ಬೆಂಗಳೂರು: ಆರ್‌ಎಸ್‌ಎಸ್ (RSS) ರಿಜಿಸ್ಟರ್ ಆಗಿದ್ಯಾ ಎಂದು ಕೇಳಿದ್ರೆ ತಪ್ಪಾ? ಆಗಿದ್ರೆ ದಾಖಲೆ ತಂದು ಮುಖದ ಮೇಲೆ ಬಿಸಾಕಲಿ ಎಂದು ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಟಾಂಗ್ ಕೊಟ್ಟಿದ್ದಾರೆ.
ಬಹಿರಂಗ ಚರ್ಚೆಗೆ ಬನ್ನಿ ಎಂದರೂ ಚರ್ಚೆಗೆ ಬರಲ್ಲ. ಏನಾದ್ರೂ ಕಂಟೆಂಟ್ ಇದ್ರೆ ಬರ್ತಿದ್ರು, ಬರೀ ವೈಯಕ್ತಿಕವಾಗಿ ಮಾತಾಡ್ತಾರೆ. ಆರ್‌ಎಸ್‌ಎಸ್ ರಿಜಿಸ್ಟರ್ ಆಗಿದ್ಯಾ ಎಂದು ಕೇಳಿದ್ರೆ ತಪ್ಪಾ? ದಾಖಲೆ ತಂದು ಮುಖದ ಮೇಲೆ ಬಿಸಾಕಲಿ. ಇವರಿಗೆ ಎಲ್ಲಿಂದ ದೇಣಿಗೆ ಸಿಗುತ್ತಿದೆ? ದೇವಸ್ಥಾನದ ಹುಂಡಿ ಲಾಕ್ ಆಗಿರುತ್ತೆ. ಅದನ್ನ ತಗೆಯಬೇಕಾದ್ರೆ ತಹಶಿಲ್ದಾರ್ ಬರಬೇಕು. ಎಲ್ಲವನ್ನೂ ಪಾರದರ್ಶಕವಾಗಿ ತೆಗೆಯುತ್ತಾರೆ. ಆದರೆ, ಆರ್‌ಎಸ್‌ಎಸ್‌ಗೆ ಎಲ್ಲಿಂದ ದೇಣಿಗೆ ಬರ್ತಿದೆ. ದೇಣಿಗೆ ಮೂಲ ಗೊತ್ತಾಗಬೇಕಲ್ವಾ? ರಾಜ್ಯ, ದೇಶ, ವಿದೇಶದಿಂದ ಬರುತ್ತಿದ್ಯಾ? ಇದರ ಮೂಲ ಗೊತ್ತಾಗಬೇಕಲ್ವಾ? ದೇಶದ ದೊಡ್ಡ ಎನ್‌ಜಿಓ ಅಂತ ಮೋದಿ ಹೇಳ್ತಾರಲ್ವಾ? ಅದರ ಲೆಕ್ಕವನ್ನು ಕೊಡಲಿ ಈಗ. ಸರ್ದಾರ್ ವಲ್ಲಭಬಾಯ್ ಪಟೇಲ್‌ರಿಂದ ಹಿಡಿದು, ಇಂದಿರಾಗಾAಧಿ ವರೆಗೆ ನಾವು ದೊಡ್ಡ ಮನಸ್ಸು ಮಾಡಿಕೊಂಡು ಬಂದ್ವಿ ಅದೇ ತಪ್ಪಾಗಿದೆ ಎಂದು ತಿರುಗೇಟು ನೀಡಿದರು. ಇದನ್ನೂ ಓದಿ: ಕಲ್ಲಡ್ಕ ಪ್ರಭಾಕರ್ ಭಟ್ ಆಗ್ಲಿ, ಅವರಪ್ಪ ಆಗ್ಲಿ ಕಾನೂನು ಒಂದೇ: ಪ್ರಿಯಾಂಕ್ ಖರ್ಗೆ
