Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ: ಕಮೆಂಟ್‌ ವಿವಾದವಾದ ಬೆನ್ನಲ್ಲೇ ಸಿಜೆಐ ಗವಾಯಿ ಸ್ಪಷ್ಟನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Court | ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ: ಕಮೆಂಟ್‌ ವಿವಾದವಾದ ಬೆನ್ನಲ್ಲೇ ಸಿಜೆಐ ಗವಾಯಿ ಸ್ಪಷ್ಟನೆ

Court

ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ: ಕಮೆಂಟ್‌ ವಿವಾದವಾದ ಬೆನ್ನಲ್ಲೇ ಸಿಜೆಐ ಗವಾಯಿ ಸ್ಪಷ್ಟನೆ

Public TV
Last updated: September 18, 2025 4:42 pm
Public TV
Share
2 Min Read
Gavai
SHARE

ನವದೆಹಲಿ: ಖಜುರಾಹೊದಲ್ಲಿ ವಿಷ್ಣುವಿನ ವಿಗ್ರಹಕ್ಕೆ ಸಂಬಂಧಿಸಿದಂತೆ ತಾನು ವ್ಯಕ್ತಪಡಿಸಿದ ಅಭಿಪ್ರಾಯಕ್ಕೆ ಟೀಕೆ ವ್ಯಕ್ತವಾಗುತ್ತಿದ್ದಂತೆ ಸುಪ್ರೀಂ ಕೋರ್ಟ್‌ (Supreme Court) ಮುಖ್ಯ ನ್ಯಾ. ಗವಾಯಿ (BR Gavai) ಅವರು ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ ಎಂದು ಹೇಳಿದ್ದಾರೆ.

ಅರ್ಜಿ ವಿಚಾರಣೆಯ ಸಂದರ್ಭದಲ್ಲಿ ನಾನು ಮಾಡಿದ ಕಾಮೆಂಟ್‌ಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಒಂದು ನಿರ್ದಿಷ್ಟ ರೀತಿಯಲ್ಲಿ ಚಿತ್ರಿಸಲಾಗಿದೆ ಎಂದು ಯಾರೋ ನನಗೆ ಹೇಳಿದರು. ಆದರೆ ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ ಎಂದು ಹೇಳುವ ಮೂಲಕ ತಮ್ಮ ಅಭಿಪ್ರಾಯಕ್ಕೆ ಸ್ಪಷ್ಟನೆ ನೀಡಿದರು.

ಇಂದು ಪೀಠದ ಮುಂದೆ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಕಳೆದ 10 ವರ್ಷಗಳಿಂದ ಸಿಜೆಐ ಗವಾಯಿ ಅವರನ್ನು ತಿಳಿದಿದ್ದೇನೆ ಮತ್ತು ಮುಖ್ಯ ನ್ಯಾಯಮೂರ್ತಿ ಎಲ್ಲಾ ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡಿದ್ದಾರೆ ಎಂದು ತಿಳಿಸಿದರು.

ಇದನ್ನು ಗಂಭೀರ ಕಳವಳದ ವಿಷಯ ಎಂದು ಕರೆದ ಎಸ್‌ಜಿ ಮೆಹ್ತಾ, ಪ್ರತಿಯೊಂದು ಕ್ರಿಯೆಗೂ ಸಮಾನ ಪ್ರತಿಕ್ರಿಯೆ ಇರುತ್ತದೆ ಎಂಬ ನ್ಯೂಟನ್‌ನ ಚಲನೆಯ ನಿಯಮಗಳನ್ನು ನಾವು ಓದ್ದಿದ್ದೇವೆ. ಆದರೆ ಈಗ ಪ್ರತಿಯೊಂದು ಕ್ರಿಯೆಗೂ ಸಾಮಾಜಿಕ ಮಾಧ್ಯಮಗಳಲ್ಲಿ ಅಸಮಾನ ಪ್ರತಿಕ್ರಿಯೆ ಇರುತ್ತದೆ ಎಂದು ಹೇಳಿದರು.

ಅದೇ ಪೀಠದ ಮುಂದೆ ಹಾಜರಿದ್ದ ಹಿರಿಯ ವಕೀಲ ಕಪಿಲ್ ಸಿಬಲ್, ನಾವು ಪ್ರತಿದಿನ ಈ ಸಾಮಾಜಿಕ ಮಾಧ್ಯಮಗಳಿಂದ ರೋಸಿ ಹೋಗಿದ್ದೇವೆ. ಈ ಹುಚ್ಚು ಕುದುರೆಯನ್ನು ಪಳಗಿಸಲು ಯಾವುದೇ ಮಾರ್ಗವಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.  ಇದನ್ನೂ ಓದಿ:  ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ ಎಂದು ಸ್ಪಷ್ಟಪಡಿಸಿದ ನಂತರ ಸಿಜೆಐ ನೇಪಾಳದಲ್ಲಿ ನಡೆದ ಇತ್ತೀಚಿನ ಪ್ರತಿಭಟನೆಯನ್ನು ಉಲ್ಲೇಖಿಸಿ “ನೇಪಾಳದಲ್ಲೂ ಅದು ಹಾಗೆಯೇ ಆಯಿತು” ಎಂದು ಹೇಳಿದರು.

