– ಐವರ ಸ್ಥಿತಿ ಗಂಭೀರ
ಚಂಡೀಗಢ: ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಐವರು ಸಾವನ್ನಪ್ಪಿದ ಘಟನೆ ಹರಿಯಾಣದ (Hariyana) ಕುರುಕ್ಷೇತ್ರ-ಕೈತಾಲ್ ರಸ್ತೆಯಲ್ಲಿ ನಡೆದಿದೆ.
ಮೃತರನ್ನು ಪ್ರವೀಣ್, ಪವನ್, ಅವರ ಪತ್ನಿ ಉರ್ಮಿಳಾ, ರಾಜೇಂದ್ರ ಹಾಗೂ ಸುಮನ್ ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಹಿಟ್ ಅಂಡ್ ರನ್‌ಗೆ ಬಿ.ಕಾಂ ಪದವೀಧರೆ ಬಲಿ
ಸೋಮವಾರ (ಸೆ.29) ಬೆಳಗ್ಗೆ ಭೀಕರ ಅಪಘಾತ ಸಂಭವಿಸಿದೆ. ಐವರು ಟಾಟಾ ಹ್ಯಾರಿಯರ್ ಕಾರಿನಲ್ಲಿ ಅಂಬಾಲಾ ಕಡೆಗೆ ಹೋಗುತ್ತಿದ್ದರು. ಇದೇ ಸಮಯಕ್ಕೆ ಯಮುನಾನಗರ HR 13F 3611 ನೋಂದಣಿ ಸಂಖ್ಯೆ ಹೊಂದಿದ್ದ ಮಾರುತಿ ಸ್ವಿಫ್ಟ್ ಕಾರೊಂದು ಎದುರಿಗೆ ಬಂದಿದ್ದು, ಮುಖಾಮುಖಿ ಡಿಕ್ಕಿಯಾಗಿವೆ. ಪರಿಣಾಮ ಮಾರುತಿ ಸ್ವಿಫ್ಟ್ ಕಾರಿನಲ್ಲಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಐವರ ಸ್ಥಿತಿ ಗಂಭೀರವಾಗಿದೆ. ಎರಡು ಕಾರುಗಳು ಸಂಪೂರ್ಣವಾಗಿ ಜಖಂಗೊಂಡಿವೆ.
ಕೂಡಲೇ ಸ್ಥಳೀಯರು ಕಾರಿನಲ್ಲಿದ್ದ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಇನ್ನೂ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಅಧಿಕಾರಿಗಳ ಮಾಹಿತಿ ಪ್ರಕಾರ, ಅತೀ ವೇಗದಿಂದ ಕಾರು ಚಲಾಯಿಸಿದ್ದಕ್ಕೆ ಅಪಘಾತ ಸಂಭವಿಸಿದೆ ಎಂದು ತಿಳಿಸಿದ್ದಾರೆ. ಸದ್ಯ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.ಇದನ್ನೂ ಓದಿ: ಬೆಂಗಳೂರು | ಮೂರೇ ದಿನದಲ್ಲಿ 37 ದರೋಡೆ – 6 ಜನ ಅಪ್ರಾಪ್ತರ ಗ್ಯಾಂಗ್ ಅರೆಸ್ಟ್