ತುಮಕೂರು: ಇಬ್ಬರು ಮಕ್ಕಳ ಜೊತೆ ಮಹಿಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ಪತಿ, ಅತ್ತೆ ಮತ್ತು ಅಜ್ಜಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮೃತ ಸರಿತಾ ಗಂಡ ಸತೋಷ್, ಅತ್ತೆ ಅಂಜಿನಮ್ಮ, ಹಾಗೂ ಸಂತೋಷ್ ಅಜ್ಜಿ ಹನುಮಕ್ಕಳನ್ನು ಪೊಲೀಸರು ಬಂಧಿಸಿದ್ದಾರೆ. ಸರಿತಾ ಕುಟುಂಬಸ್ಥರಿಂದ ಕಿರುಕುಳಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಆರೋಪ ಕೇಳಿಬಂದಿತ್ತು. ಇದನ್ನೂ ಓದಿ: Hassan | ಕಲ್ಲಿನ ಗಣೇಶ ಮೂರ್ತಿಗೆ ಚಪ್ಪಲಿ ಹಾರ ಹಾಕಿದ ಕಿಡಿಗೇಡಿಗಳು
ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಕಡಪಲಕೆರೆ ಗ್ರಾಮದಲ್ಲಿ ಘಟನೆ ನಡೆದಿತ್ತು. ಮೂವರನ್ನು ಪಾವಗಡ ಪೊಲೀಸರು ಬಂಧಿಸಿದ್ದಾರೆ. ನಿನ್ನೆ ಮಧ್ಯಾಹ್ನ 2 ಗಂಟೆ ಸುಮಾರಿಗೆ ಇಬ್ಬರು ಮಕ್ಕಳ ಜೊತೆ ಸೇರಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದರು.
ಕಡಪಲಕೆರೆ ಗ್ರಾಮದ ಸರಿತಾಳನ್ನು ಅದೇ ಗ್ರಾಮದ ಸಂತೋಷ್ ಎಂಬಾತನಿಗೆ ಕೊಟ್ಟು ಮದುವೆ ಮಾಡಲಾಗಿತ್ತು. ಕಳೆದ 6 ವರ್ಷಗಳ ಹಿಂದೆ ಮದುವೆ ಮಾಡಲಾಗಿತ್ತು. ಸಂತೋಷ್ ಆಟೋ ಚಾಲಕನಾಗಿದ್ದ. ಮದುವೆಯಾದಾಗಿಂದಲೂ ಗಂಡ ಸಂತೋಷ್ ಹಾಗೂ ಆತನ ತಾಯಿ, ಅಜ್ಜಿ ಕಿರುಕುಳ ನೀಡುತ್ತಿದ್ದರು ಎಂಬ ಆರೋಪ ಇತ್ತು. ಇದನ್ನೂ ಓದಿ: ಮಹಾಲಯ ಅಮಾವಾಸ್ಯೆ; ಮಲೆ ಮಹದೇಶ್ವರ ಬೆಟ್ಟಕ್ಕೆ ಭಕ್ತರ ದಂಡು
ಕಿರುಕುಳಕ್ಕೆ ಮನನೊಂದು ಇಬ್ಬರು ಮಕ್ಕಳ ಜೊತೆ ನೇಣುಬಿಗಿದುಕೊಂಡು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂಬ ಆರೋಪವಿದೆ. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ನೇಣಿಗೆ ಶರಣಾಗಿದ್ದಾರೆ.