– 5 ಕೆಜಿ ಅಕ್ಕಿ ಲೆಕ್ಕದಲ್ಲಿ ತೊಗರಿ ಬೇಳೆ, ಎಣ್ಣೆ, ಸಕ್ಕರೆ, ಉಪ್ಪು ವಿತರಿಸಲು ನಿರ್ಧಾರ
ಬೆಂಗಳೂರು: ಬಿಪಿಎಲ್ (BPL Card) ಹಾಗೂ ಅಂತ್ಯೋದಯ ಕಾರ್ಡುಗಳಿಗೆ ಅನ್ನಭಾಗ್ಯದ 10 ಕೆಜಿ ಅಕ್ಕಿ ಬದಲು 5 ಕೆಜಿ ಅಕ್ಕಿ ಹಾಗೂ ಉಳಿದ 5 ಕೆಜಿ ಅಕ್ಕಿ ಲೆಕ್ಕದಲ್ಲಿ ಆಹಾರ ಧಾನ್ಯ ನೀಡಲು ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಮಾಡಿದೆ.
ʻಇಂದಿರಾ ಆಹಾರ ಕಿಟ್ʼ (ಇಂದಿರಾ – ಅನ್ನಭಾಗ್ಯ ಫಲಾನುಭವಿಗಳನ್ನು ಪುನರುಜ್ಜೀವನಗೊಳಿಸಲು ಸಮಗ್ರ ಪೋಷಣೆ ಮತ್ತು ಆಹಾರ ಉಪಕ್ರಮ) ಕಿಟ್ ನೀಡಲು ಸರ್ಕಾರ ನಿರ್ಧರಿಸಿದೆ. ಇದನ್ನೂ ಓದಿ: ಹೆಣ್ಣುಮಕ್ಕಳಿಗೆ ಋತುಚಕ್ರ ರಜೆಗೆ ಕ್ಯಾಬಿನೆಟ್ ಒಪ್ಪಿಗೆ – ತಿಂಗಳಲ್ಲಿ 1 ದಿನ ವೇತನ ಸಹಿತ ರಜೆ
ಅದರಂತೆ ಫಲಾನುಭವಿಗಳಿಗೆ 10 ಕೆಜಿ ಅಕ್ಕಿ ಬದಲಿಗೆ 5 ಕೆಜಿ ಅಕ್ಕಿ ನೀಡಲಾಗುತ್ತದೆ. ಉಳಿದ 5 ಕೆಜಿ ಅಕ್ಕಿ ಲೆಕ್ಕದಲ್ಲಿ ತೊಗರಿ ಬೇಳೆ, ಹೆಸರು ಕಾಳು, ಸಕ್ಕರೆ, ಉಪ್ಪು ತಲಾ 1 ಕೆಜಿ ಹಾಗೂ 1 ಲೀಟರ್ ಅಡುಗೆ ಎಣ್ಣೆ ಪದಾರ್ಥವನ್ನು ಇಂದಿರಾ ಆಹಾರ ಕಿಟ್‌ನಲ್ಲಿ (INDIRA Food Kit) ನೀಡಲಾಗುತ್ತದೆ. ಅನ್ನಭಾಗ್ಯದ ಅಕ್ಕಿ ದುರ್ಬಳಕೆ ತಡೆಯಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವ ಹೆಚ್.ಕೆ.ಪಾಟೀಲ್ (HK Patil) ತಿಳಿಸಿದ್ದಾರೆ. ಇದನ್ನೂ ಓದಿ: ಸಂಪುಟ ಪುನರ್‌ಚನೆ ವದಂತಿ ಬೆನ್ನಲ್ಲೇ ಮೂವರು ಸಚಿವರಿಂದ ಬ್ರೇಕ್‌ಫಾಸ್ಟ್ ಮೀಟಿಂಗ್
ಅಕ್ಕದಾಗಿ ಅನ್ನಭಾಗ್ಯ ಯೋಜನೆ ಅಡಿಯಲ್ಲಿ 5 ಕೆಜಿ ಹೆಚ್ಚುವರಿ ಅಕ್ಕಿ ನೀಡಲು ಆಯವ್ಯಯದಲ್ಲಿ ಹಂಚಿಕೆ ಮಾಡಿರುವ 6,426 ಕೋಟಿ ರೂ.ಗಳಲ್ಲಿ 6,119.52 ಕೋಟಿ ರೂ. ವಚ್ಚದಲ್ಲಿ ಇಂದಿರಾ ಆಹಾರ ಕಿಟ್ ಅನ್ನು ಒದಗಿಸಲು ಬಜೆಟ್ ಮರುಹಂಚಿಕೆ ಮಾಡುವುದಕ್ಕೆ ಅನುಮೋದನೆ ನೀಡಲಾಗಿದೆ. ಇದನ್ನೂ ಓದಿ: 2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಮೈತ್ರಿ ಇಲ್ಲ, ಬಿಎಸ್‌ಪಿ ಏಕಾಂಗಿ ಸ್ಪರ್ಧೆ: ಮಾಯಾವತಿ