ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿರುವ ಕಾಂತಾರ ಚಾಪ್ಟರ್-1 (Kantara Chapter 1) ಸಿನಿಮಾ ಇದೇ ಅಕ್ಟೋಬರ್ 2 ರಂದು ವಿಶ್ವದಾದ್ಯಂತ ತೆರೆ ಕಾಣಲು ಸಿದ್ಧವಾಗಿದೆ. ಸದ್ಯ ಟ್ರೈಲರ್ ಮೂಲಕ ಗಮನ ಸೆಳೆದಿರುವ ಕಾಂತಾರ ಸಿನಿಮಾ ತಂಡ ಪ್ಯಾನ್ ಇಂಡಿಯಾ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದೆ. ಹೈದರಾಬಾದ್‌ನಲ್ಲಿ ಇವೆಂಟ್ ಇದೇ ಸೆ.28 ರಂದು ನಡೆಯಲಿದೆ. ಈ ಇವೆಂಟ್‌ಗೆ ಮುಖ್ಯ ಅತಿಥಿಯಾಗಿ ನಟ ಜೂ.ಎನ್‌ಟಿಆರ್ (J.NTR) ಆಗಮಿಸಲಿದ್ದಾರೆ.
View this post on Instagram
ಜೂ.ಎನ್‌ಟಿಆರ್ ಹಾಗೂ ರಿಷಬ್ ಶೆಟ್ಟಿ (Rishab Shetty) ಅವರ ನಡುವೆ ಸಿನಿಮಾ ಇಂಡಸ್ಟ್ರಿ ಸ್ನೇಹ ಹೊರತುಪಡಿಸಿ ವೈಯಕ್ತಿಕವಾಗಿ ಉತ್ತಮವಾದ ಭಾಂದವ್ಯವಿದೆ. ಹೀಗಾಗಿ, ಕಾಂತಾರ ಸಿನಿಮಾದ ಪ್ರಮೋಷನ್‌ನಲ್ಲಿ ಜೂ.ಎನ್‌ಟಿಆರ್ ಭಾಗಿಯಾಗಲಿದ್ದಾರೆ. ಸೆ.28 ರಂದು ಹೈದರಾಬಾದ್‌ನಲ್ಲಿ ಅದ್ದೂರಿಯಾಗಿ ಕಾರ್ಯಕ್ರಮ ನಡೆಯಲಿದ್ದು, ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಸೇರಿದಂತೆ ಇಡೀ ಚಿತ್ರತಂಡ ಪ್ರಚಾರ ಕಾರ್ಯದಲ್ಲಿ ಭಾಗಿಯಾಗಲಿದೆ. ಇದನ್ನೂ ಓದಿ: ಕಾಂತಾರ ಚಾಪ್ಟರ್-1 ಅಡ್ವಾನ್ಸ್ ಬುಕ್ಕಿಂಗ್ ಓಪನ್ಸ್‌ಗೆ ಮುಹೂರ್ತ ಫಿಕ್ಸ್!
ಕಾಂತಾರ ಚಾಪ್ಟರ್-1 ತೆರೆಗೆ ಬರೋಕೆ ಇನ್ನಷ್ಟೇ ದಿನಗಳು ಬಾಕಿ ಇವೆ. ಈ ನಿಟ್ಟಿನಲ್ಲಿ ಚಿತ್ರತಂಡ ದೇಶದಾದ್ಯಂತ ಸಂಚರಿಸಿ ಪ್ರಚಾರವನ್ನ ಭರ್ಜರಿಯಾಗಿ ಮಾಡುತ್ತಿದೆ. ಇಂದಿನಿಂದ (ಸೆ.26) ಕರ್ನಾಟಕದಲ್ಲಿ ಅಡ್ವಾನ್ಸ್ ಟಿಕೆಟ್ ಬುಕ್ಕಿಂಗ್ ಓಪನ್ ಆಗಿದೆ. ಕಾಂತಾರ ಸಿನಿಮಾದ ಟ್ರೈಲರ್‌ಗೆ ಅದ್ಭುತವಾದ ರೆಸ್ಪಾನ್ಸ್ ಸಿಕ್ಕಿದೆ. ಸಿನಿಮಾವನ್ನ ಕಣ್ತುಂಬಿಕೊಳ್ಳಲು ಕಾಯ್ತಿರುವವರಿಗೆ ಕೆಲವೇ ದಿನಗಳಲ್ಲಿ ಕಾಂತಾರ ದರ್ಶನ ಸಿಗಲಿದೆ.
