ಮಂಗಳೂರು: ಮಹೇಶ್ ಶೆಟ್ಟಿ ತಿಮರೋಡಿ (Mahesh Shetty Thimarody) ಇಂದು ಬೆಳ್ತಂಗಡಿ ಪೊಲೀಸರ (Belthangady Police) ವಿಚಾರಣೆಗೆ ಗೈರಾಗಿದ್ದಾರೆ.
ಅಕ್ರಮ ಶಸ್ತ್ರಾಸ್ತ್ರ ಹೊಂದಿದ್ದ ಆರೋಪದಲ್ಲಿ ಇಂದು ತಿಮರೋಡಿ ಬೆಳ್ತಂಗಡಿ ಠಾಣೆಗೆ ಹಾಜರಾಗಿ ವಿಚಾರಣೆ ಎದುರಿಸಬೇಕಿತ್ತು. ಆದರೆ ಇಂದು ವಿಚಾರಣೆಗೆ ಬರಲು ಅಸಾಧ್ಯ ಎಂದು ಆಪ್ತರ ಮೂಲಕ ತಿಮರೋಡಿ ಪೊಲೀಸರಿಗೆ ಮನವಿ ಮಾಡಿದ್ದರು.
ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಬೆಳ್ತಂಗಡಿ ಪೊಲೀಸರು ತಿಮರೋಡಿ ಮನೆಗೆ ತೆರಳಿ ಎರಡನೇ ನೋಟಿಸ್ ಅಂಟಿಸಿ ಸೆ.25ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ. ಇದನ್ನೂ ಓದಿ: ಅಕ್ರಮ ಶಸ್ತ್ರಾಸ್ತ್ರ ಸಂಗ್ರಹಿಸಿಟ್ಟ ಆರೋಪ – ಮಹೇಶ್ ಶೆಟ್ಟಿ ತಿಮರೋಡಿಗೆ ಬಂಧನ ಭೀತಿ
ಸಾಕ್ಷಿಯಾಗಿ ಆಗಮಿಸಿ ಈಗ ಬಂಧನಕ್ಕೆ ಒಳಗಾದ ಚಿನ್ನಯ್ಯನನ್ನು ತಿಮರೋಡಿ ಮನೆಗೆ ಕರೆದುಕೊಂಡು ವಿಶೇಷ ತನಿಖಾ ತಂಡದ ಪೊಲೀಸರು ಮಹಜರು ಮಾಡಿದ್ದರು. ಮಹಜರು ಮಾಡುವ ವೇಳೆ ತಿಮರೋಡಿ ಮನೆಯಲ್ಲಿ ಎರಡು ತಲವಾರು ಮತ್ತು ಒಂದು ಬಂದೂಕು ಪತ್ತೆಯಾಗಿರುವ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಎಸ್ಐಟಿ ಎಸ್ಪಿ ಸಿ.ಎ. ಸೈಮನ್ ಸೆ.16ರಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ARMS ACT 1959(U/S-25(1),25(1-A),24(1-B)(a)) ಅಡಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.