ಬೆಂಗಳೂರು: ನಗರದಲ್ಲಿ ಮೂಲ ಸೌಕರ್ಯಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಕ್ಯಾಬಿನೆಟ್‌ನಲ್ಲಿ (Cabinet) ಇಂದು ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಬೆಂಗಳೂರಿಗೆ (Bengaluru) ಒಟ್ಟು 2,296 ಕೋಟಿ ಅನುದಾನಕ್ಕೆ ಒಪ್ಪಿಗೆ ಸಿಕ್ಕಿದೆ. ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ಅನುದಾನ ಒದಗಿಸಲು ಕ್ಯಾಬಿನೆಟ್ ಒಪ್ಪಿಗೆ ನೀಡಿದೆ.
ಸಿಎಂ ಸಿದ್ದರಾಮಯ್ಯ (Siddaramaiah) ಅವರ ನೇತೃತ್ವದಲ್ಲಿಂದು ನಡೆದ ಸಚಿವ ಸಂಪುಟ ಸಮಿತಿ ಸಭೆಯಲ್ಲಿ ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ಅನುದಾನ ಬಿಡುಗಡೆಗೆ ನಿರ್ಧಾರ ಕೈಗೊಳ್ಳಲಾಗಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿರುವ 5 ನಗರ ಪಾಲಿಕೆಗಳಲ್ಲಿನ ವಾರ್ಡ್‌ಗಳಲ್ಲಿ ಮೂಲ ಸೌಕರ್ಯಗಳ ಅಭಿವೃದ್ಧಿಗಾಗಿ ಒಟ್ಟು 2,296 ಕೋಟಿ ಮಂಜೂರಿಗೆ ಅನುಮೋದನೆ ನೀಡಿದೆ. ಇದನ್ನೂ ಓದಿ: ಚಡ್ಡಿ ಹಾಕುತ್ತಿದ್ದಾಗ ಇದ್ದ RSS ಬಿಜೆಪಿ ಪುಡಾರಿಗಳು ಬಂದ ಮೇಲೆ ಬದಲಾವಣೆ ಆಗಿದೆ: ಬೇಳೂರು ಗೋಪಾಲಕೃಷ್ಣ
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿರುವ 5 ಬೆಂಗಳೂರು ನಗರ ಪಾಲಿಕೆಗಳ ವ್ಯಾಪ್ತಿಯ ವಾರ್ಡ್ ಅಭಿವೃದ್ಧಿ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ಅನುಮೋದನೆ ಸಿಕ್ಕಿದ್ದು, 1,055 ಕೋಟಿ ರೂ. ಮೊತ್ತದಲ್ಲಿ ಕಾಮಗಾರಿಗಳನ್ನ ಕೈಗೊಳ್ಳುವ ಕ್ರಿಯಾಯೋಜನೆಗೆ ಆಡಳಿತಾತ್ಮಕ ಅನುಮೋದನೆ ನೀಡಿದೆ.
ಇನ್ನು ವಿಶೇಷ ಮೂಲಭೂತ ಸೌಕರ್ಯ ಬಂಡವಾಳ ಬೆಂಬಲ ಯೋಜನೆ ಅಡಿಯೂ ಹಣ ಮಂಜೂರು ಮಾಡಿದ್ದು, ಜಿಬಿಎ ವ್ಯಾಪ್ತಿಯಲ್ಲಿ ಮುಖ್ಯ ಮತ್ತು ಉಪಮುಖ್ಯ ರಸ್ತೆಗಳ ಡಾಂಬರಿಕರಣ ಕಾಮಗಾರಿಗಳನ್ನು ಕೈಗೊಳ್ಳಲು 1,241 ಕೋಟಿ ಅಂದಾಜು ಮೊತ್ತದಲ್ಲಿ ಕ್ರಿಯಾಯೋಜನೆಗೆ ಆಡಳಿತಾತ್ಮಕ ಅನುಮೋದನೆ ಸಿಕ್ಕಿದೆ. ಇದನ್ನೂ ಓದಿ: ಕಿಡ್ನಿ ರೋಗಿಗಳ ನೆರವಿಗಾಗಿ ʻಬಿರಿಯಾನಿ ಚಾಲೆಂಜ್ʼ – ಕೊಡಗಿನ ಯುವಕರ ತಂಡದಿಂದ ವಿಭಿನ್ನ ಆಲೋಚನೆ!
ಸಂಪುಟ ಸಭೆಯಲ್ಲಿ ಕೆಜೆ ಜಾರ್ಜ್, ಹೆಚ್.ಸಿ ಮಹದೇವಪ್ಪ, ಎಂ.ಬಿ ಪಾಟೀಲ್ ಸೇರಿದಂತೆ ಇತರರು ಉಪಸ್ಥಿತರಿದ್ದರು. ಇದನ್ನೂ ಓದಿ: ವಲ್ಲಭಭಾಯಿ ಪಟೇಲ್‌ಗೆ ಭಾರತ ರತ್ನ ನೀಡಲು ಕಾಂಗ್ರೆಸ್ 41 ವರ್ಷ ವಿಳಂಬ ಮಾಡಿತ್ತು: ಅಮಿತ್ ಶಾ ಕಿಡಿ
 
					


 
		 
		 
		 
		 
		 
		 
		 
		 
		