ಬೆಂಗಳೂರು: ಒಳ ಮೀಸಲಾತಿ ಅನುಷ್ಠಾನ ಸಂಬಂಧ ಕಾಯ್ದೆ ತರಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ಸಿಎಂ ಸಿದ್ದರಾಮಯ್ಯ (Siddaramaiah) ನೇತೃತ್ವದ ಸಭೆ ಬಳಿಕ ಮಾತಾಡಿದ ಸಚಿವ ಹೆಚ್.ಕೆ ಪಾಟೀಲ್ (HK Patil), ಸರ್ಕಾರ ಈ ವರ್ಷ ಆ.25ರಂದು ಒಳ ಮೀಸಲಾತಿ ಸಂಬಂಧ ಹೊರಡಿಸಿರೋ ಆದೇಶದ ಅನ್ವಯ ಹೇಗೆ ಕ್ರಮ ತೆಗೆದುಕೊಳ್ಳಬೇಕು ಅಂತ ಚರ್ಚೆ ಮಾಡಲಾಗಿದೆ ಅಂತ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಇಂದು ಪರಿಶಿಷ್ಟ ಜಾತಿಗಳ ಒಳ ಮೀಸಲಾತಿಯ ಅನುಷ್ಠಾನದ ಕುರಿತಂತೆ ಇರುವ ಸಮಸ್ಯೆಗಳ ಬಗ್ಗೆ ಸಭೆ ನಡೆಸಿ, ಚರ್ಚಿಸಿದೆ.
ಸಾಮಾಜಿಕ ನ್ಯಾಯದ ಅನುಷ್ಠಾನಕ್ಕೆ ನಾವು ಸದಾ ಬದ್ಧರಿದ್ದು, ಈ ನಿಟ್ಟಿನಲ್ಲಿ ಒಳಮೀಸಲಾತಿ ಜಾರಿ ಒಂದು ಕ್ರಾಂತಿಕಾರಕ ಹೆಜ್ಜೆಯಾಗಿದೆ.
ಸಚಿವರಾದ ಜಿ.ಪರಮೇಶ್ವರ್, ಎಚ್.ಸಿ.ಮಹದೇವಪ್ಪ, ಕೆ.ಎಚ್.ಮುನಿಯಪ್ಪ,… pic.twitter.com/jh0VYfHtML
— Siddaramaiah (@siddaramaiah) October 29, 2025
ಒಳ ಮೀಸಲಾತಿಯನ್ನ (Internal Reservation) ಸಮರ್ಪಕವಾಗಿ ಅನುಷ್ಠಾನ ಮಾಡಲು, ಸೂಕ್ತ ಪ್ರಾತಿನಿಧ್ಯ ಒದಗಿಸಲು ಕಾನೂನು ಮಾಡೋ ಅವಶ್ಯಕತೆ ಇದೆ. ಹೀಗಾಗಿ ಬಿಲ್ ತರಲು ಸರ್ಕಾರ ನಿರ್ಧಾರ ಮಾಡಿದೆ. ನಾಳೆಯ ಕ್ಯಾಬಿನೆಟ್ ನಲ್ಲಿ ಕರಡು ಮಸೂದೆ ಮಂಡಿಸುತ್ತೇವೆ ಅಂತ ತಿಳಿಸಿದರು. ಇದನ್ನೂ ಓದಿ: ಕ್ವಾಂಟಮ್ ಸಿಟಿ ಅಭಿವೃದ್ಧಿ, ಸಹಭಾಗಿತ್ವಕ್ಕೆ ಸ್ವಿಟ್ಜರ್ಲೆಂಡ್ ಕಂಪನಿ, ಸಂಶೋಧನಾ ಸಂಸ್ಥೆಗಳ ಒಲವು: ಸಚಿವ ಬೋಸರಾಜು
ಇಂದು ನನ್ನ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿಯ ಅನುಷ್ಠಾನದ ಕುರಿತಂತೆ ಇರುವ ಸಮಸ್ಯೆಗಳ ಸಭೆ ನಡೆಸಿ, ಸುದೀರ್ಘವಾಗಿ ಚರ್ಚಿಸಲಾಯಿತು.
ಸಭೆಯಲ್ಲಿ ನನ್ನ ಮಾತುಗಳ ಸಾರಾಂಶ:
• ಒಳ ಮೀಸಲಾತಿ ಕುರಿತಾಗಿ ಸಚಿವ ಸಂಪುಟ ಸಭೆಯ ತೀರ್ಮಾನಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗುವುದು. ರೋಸ್ಟರ್… pic.twitter.com/jtGig45Jet
— Siddaramaiah (@siddaramaiah) October 29, 2025
ಇನ್ನು ಅಲೆಮಾರಿ ಸಮುದಾಯ ಹೋರಾಟ ಹಿನ್ನೆಲೆಯಲ್ಲಿ ಆ ಸಮುದಾಯವನ್ನ ಸಮಾಧಾನ ಮಾಡಲು ವಿಶೇಷ ಪ್ಯಾಕೇಜ್ ಘೋಷಣೆಗೆ ಸರ್ಕಾರ ನಿರ್ಧಾರ ಮಾಡಿದೆ. ನಾಳೆ ಕ್ಯಾಬಿನೆಟ್ ನಲ್ಲಿ ಅಲೆಮಾರಿ ಸಮುದಾಯಕ್ಕೆ ಒಂದೂವರೆ ಸಾವಿರದಿಂದ ಎರಡು ಸಾವಿರ ಕೋಟಿ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಣೆಗೆ ಪ್ಲ್ಯಾನ್ ಮಾಡಿದೆ.
ಅಲೆಮಾರಿ ಸಮುದಾಯದ ಅಭಿವೃದ್ಧಿ ನಿಗಮದಡಿ ವಿಶೇಷ ಪ್ಯಾಕೇಜ್ ಮೂಲಕ ನೆರವು ನೀಡಲು ಸರ್ಕಾರ ಚಿಂತನೆ ಮಾಡಿದೆ ಎನ್ನಲಾಗಿದೆ. ಇದರ ನಡುವೆ ಅಲೆಮಾರಿ ಸಮುದಾಯಗಳ ಜೊತೆ ಅಕ್ಟೋಬರ್ 31 ರಂದು ಸರ್ಕಾರ ಸಭೆ ನಡೆಸಲಿದೆ. ಇದನ್ನೂ ಓದಿ: ಕಾಗಿನೆಲೆ ಅಭಿವೃದ್ಧಿಗಾಗಿ 34 ಕೋಟಿ ಮೊತ್ತದ ಕ್ರಿಯಾ ಯೋಜನೆಗೆ ಮಂಜೂರಾತಿ
