ನವದೆಹಲಿ: ಡಿಸಿಎಂ ಡಿ.ಕೆ ಶಿವಕುಮಾರ್ (DK Shivakumar) ವಿರುದ್ಧ ಆದಾಯ ಮೀರಿ ಅಕ್ರಮ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ವಾಪಸ್ ಪಡೆದ ರಾಜ್ಯ ಸರ್ಕಾರದ ನಿರ್ಧಾರ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ (Supreme Court) ಮುಂದೂಡಿದೆ.
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಸಿಬಿಐ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ನೇತೃತ್ವದ ತ್ರಿಸದಸ್ಯ ಪೀಠ, ಪ್ರಕರಣವನ್ನ ನ್ಯಾ. ಸೂರ್ಯಕಾಂತ್ ನೇತೃತ್ವದ ಪೀಠಕ್ಕೆ ವರ್ಗಾಯಿಸಿತು. ಇದನ್ನೂ ಓದಿ: ಕೇಂದ್ರದ ಅಧಿಕಾರವನ್ನು ರಾಜ್ಯ ಬಳಸುತ್ತಿದೆ, ಜಾತಿ ಸಮೀಕ್ಷೆಗೆ ತಡೆ ನೀಡಿ | ಲಿಂಗಾಯತ, ಒಕ್ಕಲಿಗ, ಕೇಂದ್ರ, ರಾಜ್ಯದ ವಾದ ಏನು?
ಈ ಹಿಂದೆ ಈ ಪ್ರಕರಣ ನ್ಯಾ. ಸೂರ್ಯಕಾಂತ್ ನೇತೃತ್ವದ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ಅಲ್ಲದೇ ಡಿ.ಕೆ ಶಿವಕುಮಾರ್ ಅವರಿಗೆ ಸಂಬಂಧಿಸಿದ ಆದಾಯ ತೆರಿಗೆ ಪ್ರಕರಣವೂ ಬಾಕಿ ಇರುವ ಹಿನ್ನಲೆ ಎಲ್ಲ ಪ್ರಕರಣಗಳ ವಿಚಾರಣೆಯಾಗಲಿದೆ ಎಂದು ಸಿಜೆಐ ಬಿ.ಆರ್ ಗವಾಯಿ ಹೇಳಿದರು.
ನಾನು ಅಮಿತ್ ಶಾರನ್ನು ಭೇಟಿಯಾಗಿಲ್ಲ
ದೆಹಲಿಯಲ್ಲಿ ತಮ್ಮ ವಿರುದ್ಧದ ಪ್ರಕರಣದ ಬಗ್ಗೆ ಮಾತನಾಡಿದ ಡಿಸಿಎಂ ಡಿ.ಕೆ ಶಿವಕುಮಾರ್, ನಮ್ಮ ಪ್ರಕರಣದ ವಿಚಾರಣೆ ಮುಂದೂಡಿಕೆಯಾಗಿದೆ. ಮತ್ತೆ ಬರಬೇಕು ಎಂದರು. ಮೇಕೆದಾಟು ಪ್ರಕರಣ ಮಂಗಳವಾರ ವಿಚಾರಣೆ ನಡೆಯಬೇಕಿದೆ. ಆದರೆ ಬೇರೊಂದು ಪ್ರಕರಣದಲ್ಲಿ ಸಾಂವಿಧಾನಿಕ ಪೀಠ ವಿಚಾರಣೆ ನಡೆಸುತ್ತಿರುವ ಹಿನ್ನಲೆ ಅದೂ ಮುಂದೂಡಿಕೆಯಾಗಿದೆ ಎಂದು ತಿಳಿಸಿದರು.
ಬಳಿಕ ಅಮಿತ್ ಶಾ ಭೇಟಿ ವಿಚಾರ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕೆಲವರಿಗೆ ನನ್ನ ನೆನಪಿಸಿಕೊಳ್ಳದಿದ್ದರೆ ನಿದ್ದೆ ಬರುವುದಿಲ್ಲ. ಅಮಿತ್ ಶಾ ಅವರನ್ನು ಭೇಟಿಯಾಗಲು ನನಗೆ ತಲೆ ಕೆಟ್ಟಿದ್ಯಾ ಎಂದು ಪ್ರಶ್ನಿಸಿದರು.
ಆಲಮಟ್ಟಿ ಎತ್ತರಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸಿಎಂ ಹೇಳಿಕೆಗೆ ಕೇಂದ್ರ ಸಚಿವರು, ಬಿಜೆಪಿ ಸಂಸದರು ಉತ್ತರ ಕೊಡಬೇಕು.ಬೊಮ್ಮಾಯಿ, ಜಗದೀಶ್ ಶೆಟ್ಟರ್, ಕುಮಾರಸ್ವಾಮಿ, ಶೋಭಾ ಕರಂದ್ಲಾಜೆ ಈ ಬಗ್ಗೆ ಮಾತನಾಡಬೇಕು. ಅವರು ಇದಕ್ಕೆಲ್ಲ ಉತ್ತರ ಕೊಡಬೇಕು ಎಂದರು.