ನೆಲಮಂಗಲ: 24ನೇ ಮಹಡಿಯಿಂದ ಬಿದ್ದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನೆಲಮಂಗಲದ (Nelamangala) ಅಪಾರ್ಟ್ಮೆಂಟ್‌ವೊಂದರಲ್ಲಿ ನಡೆದಿದೆ.
ಅಲಸೂರು (Halasuru) ಮೂಲದ ಲೋಕೇಶ್ ಪವನ್ ಕೃಷ್ಣ (26) ಆತ್ಮಹತ್ಯೆ ಶರಣಾದ ಯುವಕ. 24ನೇ ಮಹಡಿಯಿಂದ ಆತ್ಮಹತ್ಯೆ ಮಾಡಿಕೊಂಡಿರುವ ಸಿಸಿಟಿವಿ ದೃಶ್ಯ `ಪಬ್ಲಿಕ್ ಟಿವಿʼಗೆ ಲಭ್ಯವಾಗಿದೆ.ಇದನ್ನೂ ಓದಿ: ಶ್ವಾನವನ್ನು ರಕ್ಷಿಸುತ್ತಿದ್ದ ಯುವತಿಗೆ 2 ಬಾರಿ ಬ್ಯಾಡ್ ಟಚ್ – ಖಾಸಗಿ ಅಂಗ ಮುಟ್ಟಿ ವಿಕೃತಿ ಮೆರೆದಿದ್ದ ಕಾಮುಕ ಅರೆಸ್ಟ್
ಮೃತ ಲೋಕೇಶ್‌ನ ಅಕ್ಕ ಹಾಗೂ ಭಾವ ಇದೇ ಅಪಾರ್ಟ್ಮೆಂಟ್‌ನಲ್ಲಿ ವಾಸಿಸುತ್ತಿದ್ದರು. ಭಾವ ಕೆಲಸದ ಮೇಲೆ ಹೊರಗೆ ಹೋಗಿದ್ದರು. ಹೀಗಾಗಿ ಅಕ್ಕ ಗರ್ಭಿಣಿಯಾಗಿದ್ದರಿಂದ ತವರು ಮನೆಗೆ ಬಂದಿದ್ದರು. ಈ ವೇಳೆ ಲೋಕೇಶ್ ಅಕ್ಕನ ಮನೆಯ ಕೀ ತೆಗೆದುಕೊಂಡು ಅಪಾರ್ಟ್ಮೆಂಟ್‌ಗೆ ಬಂದಿದ್ದ. ಎರಡು ದಿನ ಮನೆಯಲ್ಲಿದ್ದು, ಶನಿವಾರ ಬೆಳಗಿನ ಜಾವ 3:30ರ ಸುಮಾರಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಅನಾರೋಗ್ಯದ ಕಾರಣದಿಂದಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಮರಣೋತ್ತರ ಪರೀಕ್ಷೆ ಮುಗಿಸಿ ಪೊಲೀಸರು ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದಾರೆ. ಸದ್ಯ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಯುಡಿಆರ್ (ಅಸ್ವಾಭಾವಿಕ ಸಾವು) ದಾಖಲಾಗಿದೆ.ಇದನ್ನೂ ಓದಿ: ಬೆಂಗ್ಳೂರಿನಲ್ಲಿ ಹೆಚ್ಚಿದ ಸರಗಳ್ಳರ ಅಟ್ಟಹಾಸ – ಕುತ್ತಿಗೆಗೆ ಲಾಂಗ್ ಇಟ್ಟು 55 ಗ್ರಾಂ ಚಿನ್ನ ಕಳ್ಳತನ