ಚಂಡೀಗಢ: ಯಾವುದೇ ಒಬ್ಬ ವಿದ್ಯಾರ್ಥಿ ತನ್ನ ಗುರಿ ತಲುಪಬೇಕಾದ್ರೆ ಹಿಂದೆ ಶಿಕ್ಷಕರೊಬ್ಬರು ಇರಲೇಬೇಕು. ವಿದ್ಯಾರ್ಥಿಗಳ ತಪ್ಪುಗಳನ್ನು ತಿದ್ದುತ್ತಾ, ಜೀವನಕ್ಕೆ ದಾರಿ ದೀಪವಾಗಬೇಕಿರುವುದು ಶಿಕ್ಷಕರು (Teachers). ಆದ್ರೆ ಇಲ್ಲೊಬ್ಬಳು ಶಿಕ್ಷಕಿ ಅದಕ್ಕೆ ವ್ಯತಿರಿಕ್ತವಾಗಿದ್ದಾಳೆ. ವಿದ್ಯಾರ್ಥಿ ಹೋಂ ವರ್ಕ್ ಮಾಡಿಲ್ಲ ಅನ್ನೋ ಕಾರಣಕ್ಕೆ ಆತನ ಕೈಕಾಲು ಕಟ್ಟಿ, ತಲೆಕೆಳಗಾಗಿ ನೇತು ಹಾಕಿ ಹಿಂಸೆ ನೀಡಿ ಕ್ರೌರ್ಯ ಮೆರೆದಿದ್ದಾಳೆ.
ಹೌದು. ಹರಿಯಾಣದ (Haryana) ಪಾಣಿಪತ್‌ನ ಶ್ರೀಜನ್ ಪಬ್ಲಿಕ್ ಶಾಲೆಯಲ್ಲಿ (Srijan Public School) ಈ ಘಟನೆ ನಡೆದಿದೆ. ವಿದ್ಯಾರ್ಥಿ ಹೋಂ ವರ್ಕ್ ಮಾಡಿಲ್ಲ ಅಂತ ಶಿಕ್ಷಕಿಯೊಬ್ಬಳು ಆತನ ಕೈಕಾಲು ಕಟ್ಟಿ, ತಲೆಕೆಳಗಾಗಿಸಿ ನೇತುಹಾಕಿದ್ದಾಳೆ, ವಿದ್ಯಾರ್ಥಿಯನ್ನ ಚೆನ್ನಾಗಿ ಥಳಿಸಿದ್ದಾಳೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಹಿಟ್ ಅಂಡ್ ರನ್‌ಗೆ ಬಿ.ಕಾಂ ಪದವೀಧರೆ ಬಲಿ
ಆಗಸ್ಟ್ 13ರಂದು ನಡೆದಿದ್ದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಶಾಲಾ ಆಡಳಿಯ ಮಂಡಳಿಗೆ ಈ ವಿಷಯ ತಿಳಿದಿದ್ದೂ ಮುಚ್ಚಿಟ್ಟಿದ್ದರು. ಆದ್ರೆ ಹಲ್ಲೆ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆದಮೇಲೆ ವಿಷಯ ಗೊತ್ತಾಗಿದೆ.
ವಿಡಿಯೋ ಆಧರಿಸಿ ಮಾಡೆಲ್ ಪೊಲೀಸ್ ಠಾಣೆಗೆ ಪೋಷಕರು ದೂರು ನೀಡಿದ್ದಾರೆ. ದೂರು ನೀಡುತ್ತಿದ್ದಂತೆ ಶಿಕ್ಷಕಿ ಕಡೆಯವರು ಎನ್ನಲಾದ ಕೆಲವರು ಪೋಷಕರಿಗೆ ದೂರು ಹಿಂಪಡೆಯುವಂತೆ ಬೆದರಿಕೆ ಹಾಕಿದ್ದಾರೆಂದು ತಿಳಿದುಬಂದಿದೆ. ಇದನ್ನೂ ಓದಿ: TVK Vijay Rally Stampede | ಮದ್ರಾಸ್ ಹೈಕೋರ್ಟ್‌ನಲ್ಲಿಂದು ವಿಚಾರಣೆ – ಸಾವಿನ ಸಂಖ್ಯೆ 41ಕ್ಕೆ ಏರಿಕೆ
ಮತ್ತೊಂದು ವಿಡಿಯೋ ವೈರಲ್
ಇನ್ನೂ ಅದೇ ಶಾಲೆಯಲ್ಲಿ ಇತರ ಮಕ್ಕಳನ್ನು ಥಳಿಸುತ್ತಿರುವ ಇನ್ನೊಂದು ವಿಡಿಯೋ ಸಹ ವೈರಲ್ ಆಗಿದೆ. ಆ ವಿಡಿಯೋದಲ್ಲಿ ಒಬ್ಬ ಶಿಕ್ಷಕಿ ಮಗುವನ್ನ ಹೊಡೆಯುತ್ತಿರುವುದು ಸ್ಪಷ್ಟವಾಗಿ ಕಾಣುತ್ತಿದೆ. ಸತತ ಒಂಬತ್ತು ಬಾರಿ ಮಗುವಿಗೆ ಕಪಾಳಮೋಕ್ಷ ಮಾಡುತ್ತಿದ್ದಾಳೆ. ವಿಡಿಯೋಗಳನ್ನ ವಶಕ್ಕೆ ಪಡೆದು ಪೊಲೀಸರು ತನಿಖೆ ಆರಂಭಿಸಿದ್ದಾರೆ. ಅಲ್ಲದೇ ಚಾಲಕನ ಕೈಯಿಂದಲೂ ಥಳಿಸಿದ್ದಳು ಎನ್ನಲಾಗಿ ಕಾಲೇಜು ಪ್ರಾಂಶುಪಾಲರು ಹಾಗೂ ಬಸ್ ಚಾಲಕನನ್ನ ಬಂಧಿಸಲಾಗಿದೆ.