– ರಾಷ್ಟ್ರೀಯ ಗ್ರಾಹಕ ಸಹಾಯವಾಣಿ ‘1915’; 17 ಭಾಷೆಗಳಲ್ಲಿ ದೂರು ಸ್ವೀಕಾರ
ನವದೆಹಲಿ: ಕೇಂದ್ರ ಸರ್ಕಾರ ‘Next Gen Gst’ ಸಂಬಂಧಿತ ಪ್ರಶ್ನೆ ಮತ್ತು ದೂರುಗಳನ್ನು ಪರಿಹರಿಸಲೆಂದು ರಾಷ್ಟ್ರೀಯ ಗ್ರಾಹಕ ಸಹಾಯವಾಣಿ (National Consumer Helpline) ತೆರೆದಿದ್ದು, ಈಗಾಗಲೇ 3,900ಕ್ಕೂ ಹೆಚ್ಚು ಸಂಶಯಗಳನ್ನು ನಿವಾರಿಸಿದೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ತಿಳಿಸಿದ್ದಾರೆ.
ಕೇಂದ್ರ ಗ್ರಾಹಕ ವ್ಯವಹಾರಗಳ ಇಲಾಖೆ, ರಾಷ್ಟ್ರೀಯ ಗ್ರಾಹಕ ಸಹಾಯವಾಣಿ 1,915 ತೆರೆದಿದ್ದಲ್ಲದೆ, UMANG ಆಪ್, ವಾಟ್ಸಪ್ ಮತ್ತು ಎಸ್‌ಎಮ್‌ಎಸ್ ಮೂಲಕ ಪ್ರಶ್ನೆ ಮತ್ತು ದೂರುಗಳನ್ನು ಸಲ್ಲಿಸಲು ಅವಕಾಶ ಮಾಡಿಕೊಟ್ಟಿದೆ. 17 ಭಾಷೆಗಳಲ್ಲಿ ಸಾರ್ವಜನಿಕರು ದೂರು-ಸಂಶಯಗಳನ್ನು ಸಿಸಿಪಿಎ ಗಮನಕ್ಕೆ ತರಬಹುದಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಶಿವಮೊಗ್ಗ ದಸರಾ | ಜಂಬೂ ಸವಾರಿಗೆ ಅದ್ದೂರಿ ಚಾಲನೆ
ಕೇಂದ್ರ ಗ್ರಾಹಕ ರಕ್ಷಣಾ ಪ್ರಾಧಿಕಾರ ಈಗಾಗಲೇ ಜಿಎಸ್‌ಟಿ ಸಂಬಂಧಿತ ಕುಂದು-ಕೊರತೆಗಳನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದೆ. ಪ್ರತಿಯೊಬ್ಬ ಗ್ರಾಹಕರ ಹಿತರಕ್ಷಣೆ ಕಾಪಾಡುವಲ್ಲಿ ಬದ್ಧವಾಗಿ ಕಾರ್ಯ ನಿರ್ವಹಿಸುತ್ತಿದ್ದು, ವ್ಯವಹಾರ-ವಹಿವಾಟುಗಳಲ್ಲಿ ಪಾರದರ್ಶಕತೆಯನ್ನು ಖಚಿತಪಡಿಸುತ್ತಿದೆ ಎಂದಿದ್ದಾರೆ. ಇದನ್ನೂ ಓದಿ: ಶೇ.1ರಷ್ಟು ಮೀಸಲಾತಿಗೆ ಆಗ್ರಹ – ದೆಹಲಿಯ ಜಂತರ್ ಮಂತರ್‌ನಲ್ಲಿ ಅಲೆಮಾರಿ ಸಮುದಾಯದಿಂದ ಪ್ರತಿಭಟನೆ
3981 ಸಂಶಯಗಳ ನಿವಾರಣೆ: ‘Next Gen Gst’ ಬಗ್ಗೆ ಗ್ರಾಹಕರಿಗಿರುವ ತಪ್ಪು ಮಾಹಿತಿಯನ್ನು ದೂರ ಮಾಡುವ ಜೊತೆಗೆ ಜಿಎಸ್‌ಟಿ ಸುಧಾರಣೆಗಳ ಪ್ರಯೋಜನವನ್ನು ಪ್ರತಿಯೊಬ್ಬ ಭಾರತೀಯರಿಗೆ ತಲುಪಿಸುವಲ್ಲಿ ಕೇಂದ್ರ ಗ್ರಾಹಕ ರಕ್ಷಣಾ ಪ್ರಾಧಿಕಾರ ಮಹತ್ವದ ಹೆಜ್ಜೆಯಿರಿಸಿದೆ. ಈಗಾಗಲೇ 3,981 ಸಂಶಯಗಳನ್ನು ಸ್ವೀಕರಿಸಿ ನಿವಾರಿಸಿದೆ ಎಂದು ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ. ಇದನ್ನೂ ಓದಿ: ಸಾಲು ಸಾಲು ರಜೆ ಎಫೆಕ್ಟ್ – ಶಿರಾಡಿಘಾಟ್ ರಸ್ತೆಯಲ್ಲಿ ಟ್ರಾಫಿಕ್ ಜಾಮ್, ಹೈರಾಣದ ಪೊಲೀಸರು!