– ಪಂಡಿತ್ ಮಿಶ್ರಾ ನಿಧನಕ್ಕೆ ಮೋದಿ ಸಂತಾಪ
ಲಕ್ನೋ: ಹಿಂದೂಸ್ತಾನಿ ಶಾಸ್ತ್ರೀಯ ಗಾಯಕ, ಪದ್ಮವಿಭೂಷಣ ಪುರಸ್ಕೃತ ಪಂಡಿತ್ ಚನ್ನುಲಾಲ್ ಮಿಶ್ರಾ (Pandit Channulal Mishra) ಅವರು ಗುರುವಾರ ಮುಂಜಾನೆ ನಿಧನರಾದರು.
89 ವಯಸ್ಸಿನ ಮಿಶ್ರಾ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಉತ್ತರ ಪ್ರದೇಶದ ಮಿರ್ಜಾಪುರದಲ್ಲಿರುವ ತಮ್ಮ ಮಗಳ ಮನೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮಿಶ್ರಾ ಅವರು ಮಗ ಹಾಗೂ ತಬಲಾ ವಾದಕ ರಾಮಕುಮಾರ್ ಮಿಶ್ರಾ ಮತ್ತು ಮೂವರು ಪುತ್ರಿಯರನ್ನು ಅಗಲಿದ್ದಾರೆ.
सुप्रसिद्ध शास्त्रीय गायक पंडित छन्नूलाल मिश्र जी के निधन से अत्यंत दुख हुआ है। वे जीवनपर्यंत भारतीय कला और संस्कृति की समृद्धि के लिए समर्पित रहे। उन्होंने शास्त्रीय संगीत को जन-जन तक पहुंचाने के साथ ही भारतीय परंपरा को विश्व पटल पर प्रतिष्ठित करने में भी अपना अमूल्य योगदान… pic.twitter.com/tw8jb5iXu7
— Narendra Modi (@narendramodi) October 2, 2025
ವಯೋಸಹಜ ಕಾಯಿಲೆಯಿಂದಾಗಿ ಕಳೆದ 17-18 ದಿನಗಳಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ನಸುಕಿನ 4 ಗಂಟೆ ಸುಮಾರಿಗೆ ಅವರು ಮನೆಯಲ್ಲಿ ನಿಧನರಾದರು ಎಂದು ಪುತ್ರಿ ನಮ್ರತಾ ಮಿಶ್ರಾ ತಿಳಿಸಿದ್ದಾರೆ. ಮಿಶ್ರಾ ಅವರ ಅಂತ್ಯಕ್ರಿಯೆ ಸಂಜೆ 5 ಗಂಟೆಗೆ ವಾರಣಾಸಿಯಲ್ಲಿ ನಡೆಯಲಿದೆ. ಇದನ್ನೂ ಓದಿ: ಅಕ್ಷರ ಗೌಡ, ಸುಧೀರ್ ಆನಂದ್ ಕಾಂಬಿನೇಷನ್‌ನ ತೆಲುಗಿನ `ಹೈಲೆಸ್ಸೂ’ ಚಿತ್ರಕ್ಕೆ ಮುಹೂರ್ತ
ಮಿಶ್ರಾ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. ‘ಹೆಸರಾಂತ ಶಾಸ್ತ್ರೀಯ ಗಾಯಕ ಪಂಡಿತ್ ಚನ್ನುಲಾಲ್ ಮಿಶ್ರಾ ಅವರ ನಿಧನದಿಂದ ನನಗೆ ತೀವ್ರ ದುಃಖವಾಗಿದೆ. ಅವರು ತಮ್ಮ ಜೀವನದುದ್ದಕ್ಕೂ ಭಾರತೀಯ ಕಲೆ ಮತ್ತು ಸಂಸ್ಕೃತಿಯ ಪುಷ್ಟೀಕರಣಕ್ಕೆ ಸಮರ್ಪಿತರಾಗಿದ್ದರು. ಶಾಸ್ತ್ರೀಯ ಸಂಗೀತವನ್ನು ಜನಸಾಮಾನ್ಯರಿಗೆ ತಲುಪಿಸುವುದರ ಜೊತೆಗೆ, ಜಾಗತಿಕ ವೇದಿಕೆಯಲ್ಲಿ ಭಾರತೀಯ ಸಂಪ್ರದಾಯವನ್ನು ಸ್ಥಾಪಿಸಲು ಅವರು ಅಮೂಲ್ಯ ಕೊಡುಗೆ ನೀಡಿದ್ದಾರೆ. ಅವರ ಪ್ರೀತಿ ಮತ್ತು ಆಶೀರ್ವಾದಗಳನ್ನು ಪಡೆದಿರುವುದು ನನ್ನ ಅದೃಷ್ಟ ಎಂದು ಮೋದಿ ತಿಳಿಸಿದ್ದಾರೆ.
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ಶಾಸ್ತ್ರೀಯ ಗಾಯಕನಿಗೆ ಗೌರವ ನಮನ ಸಲ್ಲಿಸಿದ್ದಾರೆ. ಮಿಶ್ರಾ ಅವರಿಗೆ 2010ರ ಜನವರಿ 25 ರಂದು ಭಾರತದ ಮೂರನೇ ಅತ್ಯುನ್ನತ ನಾಗರಿಕ ಗೌರವವಾದ ಪದ್ಮಭೂಷಣ ಪ್ರಶಸ್ತಿಯನ್ನು ನೀಡಲಾಯಿತು. 2020 ರಲ್ಲಿ ಅವರಿಗೆ ಭಾರತದ ಎರಡನೇ ಅತ್ಯುನ್ನತ ನಾಗರಿಕ ಗೌರವ ಪದ್ಮವಿಭೂಷಣ ಪ್ರಶಸ್ತಿ ನೀಡಲಾಯಿತು. ಇದನ್ನೂ ಓದಿ: ದರ್ಶನ್ ಅನುಪಸ್ಥಿತಿಯಲ್ಲಿ ದಸರಾ ಆಯುಧಪೂಜೆ ನೆರವೇರಿಸಿದ ವಿಜಯಲಕ್ಷ್ಮಿ, ಪುತ್ರ