Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿಜಯದಶಮಿಗೂ ರಾಮಾಯಣಕ್ಕೂ ಇದೆ ನಂಟು- ಪಾಂಡವರಿಗೆ ಏನು ಸಂಬಂಧ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ವಿಜಯದಶಮಿಗೂ ರಾಮಾಯಣಕ್ಕೂ ಇದೆ ನಂಟು- ಪಾಂಡವರಿಗೆ ಏನು ಸಂಬಂಧ?

Bengaluru City

ವಿಜಯದಶಮಿಗೂ ರಾಮಾಯಣಕ್ಕೂ ಇದೆ ನಂಟು- ಪಾಂಡವರಿಗೆ ಏನು ಸಂಬಂಧ?

Public TV
Last updated: October 1, 2025 9:39 pm
Public TV
Share
3 Min Read
RAMAYANA
SHARE

ಅಶ್ವಯುಜ ಶುಕ್ಲಪಾಡ್ಯದಂದು ಆರಂಭಗೊಂಡು ನವರಾತ್ರಿ (Navarathri)  ಹಬ್ಬದ ಒಂಭತ್ತು ದಿನಗಳು ಕಳೆದ ನಂತರ ಬರುವ ಹತ್ತನೇ ದಿನವೇ ‘ದಶಮಿ’. ಇದನ್ನೇ ವಿಜಯ ದಶಮಿ (Vijaya Dashmi) ಎಂದು ಕರೆಯುತ್ತಾರೆ. ಈ ದಿನ ಸಂತೋಷದ ಸಾಂಸ್ಕೃತಿಕ, ಧಾರ್ಮಿಕ, ವೈಭವದ ಮೆರವಣಿಗೆ ದೇಶದೆಲ್ಲೆಡೆ ನಡೆಯುತ್ತದೆ.

ವಿಜಯದಶಮಿಯ ಹಿನ್ನೆಲೆ ಏನು?
ಕಾಡೆಮ್ಮೆ ರೂಪದ ಮಹಿಷಾಸುರ (Mahishura) ದೀರ್ಘ ತಪಸ್ಸು ಮಾಡಿ, ಯಾವುದೇ ಮನುಷ್ಯನಿಂದ, ದೇವರಿಂದ ಅಥವಾ ವಿಶಿಷ್ಟ ಶಕ್ತಿಯಿಂದ ತನ್ನನ್ನು ಸಂಹರಿಸಲು ಸಾಧ್ಯವಾಗಬಾರದು ಎಂದು ಬ್ರಹ್ಮನಿಂದ ವರವನ್ನು ಪಡೆದಿದ್ದನು. ವರ ಸಿಕ್ಕಿದ ಕೂಡಲೇ ಅಹಂಕಾರದಿಂದ ಜನರಿಗೆ ಮತ್ತು ದೇವತೆಗಳಿಗೆ ತೊಂದರೆ ಕೊಡಲು ಆರಂಭಿಸಿದ. ಈತನ ಉಪಟಳವನ್ನು ತಾಳಲಾರದೇ ದೇವತೆಗಳು ಆದಿಶಕ್ತಿಯನ್ನು ಪೂಜಿಸಿ ಮಹಿಷನನ್ನು ಹತ್ಯೆ ಮಾಡುವಂತೆ ಬೇಡಿಕೊಳ್ಳುತ್ತಾರೆ. ಪ್ರಾರ್ಥನೆ ಕೇಳಿದ ದೇವಿ ದುರ್ಗೆಯಾಗಿ ಸಿಂಹದ ಮೇಲೆ ಕುಳಿತು, ಹತ್ತು ಕೈಗಳಲ್ಲಿ ಹತ್ತು ಬಗೆಯ ಆಯುಧಗಳನ್ನು ಹಿಡಿದು ಧರೆಗಿಳಿದಳು. ರಾಕ್ಷಸನಾದ ಮಹಿಷಾಸುರನನ್ನು ದಶಮಿಯ ದಿನ ಸಂಹಾರ ಮಾಡಿದಳು. ಅಂದಿನಿಂದ ದಶಮಿಯಂದು ಮಹಿಷಾಸುರನ್ನು ಕೊಂದು ವಿಜಯ ಸಿಕ್ಕಿದ್ದಕ್ಕೆ `ವಿಜಯದಶಮಿ’ ಹಬ್ಬವನ್ನು ಎಲ್ಲೆಡೆ ಆಚರಿಸಲಾಗುತ್ತಿದೆ.

