ಕೊಪ್ಪಳ: ನವೆಂಬರ್‌ನಲ್ಲಿ ಯಾವ ಕ್ರಾಂತಿಯೂ ನಡೆಯುವುದಿಲ್ಲ. ಅದೆಲ್ಲವೂ ಭ್ರಾಂತಿ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಹೇಳಿದರು.
ಸಿಎಂ ಸಿದ್ದರಾಮಯ್ಯ ಅವರಿಂದು (ಅ.6) ಕೊಪ್ಪಳ (koppal) ಜಿಲ್ಲೆಯಲ್ಲಿ 2005 ಕೋಟಿ ರೂ. ಮೌಲ್ಯದ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕು ಸ್ಥಾಪನೆ ನೆರವೇರಿಸಿದರು. ಕಿಮ್ಸ್ ಬೋಧಕ ಆಸ್ಪತ್ರೆ, ಆಸ್ಪತ್ರೆ ಆವರಣದಲ್ಲಿ ನಂದಿನಿ ಪಾರ್ಲರ್, ಸೂಪರ್ ಸ್ಪೇಷಾಲಿಟಿ ಆಸ್ಪತ್ರೆಯ ಕಟ್ಟಡದ ಶಂಕುಸ್ಥಾಪನೆ, ಇಂದಿರಾ ಕ್ಯಾಂಟೀನ್ ಉದ್ಘಾಟಿಸಿದರು. ಬಳಿಕ ಕೊಪ್ಪಳದ ಹೊಸಪೇಟೆ ರಸ್ತೆಯಲ್ಲಿ ನಡೆಯುತ್ತಿರುವ ಸಾಧನಾ ಸಮಾವೇಶ ಉದ್ಘಾಟಿಸಿದರು.ಇದನ್ನೂ ಓದಿ: ಕೊಪ್ಪಳದ ಕಾಂಗ್ರೆಸ್ ಸಚಿವ, ಸಂಸದ, ಶಾಸಕರು ಮೋಸಗಾರರು: ಸಿಎಂ ಭೇಟಿಗೂ ಮುನ್ನ ಇಕ್ಬಾಲ್ ಅನ್ಸಾರಿ ಬಾಂಬ್
ಕೊಪ್ಪಳದಲ್ಲಿ ಇಂದು ನೂತನ ಇಂದಿರಾ ಕ್ಯಾಂಟೀನ್ ಅನ್ನು ಸಾರ್ವಜನಿಕರ ಬಳಕೆ ಅರ್ಪಿಸಿ, ಬಗೆಬಗೆಯ ತಿಂಡಿ ತಿನಿಸುಗಳನ್ನು ಸೇವಿಸಿದೆ.
ಹಿಂದಿನ ನಮ್ಮ ಸರ್ಕಾರದ ಅವಧಿಯಲ್ಲಿ ಬಡವರು, ವಾಹನ ಚಾಲಕರು, ರೋಗಿಗಳು, ಕೂಲಿ ಕಾರ್ಮಿಕರಿಗೆ ಕೈಗೆಟುಕುವ ದರದಲ್ಲಿ ಗುಣಮಟ್ಟದ ಆಹಾರ ಒದಗಿಸುವ ಉದ್ದೇಶದಿಂದ ನಾನು ಜಾರಿಗೆ ಕೊಟ್ಟ ಇಂದಿರಾ ಕ್ಯಾಂಟೀನ್ ಯೋಜನೆ ಈ… pic.twitter.com/bt0tmdVTI5
— Siddaramaiah (@siddaramaiah) October 6, 2025
ಕೊಪ್ಪಳ ತಾಲೂಕಿನ ಬಸಾಪುರ ಲಘು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನವೆಂಬರ್‌ನಲ್ಲಿ ಸಿಎಂ ಬದಲಾವಣೆ ಸೇರಿದಂತೆ ಯಾವ ಕ್ರಾಂತಿಯೂ ನಡೆಯುವುದಿಲ್ಲ. ಅದೆಲ್ಲವೂ ಬರೀ ಭ್ರಾಂತಿ ಅಷ್ಟೇ. ಸಮಾಜ ನಿರ್ಮಾಣ, ಸರ್ವರ ಅಭಿವೃದ್ಧಿಗೆ ಸಮೀಕ್ಷೆ ಮಾಡುತ್ತಿದ್ದೇವೆ. ಇನ್ನೆರಡು ದಿನದಲ್ಲಿ ಪೂರ್ಣಗೊಳ್ಳಲಿದೆ. ಸಮೀಕ್ಷೆ ವಿರೋಧಿಸುವವರು ಸಮಾಜದ ವಿರೋಧಿಗಳಿಗೆ ಸಮ. ಯೋಜನೆ ರೂಪಿಸಲು ಅಂಕಿ ಅಂಶಗಳು ಬೇಕು. ಸಮೀಕ್ಷೆ ಬೇಡ ಎನ್ನುವ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕೇಂದ್ರ ನಡೆಸುವ ಜಾತಿಗಣತಿ ವಿರೋಧಿಸುತ್ತಾರಾ? ಬದಲಾವಣೆ ಬೇಡದವರು ಬೇಡ ಎನ್ನುತ್ತಾರೆಂದು ಸಮರ್ಥಿಸಿಕೊಂಡರು.
ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರದಲ್ಲಿ ನನ್ನ ನಿಲುವು ಏನು ಇಲ್ಲ. ಕೆಲ ಸ್ವಾಮೀಜಿಗಳು ಈ ಬಗ್ಗೆ ಮಾತನಾಡುತ್ತಿದ್ದಾರೆ. ಇದರಲ್ಲಿ ನಮ್ಮದೇನಿಲ್ಲ ಎಂದರು. ಈ ವೇಳೆ ಕಿವಿಯಲ್ಲಿ ಮಾಹಿತಿ ನೀಡಲು ಬಂದ ಸಚಿವ ತಂಗಡಗಿಗೆ ಸಿದ್ದು ಗದರಿದರು.
* ಕೇಂದ್ರ ಸಚಿವ ವಿ.ಸೋಮಣ್ಣ ಸಮಸಮಾಜದ ವಿರೋಧಿ:
ಮೇಲ್ಜಾತಿಗಳನ್ನು ತುಳಿಯಲು ಸಮೀಕ್ಷೆ ನಡೆಸಲಾಗುತ್ತಿದೆ ಎಂಬ ಕೇಂದ್ರ ಸಚಿವ ಸೋಮಣ್ಣ ಅವರ ಆರೋಪ ಬಾಲಿಶವಾದುದ್ದು. ಜನರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯನ್ನು ನಡೆಸದಿದ್ದರೆ, ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ. ಈ ಸಮೀಕ್ಷೆಯಲ್ಲಿ ಯಾವ ಜಾತಿಯವರನ್ನು ತುಳಿಯುವ… pic.twitter.com/sKDHdVBPJA
— Siddaramaiah (@siddaramaiah) October 6, 2025
ಗ್ಯಾರಂಟಿ ಯೋಜನೆ ಕೆಲ ತಿಂಗಳು ಬಂದ್ ಆಗಿವೆ ಎಂಬ ಪ್ರಶ್ನೆಗೆ ನಿಮಗೆ ಯಾರು ಹೇಳಿದ್ದು? ಎಂದು ಗರಂ ಆದರು. ಇನ್ನೂ ಇದೇ ವೇಳೆ ಸಾವಿನ ಸಿರಪ್ ಬಗ್ಗೆ ಮಾತನಾಡಿ, ಬೇರೆ ರಾಜ್ಯದಲ್ಲಿ ಕೆಮ್ಮಿನ ಸಿರಪ್ ಸೇವಿಸಿ ಮಕ್ಕಳು ಮೃತಪಟ್ಟ ಹಿನ್ನೆಲೆ ರಾಜ್ಯದಲ್ಲಿ ಅಲರ್ಟ್ ಆಗಲು ಆರೋಗ್ಯ ಇಲಾಖೆಗೆ ಸೂಚಿಸಿರುವುದಾಗಿ ತಿಳಿಸಿದರು.
ಕಾರ್ಯಕ್ರಮದಲ್ಲಿ ಎಐಸಿಸಿ ಅದ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಉಸ್ತುವಾರಿ ಸುರ್ಜೆವಾಲಾ ಭಾಗಿಯಾಗಿದ್ದರು ಮತ್ತು ಸಚಿವ ಶರಣಪ್ರಕಾಶ್ ಪಾಟೀಲ್, ಜಮೀರ್ ಅಹಮ್ಮದ್, ಶಿವರಾಜ ತಂಗಡಗಿ, ಗ್ಯಾರಂಟಿ ಸ್ಕೀಂ ಅಧ್ಯಕ್ಷ ಹೆಚ್‌ಎಂ ರೇವಣ್ಣ, ಕೆಕೆಆರ್‌ಡಿಬಿ ಅಧ್ಯಕ್ಷ ಅಜೇಯಸಿಂಗ್ ಸೇರಿ ಶಾಸಕ ರಾಘವೇಂದ್ರ ಹಿಟ್ನಾಳ್ ಸಾಥ್ ನೀಡಿದರು.ಇದನ್ನೂ ಓದಿ: ಮಧ್ಯಪ್ರದೇಶ ಸಿರಪ್ ದುರಂತ; ನಮ್ಮ ರಾಜ್ಯದಲ್ಲಿ ಈ ಸಿರಪ್ ಸರಬರಾಜು ಆಗಿಲ್ಲ: ದಿನೇಶ್ ಗುಂಡೂರಾವ್