ಬೆಂಗಳೂರು: ನಾಳೆಯಿಂದ (ನ.5) ಬೆಂಗಳೂರು (Bengaluru) ಸೇರಿದಂತೆ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ (Heavy Rain) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.
ಭಾರೀ ಮಳೆ ಹಿನ್ನೆಲೆ ಜನರು ಮತ್ತು ಮೀನುಗಾರರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ದೀಪಾವಳಿ ಹಬ್ಬದ ನಂತರ ಕೆಲ ಜಿಲ್ಲೆಗಳಲ್ಲಿ ಬಿಸಿಲಿನ ಝಳ ಹೆಚ್ಚಾಗಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಬಿಸಿಲು ಹೆಚ್ಚಾಗುತ್ತಿದೆ. ಆದರೆ ನವೆಂಬರ್ 5ರಿಂದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದನ್ನೂ ಓದಿ: ಸಿಡಿದ ರೈತರು – ಕಬ್ಬು ಬೆಳೆ ದರ ನಿಗದಿಗೆ ಆಗ್ರಹಿಸಿ ಬಾಗಲಕೋಟೆ, ಬೆಳಗಾವಿಯಲ್ಲಿ ಪ್ರತಿಭಟನೆ
ಕರಾವಳಿ ಮತ್ತು ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಬುಧವಾರದಿಂದ 2 ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇದನ್ನೂ ಓದಿ: ಎಂಜಿನಿಯರ್‌ಗಳಿಗೆ ಅನಧಿಕೃತ ಕಟ್ಟಡ ತೆರವು ಟಾರ್ಗೆಟ್ – ವಾರಕ್ಕೆ ಒಂದು ಕಡೆಯಂತೆ 8 ವಿಭಾಗದಿಂದ ತೆರವು ಆಪರೇಷನ್

