ಬೆಂಗಳೂರು: ಪ್ರತ್ಯೇಕ ಲಿಂಗಾಯತ (Lingayat) ಧರ್ಮ ಆಗಬೇಕು, ಆದರೆ ಧರ್ಮ ಒಡೆದ ಆರೋಪ ಕಳೆದ ಬಾರಿ ಸಿದ್ದರಾಮಯ್ಯ (Siddaramaiah) ತಲೆಗೆ ಕಟ್ಟಿದಂತೆ ಈ ಬಾರಿ ಕಟ್ಟಲು ಆಗುವುದಿಲ್ಲ ಎಂದು ಸಚಿವ ಎಂ.ಬಿ.ಪಾಟೀಲ್ (MB Patil) ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಜೈನರು ಸಿಖ್ಖರು ಬೌದ್ಧರಿಂದ ಯಾರಿಗಾದರೂ ತೊಂದರೆ ಆಗಿದೆಯಾ? ಇಲ್ಲವಲ್ಲ, ಹಾಗೆಯೇ ಲಿಂಗಾಯತ ಪ್ರತ್ಯೇಕ ಧರ್ಮ. ಈ ಬಾರಿ ಸಿದ್ದರಾಮಯ್ಯ ತಲೆಗೆ ಕಟ್ಟುವುದಕ್ಕೆ ಆಗುವುದಿಲ್ಲ. ಹಿಂದೆ ಆಟ ಆಡಿದ ಹಾಗೆ ಈಗ ಆಟ ಆಡಲು ಆಗುವುದಿಲ್ಲ. ಭಾನುವಾರ ಹೇಳಿದ್ದೇವೆ, ಭೌಗೋಳಿಕವಾಗಿ ನಾವೆಲ್ಲ ಭಾರತೀಯರು, ಭೌಗೋಳಿಕವಾಗಿ ನಾವೆಲ್ಲ ಹಿಂದೂಗಳು. ಆದರೆ ಇದು ಬಸವ ಧರ್ಮ, ಇಂಡಿಕ್ ರಿಲಿಜಿಯನ್ ಇದರಲ್ಲಿ ಪ್ರಶ್ನೆ ಏನಿದೆ?ಹೋದ ಸಲ ಸಿದ್ದರಾಮಯ್ಯ ತಲೆಗೆ ಕಟ್ಟಿದರು. ಆದರೆ ಈ ಸಲ ಯಾರ ಆಟಗಳೂ ನಡೆಯುವುದಿಲ್ಲ ಎಂದರು. ಇದನ್ನೂ ಓದಿ: ಸಿಎಂ ಅಂತರಂಗದಲ್ಲಿ ಏನಿದೆ? ಪ್ರತ್ಯೇಕ ಧರ್ಮದ ಪರ ಯಾರಿದ್ದಾರೆ ಅಂತ ಸಮಾಜಕ್ಕೆ ಗೊತ್ತಿದೆ: ವಿಜಯೇಂದ್ರ
ನಾವು ಪಾಸಿಟಿವ್ ಆಗಿ ಹೋಗೋಣ. ನಾವು ಲಿಂಗಾಯತ ಧರ್ಮದವರು, ಚತುರ್ವರ್ಣದಿಂದ ಹೊರಗೆ ಉಳಿದಿದ್ದೇವೆ. ಭಾನುವಾರ ಕಾರ್ಯಕ್ರಮ ನಡೆದಿದ್ದು ಮಠಾಧಿಪತಿಗಳ ಒಕ್ಕೂಟದಿಂದ. ಯಾರಿಗೆ ದ್ವಂದ್ವ ನಿಲುವು ಇದೆ, ಅವರನ್ನು ಕರೆಸಿಲ್ಲ. ನೇರವಾಗಿ ಇರುವವರನ್ನು ಕರೆದಿದ್ದಾರೆ. ವೀರಶೈವ ಮಹಾಸಭಾ ಕೂಡ ಒಂದು ಹಂತಕ್ಕೆ ಹತ್ತಿರ ಬಂದಿದೆ. ಅವರೂ ನಮ್ಮೊಂದಿಗೆ ಅರ್ಧ ದಾರಿಗೆ ಬಂದಿದ್ದಾರೆ. ಭಾನುವಾರ ಯಾರೂ ಜಾತಿ ಹೆಸರು ಬರೆಸಿ ಅಂತ ಕೇಳಿಲ್ಲ. ಸಣ್ಣಸಣ್ಣ ಉಪ ಪಂಗಡಗಳನ್ನು ಒಟ್ಟಿಗೆ ಕೊಂಡೊಯ್ಯಬೇಕು. ಇವರೊಂದಿಗೆ ನಾವು ಸಂಬಂಧ ಬೆಳೆಸಿಲ್ಲ. ಎಲ್ಲರನ್ನೂ ಅಪ್ಪಿಕೊಳ್ಳಬೇಕು. ಇವರೆಲ್ಲರಿಗೂ ರಾಜಕೀಯವಾಗಿ ಶಕ್ತಿ ತುಂಬಬೇಕು. ನಾವು ಹಿಂದೂ ವಿರೋಧಿಗಳಲ್ಲ, ವೀರಶೈವ ವಿರೋಧಿಗಳೂ ಅಲ್ಲ. ಜೈನರು ಸಿಖ್ಖರಿಂದ ಯಾರಿಂದಾದರೂ ತೊಂದರೆ ಆಗಿದೆಯಾ? ಆದ್ರೂ ಯಾಕೆ ಲಿಂಗಾಯತರ ಬೆನ್ನು ಬೀಳ್ತೀರಿ? ಕೇಂದ್ರ ಓಬಿಸಿಗೆ ಸೇರಿಸಿ ಎಂಬುದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಸುಪ್ರೀಂ ಸಿಜೆಐ ತಾಯಿ ಆರ್‌ಎಸ್‌ಎಸ್ ಕಾರ್ಯಕ್ರಮದ ಆಹ್ವಾನ ಸ್ವೀಕರಿಸದ್ದಕ್ಕೆ ಕೃತ್ಯ: ಸಂತೋಷ್ ಲಾಡ್