ಬೆಂಗಳೂರು: ನಾಡಿನ ಹಿರಿಯ ಸಾಹಿತಿ ಎಸ್.ಎಲ್ ಭೈರಪ್ಪ (SL Bhyrappa) ಅವರ ನಿಧನ ಬಗ್ಗೆ ಬೆಂಗಳೂರು ರಾಜಾಜಿನಗರದ ರಾಷ್ಟ್ರೋತ್ಥಾನ ಆಸ್ಪತ್ರೆಯ (Rashtrottahana Hospital) ಮೆಡಿಕಲ್ ಅಡ್ಮಿನಿಸ್ಟ್ರೇಟರ್ ಡಾ. ಶೈಲಾ ಅವರು ಅಧಿಕೃತ ಹೇಳಿಕೆಯನ್ನು ನೀಡಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಎರಡು ತಿಂಗಳ ಹಿಂದೆ ಆಯುರ್ವೇದ ಚಿಕಿತ್ಸೆಯನ್ನು ಪಡೆದುಕೊಂಡು, ಆರೋಗ್ಯವಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ಕಳೆದ 3 ದಿನಗಳ ಹಿಂದೆ ಮತ್ತೆ ಸ್ವಲ್ಪ ಅಸ್ವಸ್ಥರಾಗಿ, ಸುಸ್ತು ಹಾಗೂ ಕಾಲುನೋವು ಎಂದು ಆಸ್ಪತ್ರೆಗೆ ದಾಖಲಾಗಿದ್ದರು ಎಂದಿದ್ದಾರೆ. ಇದನ್ನೂ ಓದಿ: ಕನ್ನಡ ಸಾಹಿತ್ಯ ಲೋಕದ ಅಕ್ಷರ ಮಾಂತ್ರಿಕ ಎಸ್‌ಎಲ್ ಭೈರಪ್ಪ ಇನ್ನಿಲ್ಲ
ಇಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಅವರಿಗೆ ಹಠಾತ್ ಆಗಿ ಹೃದಯ ಸ್ತಂಭನವಾಯಿತು. ಅವರನ್ನು ಉಳಿಸಿಕೊಳ್ಳಲು ಸತತ ಪ್ರಯತ್ನಗಳನ್ನು ಮಾಡಲಾಯಿತು. ಆದರೆ ದುರದೃಷ್ಟವಶಾತ್ ಅವರನ್ನು ಉಳಿಸಿಕೊಳ್ಳಸಲು ಸಾಧ್ಯವಾಗಿಲ್ಲ. 2:38 ನಿಮಿಷಕ್ಕೆ ಅವರು ದೈವಾಧೀನರಾದರು ತಿಳಿಸಿದ್ದಾರೆ. ಇದನ್ನೂ ಓದಿ: ಭೈರಪ್ಪನವರ ಬದುಕು ಕೊನೆಯಿಲ್ಲದ ʻಯಾನʼ – ನಟ ಅನಂತನಾಗ್ ಭಾವುಕ
ನಾಳೆ ಬೆಳಗ್ಗೆ 8 ಗಂಟೆಯಿಂದ ಸಾರ್ವಜನಿಕರಿಗೆ ರವೀಂದ್ರ ಕಲಾಮಂದಿರದಲ್ಲಿ ಎಸ್.ಎಲ್ ಭೈರಪ್ಪ ಅವರ ಪಾರ್ಥೀವ ಶರೀರದ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.