ಧ್ರುವ ಸರ್ಜಾ (Dhruva Sarja) ಹಾಗೂ ಪ್ರೇಮ್ ಕಾಂಬಿನೇಷನ್‌ನಲ್ಲಿ ಭರ್ಜರಿಯಾಗಿ ಶೂಟಿಂಗ್ ಮಾಡುತ್ತಿರುವ ಸಿನಿಮಾ ಕೆಡಿ. ಈ ಸಿನಿಮಾದ ಮುಖ್ಯ ಪಾತ್ರವೊಂದರಲ್ಲಿ ಕಿಚ್ಚ ಸುದೀಪ್ (Kichcha Sudeep) ನಟಿಸುತ್ತಾರೆ ಎನ್ನುವ ಮಾತುಗಳು ಕೇಳಿ ಬರುತ್ತಿದ್ದವು. ಆದರೆ ಈ ಬಗ್ಗೆ ಕಿಚ್ಚ ಸುದೀಪ್ ಅವರನ್ನ ಕೇಳಿದಾಗ್ಲೂ ಸಣ್ಣ ಸ್ಮೈಲ್ ಕೊಟ್ಟು ವಿಷ್ಯ ಬದಲಾಯಿಸಿದ್ದರು. ಆ ಎಲ್ಲಾ ಪ್ರಶ್ನೆಗಳಿಗೂ, ಅಂತೆ ಕಂತೆಗೂ ಈಗ ಉತ್ತರ ಸಿಕ್ಕಿದೆ.
ಕೆಡಿ ಸಿನಿಮಾದ (KD Cinema) ಅತಿಥಿ ಪಾತ್ರದಲ್ಲಿ ಕಿಚ್ಚ ಸುದೀಪ್ ನಟಿಸಿದ್ದಾರೆ. ಹೈದರಾಬಾದ್‌ನಲ್ಲಿ ನಡೆಯುತ್ತಿರುವ ಶೂಟಿಂಗ್‌ನಲ್ಲಿ ಕಿಚ್ಚ ಸುದೀಪ್ ಭಾಗಿಯಾಗಿದ್ದಾರೆ. ಸೆಟ್‌ನಲ್ಲಿ ಧ್ರುವ ಸರ್ಜಾ ಜೊತೆಗಿನ ಫೋಟೋಗಳು ಈಗ ವೈರಲ್ ಆಗಿವೆ. ಸಿನಿಮಾದಲ್ಲಿ ಸುದೀಪ್ ಪಾತ್ರವೇನು..? ಯಾವ ರೀತಿಯಾದ ಪಾತ್ರ ಎನ್ನುವ ಬಗ್ಗೆ ಚಿತ್ರತಂಡ ಸದ್ಯದಲ್ಲಿಯೇ ಮಾಹಿತಿ ಹಂಚಿಕೊಳ್ಳಲಿದೆ. ಸದ್ಯ ಕಿಚ್ಚ ಸುದೀಪ್ ಕೆಡಿ ಸಿನಿಮಾದಲ್ಲಿ ನಟಿಸಿರುವ ಪಾತ್ರದ ಬಗ್ಗೆ ಕೌತುಕತೆ ಮೂಡಿಸಿದೆ.
ಪ್ರೇಮ್ ನಿರ್ದೇಶನದ ಈ ಸಿನಿಮಾದಲ್ಲಿ ಧ್ರುವ ಸರ್ಜಾ ಜೊತೆಗೆ ನಾಯಕಿಯಾಗಿ ರೀಷ್ಮಾ ನಾಣಯ್ಯ ನಟಿಸಿದ್ದಾರೆ. ರವಿಚಂದ್ರನ್, ರಮೇಶ್ ಅರವಿಂದ್, ಸಂಜಯ್ ದತ್ ಸೇರಿದಂತೆ ಅತಿದೊಡ್ಡ ತಾರಾಗಣ ಈ ಸಿನಿಮಾದಲ್ಲಿದೆ. ಕೆವಿಎನ್ ಪ್ರೊಡಕ್ಷನ್ ಬ್ಯಾನರ್‌ನಲ್ಲಿ ಸಿನಿಮಾ ಮೂಡಿ ಬರಲಿದ್ದು, ಇದೇ ವರ್ಷದಲ್ಲಿ ಸಿನಿಮಾವನ್ನ ತೆರೆಗೆ ತರುವ ಪ್ಲ್ಯಾನ್‌ನಲ್ಲಿದೆ ಚಿತ್ರತಂಡ. ವಿಲನ್ ಸಿನಿಮಾದ ನಂತರ ಮತ್ತೆ ಪ್ರೇಮ್ ಜೊತೆ ಕೆಡಿ ಸಿನಿಮಾದಲ್ಲಿ ಕಿಚ್ಚ ಸುದೀಪ್ ಅತಿಥಿ ಪಾತ್ರ ನಿಭಾಯಿಸಿದ್ದಾರೆ. ಸದ್ಯದಲ್ಲಿಯೇ ಕಿಚ್ಚನ ಪಾತ್ರ ಪರಿಚಯವಾಗಲಿದೆಯಂತೆ.


