ಮಡಿಕೇರಿ: ನೇಣು ಬಿಗಿದು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು (Kodagu) ಜಿಲ್ಲೆಯ ಕುಶಾಲನಗರ (Kushalnagar) ತಾಲೂಕಿನ ಚೆಟ್ಟಳ್ಳಿ ಸಮೀಪದ ಕಂಡಕರೆಯಲ್ಲಿ ನಡೆದಿದೆ.
ಸಂಜನಾ(20) ಆತ್ಮಹತ್ಯೆ ಮಾಡಿಕೊಂಡಿರುವ ಯುವತಿ. ಸೋಮವಾರ (ಸೆ.22) ಮನೆಯ ಎರಡನೇ ಮಹಡಿಯಲ್ಲಿರುವ ರೂಮಿನಲ್ಲಿ ನೇಣಿಗೆ ಶರಣಾಗಿದ್ದಾಳೆ.ಇದನ್ನೂ ಓದಿ: ದಾವಣಗೆರೆ | ಪತ್ನಿಯ ಅಕ್ರಮ ಸಂಬಂಧಕ್ಕೆ ರೋಸಿ 20 ಬಾರಿ ಇರಿದು ಕೊಂದ ಪತಿ
ಚೆಟ್ಟಳ್ಳಿ ಪೊಲೀಸ್ ಠಾಣಾಧಿಕಾರಿ ದಿನೇಶ್ ಅವರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಯುವತಿಯ ತಂದೆ ದೂರು ನೀಡಿದ್ದು, ದೂರಿನ ಆಧಾರದ ಮೇಲೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಸದ್ಯ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಿ, ಪೋಷಕರಿಗೆ ಮೃತದೇಹವನ್ನು ಹಸ್ತಾಂತರ ಮಾಡಲಾಗಿದೆ.ಇದನ್ನೂ ಓದಿ ಹಿಂದೂಗಳ ಜನಸಂಖ್ಯೆ ಕಡಿಮೆ ಮಾಡಲು ಜಾತಿಗಣತಿ: ಎ.ನಾರಾಯಣಸ್ವಾಮಿ ಆಕ್ಷೇಪ