– 2008ರ ಮುಂಬೈ ದಾಳಿ ಉಲ್ಲೇಖಿಸಿ ಬಿಜೆಪಿ ಕಿಡಿ
ನವದೆಹಲಿ: ಪಾಕಿಸ್ತಾನಕ್ಕೆ (Pakistan) ಹೋದ್ರೆ ನನಗೆ ಮನೆಗೆ ಹೋದ ಅನುಭವವಾಗುತ್ತೆ ಎಂದು ಹೇಳುವ ಮೂಲಕ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೋಡಾ (Sam Pitroda) ಈಗ ಹೊಸ ವಿವಾದ ಸೃಷ್ಟಿಸಿದ್ದಾರೆ.
ತಮ್ಮ ಹೇಳಿಕೆಗಳಿಂದಲೇ ವಿವಾದ ಸೃಷ್ಟಿಸುವ ಸ್ಯಾಮ್ ಪಿತ್ರೋಡಾ ಅವರ ಪಟ್ಟಿಗೆ ಇದು ಹೊಸ ವಿವಾದವಾಗಿದೆ. ಸಂದರ್ಶನವೊಂದರಲ್ಲಿ ಭಾರತದ ವಿದೇಶಾಂಗ ನೀತಿ ಮತ್ತು ನೆರೆಯ ರಾಷ್ಟ್ರಗಳೊಂದಿಗಿನ ಸಂಬಂಧಗಳ ಕುರಿತು ಮಾತನಾಡುತ್ತಾ, ನೆರೆಹೊರೆಯಲ್ಲಿ ಹಿಂಸಾಚಾರ ಮತ್ತು ಭಯೋತ್ಪಾದನೆಯ ಸಮಸ್ಯೆಗಳ ಹೊರತಾಗಿಯೂ ಭಾರತವು ಪಾಕಿಸ್ತಾನ (India Pakistan) ಮತ್ತು ಬಾಂಗ್ಲಾದೊಂದಿಗೆ ತೊಡಗಿಕೊಳ್ಳಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ: ಉಗ್ರ ಹಫೀಜ್ ಸಯೀದ್ ಜೊತೆ ಸಭೆ ನಡೆಸಿದ್ದಕ್ಕೆ ಸಿಂಗ್ ನನಗೆ ಥ್ಯಾಂಕ್ಸ್ ಹೇಳಿದ್ದರು: ಭಯೋತ್ಪಾದಕ ಯಾಸಿನ್ ಮಲಿಕ್
ನಮ್ಮ ವಿದೇಶಾಂಗ ನೀತಿಯು ಮೊದಲು ನಮ್ಮ ನೆರೆಹೊರೆಯ ರಾಷ್ಟ್ರಗಳಿಗೆ ಪ್ರಾಮುಖ್ಯತೆ ನೀಡಬೇಕು. ನಮ್ಮ ನೆರೆಹೊರೆ ರಾಷ್ಟ್ರಗಳೊಂದಿಗೆ ಸಂಬಂಧವನ್ನು ಸುಧಾರಿಸಬಹುದೇ? ಎಂಬುದರ ಬಗ್ಗೆ ಚಿಂತಿಸಬೇಕು. ನಾನು ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ನೇಪಾಳಕ್ಕೆ ಹೋಗಿದ್ದೇನೆ. ಈ ವೇಳೆ ನನಗೆ ನನ್ನ ತಾಯ್ನಾಡಿನಲ್ಲೇ ಇದ್ದೇನೆಂಬ ಭಾವನೆ ಮೂಡಿಸಿತ್ತು ಎಂದು ಹೇಳಿದ್ದಾರೆ.