ರಾಮಾಯಣಕ್ಕೆ ಏನು ಸಂಬಂಧ?
ರಾವಣನನ್ನು ಸಂಹಾರ ಮಾಡುವ ಮೊದಲು ನಾರದರು ರಾಮನಿಗೆ ಶರವನ್ನರಾತ್ರಿ ವ್ರತವನ್ನು ಮಾಡಲು ಹೇಳಿದ್ದರು. ಈ ವ್ರತವನ್ನು ಪೂರ್ಣಗೊಳಿಸಿದ ನಂತರ ರಾಮನು ಲಂಕೆಯ ಮೇಲೆ ಆಕ್ರಮಣ ಮಾಡಿ ಯುದ್ಧದಲ್ಲಿ ರಾವಣನನ್ನು ವಧಿಸಿದನು. ‘ದಶಹರ’ದಂದು ದಶಕಂಠನಾಗಿದ್ದ ರಾವಣನನ್ನು ಶ್ರೀರಾಮನು ಸಂಹರಿಸಿದ ಬಳಿಕ ವಿಜಯೋತ್ಸವ ನಡೆಯಿತು ಎನ್ನುವ ಪ್ರತೀತಿ ಇದೆ. ಹೀಗಾಗಿ ಉತ್ತರಭಾರತ ಕಡೆ ದಸರಾ ಸಮಯದಲ್ಲಿ 10 ದಿನಗಳ ಕಾಲ ರಾಮನ ವಿವಿಧ ಘಟನೆಗಳನ್ನು ವಿವರಿಸುವ ರಾಮಲೀಲಾ ಕಥನ ನಡೆಯುತ್ತದೆ. ದಶಮಿಯಂದು ರಾವಣನ ಆಕೃತಿಯನ್ನು ಸುಡಲಾಗುತ್ತದೆ. ದೆಹಲಿಯಲ್ಲಿ ರಾಷ್ಟ್ರೀಯ ಮಹತ್ವ ಇರುವ ಹಬ್ಬ ಎಂಬಂತೆ ಆಚರಿಸಲಾಗುತ್ತದೆ. ರಾಮಲೀಲಾ ಮೈದಾನದಲ್ಲಿ ಈ ಹಬ್ಬಕ್ಕಾಗಿ ಭಾರೀ ಏರ್ಪಾಡು ನಡೆಯುತ್ತದೆ.

