ರಾಯಚೂರು: ಜಿಲ್ಲೆಯಲ್ಲಿಂದು ಹಿಂದೂ ಮಹಾಸಭಾ ಗಣಪತಿ (Hindu Mahasabha Ganapati) ವಿಸರ್ಜನಾ ಮೆರವಣಿಗೆ ಹಿನ್ನೆಲೆ ಪೊಲೀಸ್ ಬಿಗಿಬಂದೋಬಸ್ತ್ ಮಾಡಲಾಗಿದೆ.
ಮಂಗಳವಾರ (ಸೆ.16) ಬೆಳಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಪುಟ್ಟಮಾದಯ್ಯ ನೇತೃತ್ವದಲ್ಲಿ ಪೊಲೀಸರು ರೂಟ್ ಮಾರ್ಚ್ ನಡೆಸಿದರು. ಮೆರವಣಿಗೆ ಮಾರ್ಗದಲ್ಲಿ ಸಾವಿರಾರು ಪೊಲೀಸರಿಂದ ಕಾಲ್ನಡಿಗೆ ಜಾಥಾ ನಡೆಯಿತು. ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸರು ಜಾಗೃತಿ ಜಾಥಾ ನಡೆಸಿದರು.ಇದನ್ನೂ ಓದಿ: ಗಣೇಶ ಉತ್ಸವದಲ್ಲಿ ಭಾವೈಕ್ಯತೆ ಮೆರೆದ ಮುಸ್ಲಿಮರು – ಮೆರವಣಿಗೆ ಉದ್ದಕ್ಕೂ ಹೂ ಹಾಕಿ ಸಂಭ್ರಮ
ಗಣೇಶ ಮೆರವಣಿಗೆ ವೇಳೆ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಒಂದು ಸಾವಿರಕ್ಕೂ ಅಧಿಕ ಪೊಲೀಸ್ ಸಿಬ್ಬಂದಿಯ ನಿಯೋಜನೆ ಮಾಡಲಾಗಿದೆ.
ಸಂಜೆ ಗಣೇಶ ಮೆರವಣಿಗೆಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಸೇರಿದಂತೆ ಹಲವು ಮುಖಂಡರು ಭಾಗಿಯಾಗಲಿದ್ದಾರೆ. ಇದೇ ವೇಳೆ ನಗರದ ಚಂದ್ರಮೌಳೇಶ್ವರ ವೃತ್ತದಲ್ಲಿ ಯತ್ನಾಳ್ ಭಾಷಣ ಮಾಡಲಿದ್ದಾರೆ.ಇದನ್ನೂ ಓದಿ: ಇಂದು ಸಿಂಹಾಸನ ಜೋಡಣೆ ಕಾರ್ಯ – ಮೈಸೂರು ಅರಮನೆ ಅರ್ಧ ದಿನ ಪ್ರವಾಸಿಗರಿಗೆ ನಿರ್ಬಂಧ