ಇಂಫಾಲ್: ಮಣಿಪುರದಲ್ಲಿ (Manipur) ಶಾಂತಿ ಸ್ಥಾಪನೆಯಾಗಬೇಕು ಎನ್ನುವ ಹೊತ್ತಲ್ಲೇ ಇಂಫಾಲ್‌ನ ಹೊರ ವಲಯದಲ್ಲಿ ಸೇನಾ ವಾಹನದ ಮೇಲೆ ಗುಂಡಿನ ದಾಳಿ ನಡೆದಿದೆ.
ಮಣಿಪುರದ ಬಿಷ್ಣುಪುರ ಜಿಲ್ಲೆಯಲ್ಲಿ ಅಸ್ಸಾಂ ರೈಫಲ್ಸ್‌ನ ಟ್ರಕ್ (Assam Rifles) ಮೇಲೆ ಬಂದೂಕುಧಾರಿಗಳ ಗುಂಪೊಂದು ಹೊಂಚು ಹಾಕಿ ದಾಳಿ ನಡೆಸಿದೆ. ಪರಿಣಾಮ ಇಬ್ಬರು ಯೋಧರು (Soldiers) ಹುತಾತ್ಮರಾಗಿದ್ದು, ಐವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನ ಇಂಫಾಲ್‌ನಲ್ಲಿರುವ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಂಜೆ 6 ಗಂಟೆ ಸುಮಾರಿಗೆ 33 ಅಸ್ಸಾಂ ರೈಫಲ್ಸ್ ಘಟಕದ ಸೈನಿಕರ ತಂಡ ಇಂಫಾಲದಿಂದ ರಾಷ್ಟ್ರೀಯ ಹೆದ್ದಾರಿ-2ರಲ್ಲಿ ಬಿಷ್ಣುಪುರ ಕಡೆಗೆ ಹೊರಟಿತ್ತು. ಈ ವೇಳೆ ಹೊಂಚು ಹಾಕಿ ಕುಳಿತಿದ್ದ ಬಂಧೂಕುದಾರಿಗಳ ಗುಂಪು ಏಕಾಏಕಿ ಗುಂಡಿನ ದಾಳಿ ನಡೆಸಿದೆ. ಘಟನೆಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದು, ಐವರು ಗಾಯಗೊಂಡಿದ್ದಾರೆಂದು ಗುವಾಹಟಿಯ ರಕ್ಷಣಾ ಪಿಆರ್‌ಒ ತಿಳಿಸಿದ್ದಾರೆ.
ಇತ್ತೀಚೆಗಷ್ಟೇ ರಾಷ್ಟ್ರೀಯ ಹೆದ್ದಾರಿ ತೆರೆಯಲು ಕುಕಿ ಗ್ರೂಪ್ ಒಪ್ಪಿಗೆ ಸೂಚಿಸಿತ್ತು. ಇದರಿಂದ ಮಣಿಪುರದಲ್ಲಿ ಶಾಂತಿ ನೆಲೆಸಿತ್ತು. ಪ್ರಧಾನಿ ಮೋದಿ ಕೂಡ ಕಳೆದವಾರ ಭೇಟಿ ನೀಡಿ, ಅಭಿವೃದ್ಧಿ ಯೋಜನೆಗಳನ ಉದ್ಘಾಟನೆ ಶಂಕುಸ್ಥಾಪನೆ ನೆರವೇರಿಸಿದ್ದರು. ಇದೀಗ ಮತ್ತೆ ಗುಂಡಿನ ದಾಳಿ ನಡೆಸಿರುವುದು ಜನರ ನಿದ್ದೆಗೆಡಿಸಿದೆ.