ಕೋಲಾರ: ಅತ್ತೆಗೆ ತನ್ನ ಅಕ್ರಮ ಸಂಬಂಧ ತಿಳಿದಿದ್ದಕ್ಕೆ ಸೊಸೆ ಹಾಗೂ ಆಕೆಯ ಪ್ರಿಯಕರ ಸೇರಿ ಮಾರಣಾಂತಿಕ ಹಲ್ಲೆ ನಡೆಸಿರುವುದು ಶ್ರೀನಿವಾಸಪುರದ ಗುಮ್ಮಲಪಲ್ಲಿ (Gummalapalli) ಗ್ರಾಮದಲ್ಲಿ ನಡೆದಿದೆ.
ಸೊಸೆ ಹಾಗೂ ಆಕೆಯ ಪ್ರಿಯಕರ ಶಶಿಕುಮಾರ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಹಲ್ಲೆಗೊಳಗಾದ ಅತ್ತೆ ರಮಣಮ್ಮರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ಮಗನ ಮಾನಸಿಕ ಅಸ್ವಸ್ಥತೆಯಿಂದ ಬೇಸತ್ತಿದ್ದ ತಾಯಿ – 13ನೇ ಮಹಡಿಯಿಂದ ಪುತ್ರನೊಂದಿಗೆ ಹಾರಿ ಆತ್ಮಹತ್ಯೆ
ಕಳೆದ 7 ವರ್ಷಗಳ ಹಿಂದೆ ತುಮ್ಮಲಪಲ್ಲಿ ಗ್ರಾಮದ ಮಂಜುನಾಥ್ ರೆಡ್ಡಿಯನ್ನು ಆಂಧ್ರಪ್ರದೇಶ ಮೂಲದ ಮಹಿಳೆ ಪ್ರೀತಿಸಿ ಮದುವೆಯಾಗಿದ್ದಳು. ಮದುವೆಯಾದ ಬಳಿಕ ಶಶಿಕುಮಾರ್‌ನೊಂದಿಗೆ ಅಕ್ರಮ ಸಂಬಂಧವನ್ನು ಹೊಂದಿದ್ದಳು. ಈ ವಿಚಾರ ಆಕೆಯ ಅತ್ತೆಗೆ ಗೊತ್ತಾಗಿತ್ತು. ಇದನ್ನೂ ಓದಿ: ಪಾನಿಪೂರಿ ತಿನ್ನುವ ವೇಳೆ ಗಲಾಟೆ – ಒಂದೇ ಪಂಚ್‌ಗೆ ಹಾರಿ ಹೋಯ್ತು ಯುವಕನ ಪ್ರಾಣ!
ಇದರಿಂದ ಸಿಟ್ಟಿಗೆದ್ದ ಸೊಸೆ ಹಾಗೂ ಆಕೆಯ ಪ್ರಿಯಕರ ಸೇರಿ ಅತ್ತೆ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ಗಂಭೀರವಾಗಿ ಗಾಯಗೊಂಡ ರಮಣಮ್ಮನನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ರಾಯಲ್ಪಾಡು ಪೊಲೀಸರು ಸೊಸೆ ಹಾಗೂ ಶಶಿಕುಮಾರ್‌ನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