ಪಾಂಡವರಿಗೂ ಏನು ಸಂಬಂಧ?
ದ್ವಾಪರ ಯುಗದಲ್ಲಿ ಪಾಂಡವರು ಹದಿಮೂರು ವರ್ಷಗಳ ವನವಾಸ ಮುಗಿಸಿ ಒಂದು ವರ್ಷ ಅಜ್ಞಾತವಾಸ ಮುಗಿಸಿದ ದಿನವೇ ವಿಜಯದಶಮಿ. ಪಾಂಡವರು ಒಂದು ವರ್ಷದ ಅಜ್ಞಾತವಾಸವನ್ನು ಮತ್ಸ್ಯದೇಶದಲ್ಲಿ ಕಳೆಯಲು ಮುಂದಾಗುತ್ತಾರೆ. ಈ ದೇಶದ ರಾಜನಾದ ವಿರಾಟನ ಆಸ್ಥಾನದಲ್ಲಿ ಆಗ ಧರ್ಮರಾಜ ಕಂಕಭಟ್ಟನಾದರೆ, ಭೀಮ ಬಾಣಸಿಗನಾದ ವಲಲನಾಗಿ ವೇಷ ಬದಲಾಯಿಸುತ್ತಾರೆ. ಅರ್ಜುನ ಬೃಹನ್ನಳೆಯಾಗಿ ನೃತ್ಯ ಶಿಕ್ಷಕಿಯಾಗಿ ನಕುಲ ಸಹದೇವರು ಅನುಕ್ರಮವಾಗಿ ಅಶ್ವಪಾಲಕ-ಗೋಪಾಲಕರಾದರು. ದ್ರೌಪದಿ ಸೈರಂಧ್ರಿಯಾಗಿ ವಿರಾಟನ ಪತ್ನಿಯಾದ ಸುದೇಷ್ಣೆಯ ಸೇವೆಯಲ್ಲಿ ನಿಂತಳು. ಅಜ್ಞಾತವಾಸದ ಕೊನೆಯಲ್ಲಿ ಕುರುಸೇನೆ ವಿರಾಟನ ರಾಜ್ಯದಲ್ಲಿರುವ ಗೋವುಗಳನ್ನು ಅಪಹರಿಸಿತ್ತು. ಈ ಸಮಯದಲ್ಲಿ ವಿರಾಟನ ಪುತ್ರನಾದ ಉತ್ತರಕುಮಾರ ನಾನು ಕುರುಸೇನೆಯನ್ನು ಸೆದೆ ಬಡಿಯುತ್ತೇನೆ ಎಂದು ಹೇಳಿ ಜಂಬ ಕೊಚ್ಚಿಕೊಂಡು ಯುದ್ಧಕ್ಕೆ ಹೊರಟಿದ್ದ. ಬೃಹನ್ನಳೆಯನ್ನು ಸಾರಥಿಯನ್ನಾಗಿ ಮಾಡಿ ಯುದ್ಧಕ್ಕೆ ಕರೆದುಕೊಂಡು ಹೋದ. ಯುದ್ಧದಲ್ಲಿ ಸೋಲು ಸಮೀಪವಾಗುತ್ತಿದೆ ಎಂದಾಗ  ಉತ್ತರ ಕುಮಾರ ಯುದ್ಧದಿಂದ ಹಿಂದಕ್ಕೆ ಸರಿಯುತ್ತೇನೆ. ದಯವಿಟ್ಟು ಇಲ್ಲಿಂದ ತೆರಳೋಣ ಎಂದು ಹೇಳುತ್ತಾನೆ.  ಈ ವೇಳೆ ಬೃಹನ್ನಳೆ ರೂಪದಲ್ಲಿದ್ದ ಅರ್ಜುನ ಅಜ್ಞಾತವಾಸದ ಸಮಯದಲ್ಲಿ ಬನ್ನಿ ಮರದಲ್ಲಿ ಬಚ್ಚಿಟ್ಟಿದ್ದ ಶಸ್ತ್ರಾಸ್ತ್ರವನ್ನು ತೆಗೆದು ವಿರಾಟರಾಜನ ಶತ್ರುಗಳನ್ನು ಸೋಲಿಸುತ್ತಾನೆ. ನವರಾತ್ರಿ ಹಬ್ಬ ಮುಗಿಸಿ ದಶಮಿಯಂದು ಕುರುಸೇನೆಯನ್ನು ವಿರಾಟ ಸೇನೆ ಸೋಲಿಸುತ್ತದೆ. ಈ ವಿಜಯದ ಕುರುಹಾಗಿ ಒಂಭತ್ತನೇ ದಿನ ಆಯುಧ ಪೂಜೆಯನ್ನು ಆಚರಿಸಲಾಗುತ್ತದೆ.

ಕಲಿಯುಗದಲ್ಲೂ ಆಚರಣೆ:
ನವಮಿಯಂದು ಆಯುಧಗಳಿಗೆ ಪೂಜೆ ಮಾಡಿ ದಶಮಿಯಂದು ದಂಡಯಾತ್ರೆಗೆ ಹೊರಟರೆ ವಿಜಯ ಸಿದ್ಧಿ ಎನ್ನುವ ನಂಬಿಕೆ ಈ ಹಿಂದೆ ರಾಜರಲ್ಲಿತ್ತು. ಹೀಗಾಗಿ ದಶಮಿಯಂದೇ ಪೂಜೆ ಸಲ್ಲಿಸಿ ದಂಡಯಾತ್ರೆಗೆ ಹೊರಡುತ್ತಿದ್ದರು. ಈ ಪದ್ದತಿ ಈಗಲೂ ಉಳಿದುಕೊಂಡಿದ್ದು, ಸಾಂಕೇತಿಕವಾಗಿ ಕೆಲ ರಾಜವಂಶಸ್ಥರು ಸಾಂಕೇತಿಕವಾಗಿ ತಮ್ಮ ರಾಜ್ಯದ ಗಡಿಯನ್ನು ದಾಟಿ ಮತ್ತೆ ಹಿಂದಿರುಗುತ್ತಾರೆ. ವಿಜಯನಗರಸಾಮ್ರಾಜ್ಯದ ಕಾಲದಲ್ಲಿ ಆರಂಭವಾದ ಈ ಸೀಮೋಲ್ಲಂಘನ ಮೈಸೂರಿನ ಒಡೆಯರ ಕಾಲದಲ್ಲಿ ಮುಂದುವರಿದಿದೆ.

