ಇಸ್ಲಮಾಬಾದ್: ಭಾರತ (India) ನನ್ನ ಮಾತೃಭೂಮಿ, ಪಾಕ್ ನನ್ನ ಜನ್ಮಭೂಮಿ, ಭಾರತ ನನಗೆ ದೇಗುಲವಿದ್ದಂತೆ ಎಂದು ಪಾಕ್ ಮಾಜಿ ಕ್ರಿಕೆಟಿಗ ಡ್ಯಾನಿಶ್ ಕನೇರಿಯಾ (Danish Kaneria) ಹೇಳಿಕೊಂಡಿದ್ದಾರೆ.
ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ನೀವು ಪಾಕಿಸ್ತಾನದ ಬಗ್ಗೆ ಏಕೆ ಮಾತನಾಡುವುದಿಲ್ಲ? ಭಾರತದ ಆಂತರಿಕ ವಿಷಯಗಳ ಬಗ್ಗೆ ಏಕೆ ಪ್ರತಿಕ್ರಿಯಿಸುತ್ತೀರಿ ಎಂದು ಹಲವರು ನನ್ನನ್ನು ಪ್ರಶ್ನಿಸುತ್ತಾರೆ. ಕೆಲವರು ಭಾರತದ ಪೌರತ್ವಕ್ಕಾಗಿ ನಾನು ಹೀಗೆ ನಡೆದುಕೊಳ್ಳುತ್ತೇನೆ ಎಂದು ಆರೋಪಿಸುತ್ತಿದ್ದಾರೆ. ಇದನ್ನೂ ಓದಿ: ವಿಂಡೀಸ್ ವಿರುದ್ಧ 140 ರನ್‌ಗಳ ಭರ್ಜರಿ ಗೆಲುವು – WTC ಅಂಕಪಟ್ಟಿಯಲ್ಲಿ 3ನೇ ಸ್ಥಾನ ಕಾಯ್ದುಕೊಂಡ ಭಾರತ
Lately, I have seen many people questioning me, asking why I do not speak about Pakistan, why I comment on Bharat’s internal matters, and some even alleging that I do all this for Bharatiya citizenship. I feel it is important to set the record straight.
From Pakistan and its…
— Danish Kaneria (@DanishKaneria61) October 4, 2025
ನನಗೆ ಭಾರತದ ಪೌರತ್ವ ಪಡೆಯುವ ಯಾವ ಆಲೋಚನೆಯೂ ಇಲ್ಲ. ಮುಂದೆ ನನ್ನಂತವರಿಗೆ ಅಂತಹ ಯೋಚನೆ ಬಂದರೆ ಸಿಎಎ ಈಗಾಗಲೇ ಜಾರಿಯಲ್ಲಿದೆ. ಪಾಕಿಸ್ತಾನ (Pakistan) ನನ್ನ ಜನ್ಮಭೂಮಿಯಾಗಿರಬಹುದು ಆದರೆ ಭಾರತ ನನ್ನ ಪೂರ್ವಜರ ಭೂಮಿ, ನನ್ನ ಮಾತೃಭೂಮಿ. ನನ್ನ ಪಾಲಿಗೆ ಭಾರತ ಒಂದು ದೇವಾಲಯದಂತೆ ಎಂದು ಗೌರವಯುತ ಸಾಲುಗಳಲ್ಲಿ ಹಿಂದೂಸ್ಥಾನವನ್ನು ಕೊಂಡಾಡಿದ್ದಾರೆ.
ನನ್ನ ಮಾತುಗಳು ಭಾರತದ ಪೌರತ್ವಕ್ಕಾಗಿ ಎಂಬ ಆರೋಪ ಸಂಪೂರ್ಣ ತಪ್ಪು. ನಾನು ಧರ್ಮದ ಪರವಾಗಿ ನಿಲ್ಲುವುದನ್ನು ಮತ್ತು ನಮ್ಮ ಸಮಾಜವನ್ನು ವಿಭಜಿಸಲು ಪ್ರಯತ್ನಿಸುತ್ತಿರುವ ರಾಷ್ಟ್ರವಿರೋಧಿಗಳು, ಹುಸಿ ಜಾತ್ಯತೀತರ ವಿರುದ್ಧದ ಸಮರವನ್ನು ಮುಂದುವರಿಸುತ್ತೇನೆ.
ಪಾಕಿಸ್ತಾನದ ಜನರಿಂದಲೂ ನಾನು ಪ್ರೀತಿಯನ್ನು ಪಡೆದಿದ್ದೇನೆ. ಆ ಪ್ರೀತಿಯ ಜೊತೆಗೆ, ಬಲವಂತದ ಮತಾಂತರದ ಪ್ರಯತ್ನ, ಪಾಕ್‌ನ ಅಧಿಕಾರಿಗಳು ಮತ್ತು ಪಿಸಿಬಿಯಿಂದ (PCB) ತಾರತಮ್ಯವನ್ನು ಸಹ ಎದುರಿಸಿದ್ದೇನೆ ಎಂದು ತಾವು ಅನುಭವಿಸಿದ ಸಂಕಷ್ಟವನ್ನು ತೋಡಿಕೊಂಡಿದ್ದಾರೆ.
ಕೊನೆಯಲ್ಲಿ ʻಜೈ ಶ್ರೀರಾಮ್ʼ ಘೋಷದೊಂದಿದೆ, ನಾನು ನನ್ನ ಕುಟುಂಬದೊಂದಿಗೆ ಸುರಕ್ಷಿತವಾಗಿ, ಸಂತೋಷವಾಗಿದ್ದೇನೆ. ನನ್ನ ಭವಿಷ್ಯ ಭಗವಾನ್ ರಾಮನ ಕೈಯಲ್ಲಿದೆ ಎಂದು ಅಭಿಮಾನಿಗಳಿಗೆ ಸಂದೇಶ ರವಾನಿಸಿದ್ದಾರೆ. ಇದನ್ನೂ ಓದಿ: ಆಸೀಸ್ ವಿರುದ್ಧ ಸರಣಿಗೆ ಭಾರತ ತಂಡ ಪ್ರಕಟ – ಏಕದಿನ ಕ್ರಿಕೆಟ್‌ಗೆ ಗಿಲ್ ಕ್ಯಾಪ್ಟನ್; ರೋಹಿತ್, ಕೊಹ್ಲಿ ನಿವೃತ್ತಿ ಬಯಸಿದ್ಯಾ ಬಿಸಿಸಿಐ?