ಚಾಮರಾಜನಗರ: ಹನೂರು ತಾಲೂಕಿನ ಮಲೆ ಮಹದೇಶ್ವರ ವನ್ಯಧಾಮ ವ್ಯಾಪ್ತಿಯ ಪಚ್ಚೆದೊಡ್ಡಿಯಲ್ಲಿ ಹುಲಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಆತನ ಕುಟುಂಬಸ್ಥರೇ ಅರಣ್ಯಾಧಿಕಾರಿಗಳ ವಶಕ್ಕೆ ನೀಡಿದ್ದಾರೆ.
ಪಚ್ಚೆದೊಡ್ಡಿ ಹುಲಿ ಹತ್ತೆ ಪ್ರಕರಣದ ಸಂಬಂಧ ಅರಣ್ಯಾಧಿಕಾರಿಗಳು ಈಗಾಗಲೇ ಪಚ್ಚಮಲ್ಲು, ಗಣೇಶ, ಸಂಪು ಮೂವರನ್ನು ಬಂಧಿಸಿ ನ್ಯಾಯಲಯದ ಮುಂದೆ ಹಾಜರುಪಡಿಸಿ ಕಸ್ಟಡಿಗೆ ಪಡೆದು ಉಳಿದ ನಾಲ್ವರ ಪತ್ತೆಗೆ ಬಲೆ ಬೀಸಿದ್ದರು.
ಈ ನಡುವೆ ಸಿದ್ದು ಕುಟುಂಬಸ್ಥರೇ ಆತನನ್ನು ಅರಣ್ಯಾಧಿಕಾರಿಗಳ ವಶಕ್ಕೆ ನೀಡಿದ್ದರು. ಅಧಿಕಾರಿಗಳು ವಶಕ್ಕೆ ಪಡೆದು ಆತನನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಉಳಿದ ಮೂವರ ಬಂಧನಕ್ಕೂ ಬಲೆ ಬೀಸಿದ್ದಾರೆ.