ಪಾಕ್, ಬಾಂಗ್ಲಾ ನನ್ನ ಮನೆಯಂತೆ ಭಾಸವಾಗುತ್ತೆ:
ಮುಂದುವರಿದು… ಪಾಕಿಸ್ತಾನ, ಬಾಂಗ್ಲಾದೇಶ (Bangladesh) ಹಾಗೂ ನೇಪಾಳಕ್ಕೆ ಭೇಟಿ ನೀಡಿದ್ದೇನೆ. ಅಲ್ಲಿಗೆ ಪ್ರವಾಸಕ್ಕೆ ಹೋದ ಸಮಯದಲ್ಲಿ ನನ್ನ ಮನೆಯಂತೆಯೇ ಭಾಸವಾಗುತ್ತಿತ್ತು. ಪಾಕಿಸ್ತಾನಕ್ಕೆ ಹೋದಾಗಲೂ ನಾನು ವಿದೇಶದಲ್ಲಿದ್ದೇನೆ ಅನ್ನಿಸಲೇ ಇಲ್ಲ ನನ್ನ ಮನೆಯಂತೆ ಭಾಸವಾಗಿತ್ತು. ಅವರು ನನ್ನ ಹಾಡುಗಳನ್ನು ಇಷ್ಟಪಡ್ತಾರೆ, ನನ್ನಂತೆಯೇ ಮಾತನಾಡ್ತಾರೆ, ನನ್ನ ಆಹಾರವನ್ನೇ ತಿನ್ನುತ್ತಾರೆ. ನಾವು ಅವರೊಂದಿಗೆ ಶಾಂತಿ ಸಾಮರಸ್ಯದಿಂದ ಬದುಕಲು ಕಲಿಯಬೇಕು ಎಂದಿದ್ದಾರೆ. ಇದನ್ನೂ ಓದಿ: iPhone 17 ಖರೀದಿಗೆ ನೂಕುನುಗ್ಗಲು – ಆ್ಯಪಲ್ ಸ್ಟೋರ್ ಮುಂದೆ ಹೊಡೆದಾಡಿಕೊಂಡ ಗ್ರಾಹಕರು
ಮುಂಬೈ ದಾಳಿ ಉಲ್ಲೇಖಿಸಿ ಬಿಜೆಪಿ ಕಿಡಿ
ಇನ್ನೂ 2008ರ ಮುಂಬೈ ದಾಳಿ ಉಲ್ಲೇಖಿಸಿ ಸ್ಯಾಮ್ ಪಿತ್ರೋಡಾ ಹೇಳಿಕೆಗೆ ಬಿಜೆಪಿ ಕಿಡಿ ಕಾರಿದೆ. ಪಾಕಿಸ್ತಾನದ ಬಗ್ಗೆ ಕಾಂಗ್ರೆಸ್ ಮೃದು ಧೋರಣೆ ಹೊಂದಿರುವುದನ್ನು ಸಾಬೀತುಪಡಿಸುತ್ತಿದೆ ಎಂದು ಕಿಡಿಕಾರಿದೆ. ಇದನ್ನೂ ಓದಿ: ನ.30 ರ ನಂತರ ಭಾರತದ ಮೇಲಿನ ಶೇ.25 ರಷ್ಟು ದಂಡ ಸುಂಕವನ್ನು ಅಮೆರಿಕ ತೆಗೆಯಬಹುದು: CEA
ಈ ನಡುವೆ ಉಗ್ರರಿಗೆ ಹಣಕಾಸು ನೆರವು ನೀಡಿದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಜೆಕೆಎಲ್‌ಎಫ್ ಉಗ್ರ ಯಾಸಿನ್ ಮಲ್ಲಿಕ್, ಸ್ಫೋಟಕ ಹೇಳಿಕೆ ನೀಡಿದ್ದಾನೆ. ಮುಂಬೈ ದಾಳಿಯ ಮಾಸ್ಟರ್ ಮೈಂಡ್, ಲಷ್ಕರ್-ಎ-ತೋಯ್ಬಾ ಹಫೀಜ್ ಸಯೀದ್‌ನನ್ನು ಭೇಟಿ ಮಾಡಿದ್ದಕ್ಕೆ ಮಾಜಿ ಪ್ರಧಾನಿ ದಿವಂಗತ ಡಾ. ಮನಮೋಹನ್ ಸಿಂಗ್ ನನಗೆ ಧನ್ಯವಾದ ಅರ್ಪಿಸಿದ್ದರು ಎಂದಿದ್ದಾನೆ.
ಯಾಸಿನ್ ಮಲಿಕ್ 2006ರಲ್ಲಿ ಪಾಕಿಸ್ತಾನದಲ್ಲಿ ಹಫೀಜ್ ಸಯೀದ್‌ನನ್ನು ಭೇಟಿಯಾಗಿದ್ದ. ಮನಮೋಹನ್ ಸಿಂಗ್ ಅವರು ನನಗೆ ವೈಯಕ್ತಿಕವಾಗಿ ಧನ್ಯವಾದ ಹೇಳಿದ್ದರು ಎಂದು ಯಾಸಿನ್ ಮಲಿಕ್ ಆಗಸ್ಟ್ 25 ರಂದು ದೆಹಲಿ ಹೈಕೋರ್ಟ್ನಲ್ಲಿ ಸಲ್ಲಿಸಿದ ಅಫಿಡವಿಟ್‌ನಲ್ಲಿ ಉಲ್ಲೇಖಿಸಿದ್ದಾನೆ. ಈ ಭೇಟಿಯನ್ನು ನಾನು ನಿಗದಿ ಮಾಡಿರಲಿಲ್ಲ. ಬದಲಾಗಿ ಹಿರಿಯ ಭಾರತೀಯ ಗುಪ್ತಚರ ಅಧಿಕಾರಿಗಳ ಕೋರಿಕೆಯ ಮೇರೆಗೆ ಉಗ್ರರ ಜೊತೆ ಸಭೆ ಮಾಡಿದ್ದೆ ಎಂದು ತಿಳಿಸಿದ್ದಾನೆ. ಇದನ್ನೂ ಓದಿ: ಸಾಫ್ಟ್‌ವೇರ್ ಬಳಸಿ ಆಳಂದದಲ್ಲಿ 6018 ಮತದಾರರು ಡಿಲೀಟ್: ರಾಹುಲ್ ಗಾಂಧಿ ಬಾಂಬ್