SUPREME COURT

ಏನಿದು ಪ್ರಕರಣ?
ಮಧ್ಯಪ್ರದೇಶದ ಯುನೆಸ್ಕೋ ವಿಶ್ವ ಪರಂಪರೆಗೆ ಸೇರ್ಪಡೆಯಾಗಿರುವ ಖಜುರಾಹೊ ದೇವಾಲಯ ( Lord Vishnu Idol in Khajuraho) ಸಂಕೀರ್ಣದ ಭಾಗವಾಗಿರುವ ಜವಾರಿ ದೇವಾಲಯದಲ್ಲಿ ಏಳು ಅಡಿ ಎತ್ತರದ ವಿಷ್ಣುವಿನ ವಿಗ್ರಹವನ್ನು ಪುನರ್ನಿರ್ಮಿಸಲು ಮತ್ತು ಮರುಸ್ಥಾಪಿಸಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಅರ್ಜಿಯನ್ನು ಮಂಗಳವಾರ ಸಿಜೆಐ ಗವಾಯಿ ನೇತೃತ್ವದ ಪೀಠ ವಜಾಗೊಳಿಸಿತ್ತು.

ಈ ಪ್ರಕರಣ ಭಾರತೀಯ ಪುರಾತತ್ವ ಸರ್ವೇಕ್ಷಣಾ ಸಮೀಕ್ಷೆಯ (ASI) ವ್ಯಾಪ್ತಿಗೆ ಬರುತ್ತದೆಯೇ ಹೊರತು ನ್ಯಾಯಾಲಯದ ವ್ಯಾಪ್ತಿಗೆ ಬರುವುದಿಲ್ಲ. ಏನೇ ಮಾಡುವುದರಿದ್ದರೂ ಎಎಸ್‌ಐ ಅನುಮತಿ ನೀಡಬೇಕಾಗಿದೆ. ಕ್ಷಮಿಸಿ ಎಂದು ತಿಳಿಸಿದ್ದರು.

ಸಂಪೂರ್ಣವಾಗಿ ಪ್ರಚಾರ ಹಿತಾಸಕ್ತಿಗಾಗಿ ಈ ಅರ್ಜಿಯನ್ನು ನೀವು ಸಲ್ಲಿಕೆ ಮಾಡಿದ್ದೀರಿ. ಹೋಗಿ ದೇವರಲ್ಲೇ ಏನಾದರೂ ಮಾಡುವಂತೆ ಬೇಡಿಕೊಳ್ಳಿ. ನೀವು ವಿಷ್ಣುವಿನ ಕಟ್ಟಾ ಭಕ್ತ ಎಂದು ಹೇಳುತ್ತೀರಿ. ಆದ್ದರಿಂದ ಈಗಲೇ ಹೋಗಿ ಪ್ರಾರ್ಥಿಸಿ ಮತ್ತು ಸ್ವಲ್ಪ ಧ್ಯಾನ ಮಾಡಿ ಎಂದು ಸಿಜೆಐ ಗವಾಯಿ ಹೇಳಿದ್ದರು.

ಮೊಘಲ್ ಆಕ್ರಮಣದ ಸಮಯದಲ್ಲಿ ವಿಗ್ರಹವು ವಿರೂಪಗೊಂಡಿದ್ದು, ಅದನ್ನು ಪುನಃಸ್ಥಾಪಿಸಲು ಸರ್ಕಾರಕ್ಕೆ ಪದೇ ಪದೇ ಮನವಿ ಮಾಡಿದರೂ ಅದು ಅದೇ ಸ್ಥಿತಿಯಲ್ಲಿದೆ ಎಂದು ರಾಕೇಶ್ ದಲಾಲ್ ಅರ್ಜಿಯಲ್ಲಿ ಉಲ್ಲೇಖಿಸಿದ್ದರು.

Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Tehran Ceasefire Victory
Latest

ಕದನ ವಿರಾಮ ಘೋಷಣೆ – ಟೆಹ್ರಾನ್‌ನ ಪ್ರಮುಖ ಬೀದಿಗಳಲ್ಲಿ ರಾಷ್ಟ್ರಧ್ವಜ ಹಿಡಿದು ವಿಜಯೋತ್ಸವ ಆಚರಣೆ

Public TV
By Public TV
25 minutes ago
oil price fall
Latest

ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ ಕಚ್ಚಾ ತೈಲ ದರ ದಿಢೀರ್‌ ಭಾರೀ ಕುಸಿತ

Public TV
By Public TV
52 minutes ago
Lorry Accident Mysore Road Sattelite Bus Stand
Bengaluru City

ಸಿಗ್ನಲ್‌ನಲ್ಲಿ ನಿಲ್ಲಿಸಿದ್ದ ಲಾರಿಗೆ ಹಿಂಬದಿಯಿಂದ ಗುದ್ದಿದ ಮತ್ತೊಂದು ಲಾರಿ – ಚಾಲಕ ಸಾವು

Public TV
By Public TV
1 hour ago
Hormuz
Latest

ಕದನ ವಿರಾಮಕ್ಕೆ ಇರಾನ್‌ ವಿಧಿಸಿದ 10 ಷರತ್ತುಗಳು ಏನು?

Public TV
By Public TV
1 hour ago
WAR 1
Latest

ಇಸ್ರೇಲ್‌, ಇರಾನ್‌ ಯುದ್ಧ | ಯಾರಿಗೆ ಲಾಭ, ಯಾರಿಗೆ ನಷ್ಟ? – ವಿಶ್ವಬ್ಯಾಂಕ್‌ ಎಚ್ಚರಿಕೆ ಏನು?

Public TV
By Public TV
2 hours ago
Bab al Mandab Strait India
Latest

ಹಾರ್ಮುಜ್ ಬಳಿಕ ಬಾಬ್ ಅಲ್-ಮಂಡೇಬ್ ಜಲಸಂಧಿ ಬಂದ್‌ ಭೀತಿ – ಭಾರತಕ್ಕೇನು ಪರಿಣಾಮ?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?