ಚಿತ್ತಾಪುರದಲ್ಲಿ ಆರ್‌ಎಸ್‌ಎಸ್ ಪಥಸಂಚಲನ ಮಾಡೇ ಮಾಡ್ತೀವಿ ಎಂಬ ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಕಲ್ಲಡ್ಕ ಪ್ರಭಾಕರ್ ಭಟ್ ಆಗಲಿ ಅವರ ಅಪ್ಪ ಆದ್ರೂ ಕಾನೂನು ಒಂದೇ. ಕಲ್ಲಡ್ಕ ಪ್ರಭಾಕರ್ ಭಟ್ ಯಾರು? ಕೋರ್ಟ್‌ಗಿಂತ ಅವರು ದೊಡ್ಡವರಾ? ಕೋರ್ಟ್ ಅನುಮತಿ ಸಿಗದೆ ಪಥಸಂಚಲನ ಮಾಡ್ತಾರಾ? ಮಾಡಲಿ ಆಮೇಲೆ ನೋಡೋಣ. ಅನುಮತಿ ಇಲ್ಲದೆ ಮಾಡಿದ್ರೆ ಸರ್ಕಾರ ಕತ್ತೆ ಕಾಯುತ್ತಾ ಎಂದು ವಾಗ್ದಾಳಿ ನಡೆಸಿದರು.
ಆರ್‌ಎಸ್‌ಎಸ್ ಹೊಗಳೋದು ಬಿಜೆಪಿಯಲ್ಲಿ ಇರುವವರಿಗೆ ಅನಿವಾರ್ಯ. ಬಸವರಾಜ ಬೊಮ್ಮಾಯಿ ಸಾಹೇಬ್ರು ಎಲ್ಲ ಜ್ಞಾನ ಇರುವ ಮನುಷ್ಯ. ಕಾನೂನಿನ ಅರಿವು ಅವರಿಗೆ ತುಂಬಾ ಚೆನ್ನಾಗಿಯೇ ಇದೆ.ಸುಪ್ರಿಂ ಕೋರ್ಟ್ ತನಕ ಬೊಮ್ಮಾಯಿಯವರ ತಂದೆ ಹೋರಾಟ ಮಾಡಿದ್ರು. ಅದೇ ಜಡ್ಜ್‌ಮೆಂಟ್ ನೋಡಿಬಿಟ್ಟರೆ ಬೊಮ್ಮಾಯಿಯವರು ಬಿಜೆಪಿ ಬಿಟ್ಟು ಹೊರಗೆ ಬರುತ್ತಾರೆ ಎಂದು ಟಾಂಗ್ ಕೊಟ್ಟರು. ಇದನ್ನೂ ಓದಿ: ಕೈ ಪಾಳಯದಲ್ಲಿ ರೀಶಫಲ್ V/S ಪವರ್ ಶೇರ್ ಜಟಾಪಟಿ – ಪುನಾರಚನೆ ಸುಳಿವು ಕೊಟ್ಟ ಸಿಎಂ, ಡಿಕೆಶಿಯಿಂದ ಹೈಕಮಾಂಡ್ ದಾಳ
ಭಾರತೀಯ ಸಂಸ್ಕೃತಿಯ ವಾರಸುದಾರರ ಸಂಸ್ಕೃತಿ ಹೇಗಿದೆ ನೋಡಿ. ಇವರ ಸಂಸ್ಕೃತಿ ಇದು. ಇವರೆಲ್ಲ ನಡೆಯಲಾರದ ನಾಣ್ಯಗಳು. ಇವರನ್ನು ಮುಂದೆ ಬಿಟ್ಟು ನಮ್ಮನ್ನು ಟೀಕೆ ಮಾಡಿಸುತ್ತಾರೆ. ಇವರಿಗೆ ಹೇಳುವುದಕ್ಕೆ ಬೇರೆ ವಿಷಯಗಳಿಲ್ಲ. ಅದಕ್ಕೆ ನಮ್ಮ ಬಣ್ಣ, ನಮ್ಮ ಹೇರ್ ಲಾಸ್ ಇದರ ಬಗ್ಗೆಯೇ ಮಾತಾಡ್ತಾರೆ ಎಂದು ಪ್ರತಾಪ್ ಸಿಂಹಗೆ ಪರೋಕ್ಷವಾಗಿ ತಿರುಗೇಟು ನೀಡಿದರು.
