– ಕ್ಯಾಬ್ ಚಾಲಕನಿಗೆ ಟೆರರಿಸ್ಟ್ ಎಂದು ನಿಂದನೆ ಆರೋಪ
ಮಂಗಳೂರು: ಕ್ಯಾಬ್ ಚಾಲಕನಿಗೆ ಟೆರರಿಸ್ಟ್ ಎಂದು ಬೈದಿರುವ ಕಾರಣಕ್ಕೆ ಕೇರಳ ಚಿತ್ರರಂಗದ ನಟ ಜಯಕೃಷ್ಣನ್ (Jayakrishan.N) ಅವರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ಅವರೊಂದಿಗೆ ಇದ್ದ ಸಂತೋಷ್ ಅಬ್ರಾಹಂನನ್ನೂ ಬಂಧಿಸಿದ್ದು, ಇನ್ನೋರ್ವ ಆರೋಪಿ ವಿಮಲ್ ನಾಪತ್ತೆಯಾಗಿದ್ದಾರೆ. ಕಳೆದ ಅ.9 ರಂದು ಈ ಮೂವರು ಆ್ಯಪ್ ಮೂಲಕ ಮಂಗಳೂರಿನ ಬಿಜೈಗೆ ಕ್ಯಾಬ್ ಬುಕ್ ಮಾಡಿದ್ದರು. ಅಹ್ಮದ್ ಶಫೀಕ್ ಎಂಬವರು ಕರೆ ಮಾಡಿ ವಿಚಾರಿಸಿದ್ದರು. ಈ ವೇಳೆ ಹಿಂದಿ, ಮಲಯಾಳಂ ಭಾಷೆಯಲ್ಲಿ ಮಾತನಾಡಿದ ಆರೋಪಿಗಳು, ನೀನು ಮುಸ್ಲಿಂ ತೀವ್ರವಾದಿ, ಟೆರರಿಸ್ಟ್ ಎಂದು ಅವಾಚ್ಯವಾಗಿ ಬೈದಿದ್ದಾರೆ ಎಂದು ಈ ಬಗ್ಗೆ ಕ್ಯಾಬ್ ಚಾಲಕ ಅಹ್ಮದ್ ಶಫೀಕ್, ಉರ್ವಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಇದನ್ನೂ ಓದಿ: ಹಿರಿಯ ನಟ ಉಮೇಶ್‌ಗೆ ಕ್ಯಾನ್ಸರ್; 4ನೇ ಸ್ಟೇಜ್‌ನಲ್ಲಿ ಕಾಯಿಲೆ
ಪ್ರಕರಣ ದಾಖಲಿಸಿಕೊಂಡ ಪೊಲೀರು ಇಬ್ಬರನ್ನು ಬಂಧಿಸಿದ್ದು, ಮತ್ತೋರ್ವನಿಗಾಗಿ ಶೋಧ ಕಾರ್ಯ ನಡೆಸಿದ್ದಾರೆ. ಬಿಎನ್‌ಎಸ್ 352, 353(2) ಅಡಿ ಪ್ರಕರಣ ದಾಖಲಾಗಿದೆ.
ಕೇರಳದ ಪ್ರಸಿದ್ಧ ನಟನಿಗೆ ಪೊಲೀಸರ ಗ್ರಿಲ್ ಮಾಡಿದ್ದಾರೆ. ಕಂಠಪೂರ್ತಿ ಕುಡಿದು ಮಾತನಾಡಿದ್ದಾಗಿ ನಟ ಜಯಕೃಷ್ಣನ್ ವಿಚಾರಣೆ ವೇಳೆ ಪೊಲೀಸರಿಗೆ ತಿಳಿಸಿದ್ದಾರೆ. ನಟನ ವಾಯ್ಸ್ ಸ್ಯಾಂಪಲ್ ಸಂಗ್ರಹಕ್ಕೆ ಪೊಲೀಸರು ಮುಂದಾಗಿದ್ದಾರೆ. ಇದನ್ನೂ ಓದಿ: ಎರಡೂವರೆ ಗಂಟೆ ಕಾರು ಚಲಾಯಿಸಿಕೊಂಡು ಹೋಗಿ ‘ಕಾಂತಾರ ಚಾಪ್ಟರ್ 1’ ನೋಡಿದ ಅಟ್ಲೀ