– ಫೋನ್ ಕಾಲ್ ಮೂಲಕ ಖರ್ಗೆ ಜೊತೆ ಮಾತು
ನವದೆಹಲಿ/ಬೆಂಗಳೂರು: ಪೇಸ್‌ಮೇಕರ್ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರಿಗೆ ಕರೆ ಮಾಡಿ ಪ್ರಧಾನಿ ನರೇಂದ್ರ ಮೋದಿ (PM Modi) ಆರೋಗ್ಯ ವಿಚಾರಿಸಿದ್ದಾರೆ.
Spoke to Kharge Ji. Enquired about his health and wished him a speedy recovery.
Praying for his continued well-being and long life.@kharge
— Narendra Modi (@narendramodi) October 2, 2025
ಈ ಕುರಿತು ಮೋದಿ ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಇಂದು ಖರ್ಗೆ ಅವರೊಂದಿಗೆ ಮಾತನಾಡಿದೆ. ಅವರ ಆರೋಗ್ಯ ವಿಚಾರಿಸಿ, ಆದಷ್ಟು ಬೇಗ ಗುಣಮುಖರಾಗುವಂತೆ ಹಾರೈಸಿದ್ದೇನೆ. ಅವರ ಆರೋಗ್ಯ ಹಾಗೂ ದೀರ್ಘಾಯುಷ್ಯಕ್ಕಾಗಿ ದೇವರಲ್ಲಿ ಪಾರ್ಥಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.ಇದನ್ನೂ ಓದಿ: ಕಾಫಿನಾಡಿಗೆ ಹರಿದು ಬಂದ ಪ್ರವಾಸಿಗರ ದಂಡು – ಮುಳ್ಳಯ್ಯನಗಿರಿ ಬಳಿ 5 ಕಿ.ಮೀ ಸಾಲುಗಟ್ಟಿ ನಿಂತ ವಾಹನಗಳು
Medical Update :
The pacemaker implantation procedure for Sri. Kharge was successfully completed earlier today. It was a short and minor procedure and he has been stable after the procedure.
He is expected to resume his work from October 3 and attend all his scheduled…
— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) October 1, 2025
ಉಸಿರಾಟದ ಸಮಸ್ಯೆಯಿಂದಾಗಿ ಬುಧವಾರ (ಅ.1) ಮಲ್ಲಿಕಾರ್ಜುನ ಖರ್ಗೆಯವರನ್ನು ಬೆಂಗಳೂರಿನ ಎಂ.ಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ ನೀಡಿ, ಮಲ್ಲಿಕಾರ್ಜುನ ಖರ್ಗೆ ಅವರು ಪೇಸ್‌ಮೇಕರ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಯಶಸ್ವಿಯಾಗಿ ಪೂರ್ಣಗೊಂಡಿದೆ. ಸದ್ಯ ಅವರು ಆರೋಗ್ಯವಾಗಿದ್ದಾರೆ ಎಂದು ತಿಳಿಸಿದ್ದರು.