ಆರ್‌ಎಸ್‌ಎಸ್ ದೇವರಿಗಿಂತ ದೊಡ್ಡವರಾಗಿಬಿಟ್ಟಿದೆಯಾ? ಆರ್‌ಎಸ್‌ಎಸ್‌ಗೆ ದೇಣಿಗೆ ಕೊಡುವವರು ಯಾರು ಎಂಬ ಮಾಹಿತಿ ಬೇಕು. ಇವರಿಗೆ ಎಲ್ಲಿಂದ ದೇಣಿಗೆ ಬರುತ್ತಿದೆ? ಹೊರ ರಾಜ್ಯ ಹೊರದೇಶದಿಂದ ಬರುತ್ತಿದೆಯಾ? ಮಾಹಿತಿ ಕೊಡಿ. ಒಂದು ದೇವಸ್ಥಾನದ ಹುಂಡಿ ಹಣಕ್ಕೂ ಲೆಕ್ಕ ಇರುತ್ತದೆ. ಹುಂಡಿಗೆ ಎಷ್ಟು ಹಣ ಬಿದ್ದಿದೆ ಎಂಬುದನ್ನು ಎಣಿಸಿ ಲೆಕ್ಕ ಇಡುತ್ತಾರೆ. ಅದನ್ನು ದೇವಸ್ಥಾನದ ಜೀರ್ಣೋದ್ಧಾರಕ್ಕೆ ಬಳಸುತ್ತಾರೆ. ಹಾಗಾದರೆ ಆರ್‌ಎಸ್‌ಎಸ್ ದೇವಸ್ಥಾನ ದೇವರಿಗಿಂತ ದೊಡ್ಡವರಾಗಿಬಿಟ್ಟರಾ ಎಂದು ಪ್ರಶ್ನಿಸಿದರು.
ನನ್ನ ಮಾತಲ್ಲಿ ಹಿಂದೆ ಒಂದು, ಮುಂದೆ ಒಂದು ಇಲ್ಲ. ನಾನು ಸಾರ್ವಜನಿಕವಾಗಿ ಏನು ಮಾತಾಡುತ್ತೀನೋ ಖಾಸಗಿಯಾಗಿಯೂ ಅದನ್ನೇ ಮಾತಾಡ್ತೀನಿ. ನಾನು ಯಾರ ಮೇಲೂ ಪ್ರಭಾವ ಬೀರುತ್ತಿಲ್ಲ. 11 ಸಂಘಟನೆಗಳು ಚಿತ್ತಾಪುರದಲ್ಲಿ ಕಾರ್ಯಕ್ರಮ ಮಾಡಲು ಅನುಮತಿ ಕೋರಿವೆ. ಅದಕ್ಕೆ ಶಾಂತಿ ಸಭೆ ಅಧಿಕಾರಿಗಳು ಮಾಡ್ತಾರೆ. ಅಧಿಕಾರಿಗಳೇ ತೀರ್ಮಾನ ಮಾಡಿ ಕೋರ್ಟ್‌ಗೆ ಸಲ್ಲಿಕೆ ಮಾಡ್ತಾರೆ. ಕೋರ್ಟ್ ಏನು ತೀರ್ಮಾನ ಮಾಡುತ್ತದೆಯೋ ಅದನ್ನೇ ನಾವೂ ಪಾಲನೆ ಮಾಡುತ್ತೇವೆ ಎಂದು ತಿಳಿಸಿದರು.


