ನವದೆಹಲಿ: ಭಾರತ (India) ಮತ್ತು ಚೀನಾ (China) ಮಧ್ಯೆ 5 ವರ್ಷದ ಬಳಿಕ ನೇರ ವಿಮಾನ (Direct Flights) ಸೇವೆ ಆರಂಭಗೊಳ್ಳಲಿದೆ.
ನಾಗರಿಕ ವಿಮಾನಯಾನ ಅಧಿಕಾರಿಗಳ ನಡುವಿನ ನಿರಂತರ ಚರ್ಚೆಗಳ ನಂತರ ಈ ತಿಂಗಳ ಅಂತ್ಯದ ವೇಳೆಗೆ ನೇರ ವಿಮಾನ ಸೇವೆಗಳನ್ನು ಪುನರಾರಂಭಿಸಲು ಭಾರತ ಮತ್ತು ಚೀನಾ ಒಪ್ಪಿಕೊಂಡಿವೆ.
ಶಾಂಘೈ ಸಹಕಾರ ಸಂಸ್ಥೆ (SCO) ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಮತ್ತು ಅಧ್ಯಕ್ಷ ಕ್ಸಿ ಜಿನ್‌ಪಿಂಗ್ (Xi Jinping) ನಡುವೆ ನಡೆದ ಮಹತ್ವದ ಸಭೆಯ ಬಳಿಕ ವಿಮಾನ ಹಾರಾಟಕ್ಕೆ ಎರಡೂ ದೇಶಗಳು ಒಪ್ಪಿಗೆ ನೀಡಿವೆ. ಇದನ್ನೂ ಓದಿ: ಮೋದಿ ಸರ್ಕಾರದಿಂದ ಪ್ರಜಾಪ್ರಭುತ್ವದ ಮೇಲೆ ದಾಳಿ – ಕೊಲಂಬಿಯಾದಲ್ಲಿ ರಾಹುಲ್ ವಾಗ್ದಾಳಿ
ಅಕ್ಟೋಬರ್ 26 ರಿಂದ ಕೋಲ್ಕತ್ತಾದಿಂದ ಗುವಾಂಗ್‌ಝೌಗೆ ಪ್ರತಿನಿತ್ಯ ಇಂಡಿಗೋ ವಿಮಾನ ಹಾರಾಟ ನಡೆಸಲಿದೆ. ಮೂಲಗಳ ಪ್ರಕಾರ ಏರ್ ಇಂಡಿಯಾ ವರ್ಷಾಂತ್ಯದ ವೇಳೆಗೆ ಚೀನಾಕ್ಕೆ ತನ್ನ ವಿಮಾನ ಸೇವೆಗಳನ್ನು ಪುನರಾರಂಭಿಸುವ ಸಾಧ್ಯತೆಯಿದೆ. ಇದನ್ನೂ ಓದಿ: Chennai | ಅನುಮತಿಯಿಲ್ಲದೆ ಕಾರ್ಯಕ್ರಮ ಆಯೋಜಿಸಿದ 47 RSS ಕಾರ್ಯಕರ್ತರ ಬಂಧನ