– ಸಮೀಕ್ಷೆ ಮೇಲೆ ಕರ್ನಾಟಕದ ಏಳು ಕೋಟಿ ಜನರ ಭವಿಷ್ಯ
ಹುಬ್ಬಳ್ಳಿ: ಜಾತಿ ಗಣತಿಯಲ್ಲಿ (Caste Census) ಸಾಕಷ್ಟು ದೋಷಗಳಿವೆ. ಸಮೀಕ್ಷೆ ಮುಂದೂಡಬೇಕು ಅನ್ನೋದು ನಮ್ಮ ನಿಲುವು ಎಂದು ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ (Vachananda Swamiji) ಹೇಳಿದ್ದಾರೆ.
ಇದೇ 22ರಿಂದ ರಾಜ್ಯದಲ್ಲಿ ಜಾತಿ ಗಣತಿ ಹಿನ್ನೆಲೆ ಮನೆಮನೆಗೆ ತೆರಳಿ ವಚನಾನಂದ ಸ್ವಾಮೀಜಿ ಜಾಗೃತಿ ಮೂಡಿಸುತ್ತಿದ್ದಾರೆ. ಹುಬ್ಬಳ್ಳಿಯ ಲಿಂಗರಾಜ ನಗರದಲ್ಲಿ ಮನೆ ಮನೆಗೆ ತೆರಳಿ ಕರಪತ್ರ ಅಂಟಿಸಿ ಸಮುದಾಯದ ಜನರಲ್ಲಿ ಜಾಗೃತಿ ಮೂಡಿಸಿದ್ದಾರೆ. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇಷ್ಟೊಂದು ಅರ್ಜೆಂಟ್‌ನಲ್ಲಿ ಯಾಕೆ ಸಮೀಕ್ಷೆ ಮಾಡುತ್ತಿದ್ದೀರಿ. ಈ ಹಿಂದೆ ನಡೆಸಿದ್ದ ಕಾಂತರಾಜ ಆಯೋಗ ವರದಿ ವೈಜ್ಞಾನಿಕವಾಗಿರಲಿಲ್ಲ. ಇದೇ ಕಾರಣಕ್ಕೆ ಇದೀಗ ಮತ್ತೆ ವೈಜ್ಞಾನಿಕವಾಗಿ ಸಮೀಕ್ಷೆ ಮಾಡಲು ಮುಂದಾಗಿದ್ದೀರಿ. ಇದೀಗ ಇದರಲ್ಲಿ ಕೂಡಾ ಹರಿಬರಿ ಯಾಕೆ? ಈ ಸಮೀಕ್ಷೆ ಮೇಲೆ ಕರ್ನಾಟಕದ ಏಳು ಕೋಟಿ ಜನರ ಭವಿಷ್ಯ ಇದೆ. ಹೀಗಾಗಿ ಸರಿಯಾಗಿ ಸಮಾಧಾನವಾಗಿ ಈ ಕೆಲಸ ಮಾಡಬೇಕು ಎಂದರು. ಇದನ್ನೂ ಓದಿ: ರಾಜ್ಯದಲ್ಲಿ ಅಲ್ಪಸಂಖ್ಯಾತ ಮುಸ್ಲಿಮರು ಹೆಚ್ಚಿದ್ದಾರೆಂದು ತೋರಿಸಲು ಸಿದ್ದರಾಮಯ್ಯ ನಾಟಕ – ಯತ್ನಾಳ್
ಪಂಚಮಸಾಲಿ ಸಮುದಾಯದಲ್ಲಿ ಯಾವುದೇ ಗೊಂದಲವಿಲ್ಲ. ಗಣತಿಯಲ್ಲಿ ಏನು ಬರೆಸಬೇಕು ಎಂಬ ಗೊಂದಲವಿಲ್ಲ. ನಾವು ಧರ್ಮದ ಕಾಲಂನಲ್ಲಿ ಹಿಂದೂ ಜಾತಿ ಕಾಲಂನಲ್ಲಿ ಲಿಂಗಾಯತ ಪಂಚಮಸಾಲಿ ಅಂತ ಬರೆಸಲು ಹೇಳಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ಜಾತಿಗಣತಿ ವೇಳೆ ಉಪಜಾತಿಗಳ ಮೊದಲು ಒಕ್ಕಲಿಗ ಎಂದು ಬರೆಸಬೇಕು: ಸಭೆಯಲ್ಲಿ ಒಕ್ಕೊರಲ ಕೂಗು