TAGGED:DasaraMahabahartahRamayanaVijayadashamiದಸರಮಹಾಭಾರತರಾಮಾಯಣವಿಜಯದಶಮಿ
Share This Article
Facebook Whatsapp Whatsapp Telegram

Cinema news

Toxic Teaser
Toxic Teaser | ಡ್ಯಾಡಿ ಈಸ್ ಹೋಮ್ – ಯಶ್ ʻಟಾಕ್ಸಿಕ್ʼ ಕಿಕ್ ಅಬ್ಬಬ್ಬಾ!
Bollywood Cinema Latest Main Post Sandalwood
yash
40ನೇ ವರ್ಷದ ಹುಟ್ಟುಹಬ್ಬ ಸಂಭ್ರಮದಲ್ಲಿ ʻಮಾಸ್ಟರ್‌ಪೀಸ್‌ʼ ರಾಕಿಭಾಯ್‌
Cinema Latest Main Post Sandalwood
Thalapathy Vijay Jana Nayagan
ವಿಜಯ್‌ ಫ್ಯಾನ್ಸ್‌ಗೆ ಶಾಕ್‌; ಜ.9 ಕ್ಕೆ ‘ಜನನಾಯಗನ್‌’ ರಿಲೀಸ್‌ ಆಗಲ್ಲ
Cinema Latest Main Post South cinema
Supreme Court and Ramya
ಪುರುಷರ ಮನಸ್ಸನ್ನು ಅರ್ಥ ಮಾಡ್ಕೊಳ್ಳಕ್ಕೆ ಆಗಲ್ಲ, ಹಾಗಾದ್ರೆ ಎಲ್ಲರನ್ನೂ ಜೈಲಿಗೆ ಹಾಕ್ಬೇಕಾ? – ರಮ್ಯಾ ವಿವಾದಾತ್ಮಕ ಪೋಸ್ಟ್
Latest Sandalwood Top Stories

You Might Also Like

G Parameshwar
Bengaluru City

ಬಳ್ಳಾರಿ ಪ್ರಕರಣವನ್ನು ಸಿಬಿಐಗೆ ವಹಿಸುವ ಅಗತ್ಯತೆ ಇಲ್ಲ: ಪರಮೇಶ್ವರ್

Public TV
By Public TV
13 minutes ago
Siddaramaiah HC Balakrishna
Districts

ಈ ರಾಜ್ಯಕ್ಕೆ ಸಿದ್ದರಾಮಯ್ಯನವರ ಅವಶ್ಯಕತೆ ಇದೆ: ಹೆಚ್‌ಸಿ ಬಾಲಕೃಷ್ಣ

Public TV
By Public TV
33 minutes ago
Zameer Ahmed Khan
Bengaluru City

161 ಮನೆ ನೆಲಸಮ ಆಗಿದೆ, 26 ಜನಕ್ಕೆ ಇವತ್ತೇ ಮನೆ ಕೊಡಬಹುದು: ಜಮೀರ್

Public TV
By Public TV
52 minutes ago
IED neutralised
Latest

ರಾಜೌರಿಯಲ್ಲಿ 4 Kg ಐಇಡಿ ನಿಷ್ಕ್ರಿಯ – ಭಯೋತ್ಪಾದಕರ ಸಂಜು ವಿಫಲ, ತಪ್ಪಿದ ಅನಾಹುತ

Public TV
By Public TV
1 hour ago
Santosh Lad
Dharwad

ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆಯೇ ಬಟ್ಟೆ ಹರಿದುಕೊಂಡಿದ್ದಾಳೆ: ಸಂತೋಷ್ ಲಾಡ್

Public TV
By Public TV
1 hour ago
Traffic Police
Districts

ಸಹ ಸಿಬ್ಬಂದಿಯಿಂದ ಕಿರುಕುಳ – ಸಂಚಾರ ಪೊಲೀಸ್‌ ಠಾಣೆಯಲ್ಲೇ ಹೆಡ್ ಕಾನ್ಸ್ಟೇಬಲ್ ಆತ್ಮಹತ್ಯೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?