮುನ್ನ ಗುರುವಾರ (ಸೆ.11) ಮದ್ದೂರು ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಮಂಜುನಾಥ್ ಅವರೇ ಎಂಎಲ್‌ಸಿ ಸಿ.ಟಿ ರವಿ (CT Ravi) ವಿರುದ್ಧವೂ ದೂರು ನೀಡಿ, ಭಾಷಣದ ವೇಳೆ ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿದ್ದರು.ಇದನ್ನೂ ಓದಿ: ಮದ್ದೂರಿನಲ್ಲಿ ಪ್ರಚೋದನಕಾರಿ ಭಾಷಣ – ಸಿ.ಟಿ ರವಿ ವಿರುದ್ಧ ಕೇಸ್ ದಾಖಲು