ಬೆಳಗಾವಿ: ಕೋರ್ಟ್ ಮೆಟ್ಟಿಲೇರಿದ್ದರಿಂದ ತಡೆ ಹಿಡಿಯಲಾಗಿದ್ದ ಬೆಳಗಾವಿ (Belagavi) ಜಿಲ್ಲೆಯ ನಾಲ್ಕು ತಾಲೂಕಿನ ಡಿಸಿಸಿ ಬ್ಯಾಂಕ್ (DCC Bank Election) ನಿರ್ದೇಶಕ ಸ್ಥಾನದ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಜಾರಕಿಹೊಳಿ ಟೀಂ ಮೇಲುಗೈ ಸಾಧಿಸಿದೆ.

ಅಕ್ಟೋಬರ್ 19ರಂದು ಮತದಾನವಾಗಿತ್ತು. ಕೋರ್ಟ್‌ನಲ್ಲಿ ವಿಚಾರಣೆ ಬಾಕಿ ಹಿನ್ನೆಲೆಯಲ್ಲಿ ಫಲಿತಾಂಶ ಬಾಕಿ ಉಳಿದಿತ್ತು. ಇದೀಗ ಬೈಲಹೊಂಗಲ, ಕಿತ್ತೂರು, ನಿಪ್ಪಾಣಿ ಹಾಗೂ ಹುಕ್ಕೇರಿ ತಾಲೂಕಿನ ಫಲಿತಾಂಶ ಪ್ರಕಟವಾಗಿದೆ. ಬೈಲಹೊಂಗಲದಿಂದ ಮಹಾಂತೇಶ ದೊಡ್ಡಗೌಡರ್ 54 ಮತದಿಂದ ಆಯ್ಕೆಯಾಗಿದ್ದರೆ, ಕಿತ್ತೂರಿನಿಂದ ನಾನಾಸಾಹೇಬ್ ಪಾಟೀಲ್ 17 ಮತ ಪಡೆದು ಆಯ್ಕೆಯಾಗಿದ್ದಾರೆ. ಇದನ್ನೂ ಓದಿ: ಅಕ್ರಮ ಹೋಂಸ್ಟೇ, ರೆಸಾರ್ಟ್‌ಗೆ ಅವಕಾಶ ನೀಡುವುದಿಲ್ಲ: ಈಶ್ವರ್ ಖಂಡ್ರೆ
ಇನ್ನು ನಿಪ್ಪಾಣಿಯಿಂದ ಅಣ್ಣಾಸಾಬ್ ಜೊಲ್ಲೆ 71 ಮತ ಪಡೆದು ಆಯ್ಕೆಯಾಗಿದ್ದು, ಹುಕ್ಕೇರಿಯಿಂದ ರಮೇಶ್ ಕತ್ತಿ 59 ಮತ ಪಡೆದು ಆಯ್ಕೆಯಾಗಿದ್ದಾರೆ. ಆ ಮೂಲಕವಾಗಿ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಜಾರಕಿಹೊಳಿ ಟೀಂಗೆ ಸ್ಪಷ್ಟ ಬಹುಮತ ಸಿಕ್ಕಿದೆ. ಇದನ್ನೂ ಓದಿ: ನಾವಿಬ್ಬರು ಮಾತಾಡಿದ್ರಷ್ಟೇ ಬೆಲೆ, ಕ್ರಾಂತಿ ಬಗ್ಗೆ ಯಾರೂ ಮಾತಾಡ್ಬೇಡಿ: ಡಿಕೆಶಿ

