– 75 ಲಕ್ಷ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ತಲಾ 10,000 ರೂ. ನೇರ ವರ್ಗಾವಣೆ
ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆ ದಿನಾಂಕ ನಿಗದಿಯಾಗೋದಕ್ಕೂ ಮುನ್ನವೇ ಮಹಿಳಾ ಮತದಾರರಿಗೆ ಬಿಹಾರ ಸರ್ಕಾರ ಬಂಪರ್ ಕೊಡುಗೆ ನೀಡಲು ಮುಂದಾಗಿದೆ. ಪ್ರಧಾನಿ ನರೇಂದ್ರ ಮೋದಿ (PM Modi) ಅವರಿಂದು ಬಿಹಾರದ ಮುಖ್ಯಮಂತ್ರಿ ಮಹಿಳಾ ರೋಜ್‌ಗಾರ್ ಯೋಜನೆಗೆ (Mukhyamantri Mahila Rojgar Yojana) ಚಾಲನೆ ನೀಡಲಿದ್ದಾರೆ.
ವಿಡಿಯೋ ಕಾನ್ಫರೆನ್ಸ್ ಮೂಲಕ ಯೋಜನೆಗೆ ಚಾಲನೆ ನೀಡಲಿದ್ದು, ಬಿಹಾರದಾದ್ಯಂತ 75 ಲಕ್ಷ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ತಲಾ 10,000 ರೂ.ಗಳಂತೆ ಒಟ್ಟು 7,500 ಕೋಟಿ ರೂ.ಗಳನ್ನು ನೇರವಾಗಿ ವರ್ಗಾಯಿಸಲಿದ್ದಾರೆ. ಇದನ್ನೂ ಓದಿ: ಲಡಾಖ್ ಹಿಂಸಾಚಾರ – ಸೋನಮ್ ವಾಂಗ್‌ಚುಕ್ NGO ಪರವಾನಗಿ ರದ್ದು
ಬಿಹಾರ ಸರ್ಕಾರದ ಉಪಕ್ರಮವಾದ ಈ ಯೋಜನೆಯು ಮಹಿಳೆಯರನ್ನು (Bihar Womens) ಆತ್ಮನಿರ್ಭರನ್ನಾಗಿ ಮಾಡುವ ಮತ್ತು ಸ್ವಯಂ ಉದ್ಯೋಗ ಮತ್ತು ಜೀವನೋಪಾಯದ ಅವಕಾಶಗಳ ಮೂಲಕ ಮಹಿಳಾ ಸಬಲೀಕರಣಗೊಳಿಸುವ ಗುರಿ ಹೊಂದಿದೆ. ಇದು ರಾಜ್ಯದ ಪ್ರತಿ ಕುಟುಂಬದ ಓರ್ವ ಮಹಿಳೆಗೆ ಆರ್ಥಿಕ ನೆರವು ನೀಡುತ್ತದೆ. ಈ ಮೂಲಕ ಅವರು ತಮ್ಮ ಆಯ್ಕೆಯ ಉದ್ಯೋಗ ಅಥವಾ ಜೀವನೋಪಾಯ ಚಟುವಟಿಕೆ ಪ್ರಾರಂಭಿಸಲು ಅನುಕೂಲವಾಗುತ್ತದೆ.
ಯೋಜನೆಯಡಿಯಲ್ಲಿ, ಪ್ರತಿ ಫಲಾನುಭವಿಯ ಬ್ಯಾಂಕ್ ಖಾತೆಗೆ ತಲಾ 10,000 ರೂ. ನೇರವಾಗಿ ವರ್ಗಾವಣೆಯಾಗಲಿದೆ. ನಂತರದ ಹಂತಗಳಲ್ಲಿ 2 ಲಕ್ಷ ರೂ.ಗಳ ವರೆಗೆ ಹೆಚ್ಚುವರಿ ಆರ್ಥಿಕ ನೆರವು ಪಡೆಯಬಹುದಾಗಿದೆ. ಈ ನೆರವನ್ನು ಫಲಾನುಭವಿಗಳು ಕೃಷಿ, ಪಶುಸಂಗೋಪನೆ, ಕರಕುಶಲ ವಸ್ತುಗಳು, ಟೈಲರಿಂಗ್, ನೇಯ್ಗೆ ಮತ್ತು ಇತರ ಸಣ್ಣ ಪ್ರಮಾಣದ ಉದ್ಯಮ ಸೇರಿದಂತೆ ತಮ್ಮ ಆಯ್ಕೆಯ ಕ್ಷೇತ್ರಗಳಲ್ಲಿ ಬಳಸಿಕೊಳ್ಳಬಹುದು ಎಂದು ಸರ್ಕಾರ ಸಲಹೆ ನೀಡಿದೆ. ಇದನ್ನೂ ಓದಿ: ಸುಂಕ ಸುಂಕ ಸುಂಕ; ಔಷಧಗಳ ಆಮದಿನ ಮೇಲೆ 100% ಸುಂಕ ಘೋಷಿಸಿದ ಟ್ರಂಪ್ – ಭಾರತಕ್ಕೇನು ಎಫೆಕ್ಟ್?