ಬೆಂಗಳೂರು: ಕಬ್ಬು ಬೆಳೆಗಾರರಿಗೆ ನ್ಯಾಯಯುತ ದರ ನಿಗದಿ ಮಾಡದಿದ್ರೆ ನಾಳೆ ಜನ್ಮದಿನವಿದ್ದರೂ ಹೋರಾಟ ಮಾಡುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ತಿಳಿಸಿದರು.
ಬೆಳಗಾವಿಯಲ್ಲಿ (Belagavi) ನಡೆಯುತ್ತಿರುವ ಕಬ್ಬು ಬೆಳೆಗಾರರ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಇಂದು ಸಂಜೆ ಒಳಗಾಗಿ ರಾಜ್ಯ ಸರ್ಕಾರ ಸ್ಥಳಕ್ಕೆ ಉಸ್ತುವಾರಿ ಸಚಿವರನ್ನಾಗಲಿ, ಸಕ್ಕರೆ ಸಚಿವರನ್ನಾಗಲಿ ಅಥವಾ ಮುಖ್ಯಮಂತ್ರಿಗಳೇ ಖುದ್ದಾಗಿ ಸ್ಥಳಕ್ಕೆ ಆಗಮಿಸಿ ಕಬ್ಬು ಬೆಳೆಗಾರರ ನ್ಯಾಯಯುತ ದರ ನಿಗದಿ ಮಾಡಬೇಕು ಎಂದು ಆಗ್ರಹಿಸಿದರು.ಇದನ್ನೂ ಓದಿ: ಕಬ್ಬು ಬೆಳೆ ಬೆಲೆ ನಿಗದಿಗೆ ಆಗ್ರಹ – ಕಟ್ಟೆಯೊಡೆದ ರೈತರ ಕಿಚ್ಚು; ವಿವಿಧ ಜಿಲ್ಲೆಗಳಲ್ಲಿ ಪ್ರತಿಭಟನೆ
“ಕಬ್ಬು ಬೆಳೆಗಾರ ರೈತರ ನ್ಯಾಯೋಚಿತ ಬೇಡಿಕೆಗಳು ಈಡೇರುವವರೆಗೂ ಹೋರಾಟ”
ಪ್ರತಿ ಟನ್ ಕಬ್ಬಿಗೆ ಯೋಗ್ಯ ದರ ನಿಗದಿ ಸೇರಿದಂತೆ ವಿವಿಧ ನ್ಯಾಯೋಚಿತ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬೆಳಗಾವಿ ಜಿಲ್ಲೆಯ ಗುರ್ಲಾಪುರ ಕ್ರಾಸ್ ಬಳಿ ನಡೆಯುತ್ತಿರುವ ಆಹೋರಾತ್ರಿ ಹೋರಾಟದಲ್ಲಿ ಭಾಗವಹಿಸಿ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಲಾಯಿತು. ಬೆಳಗಾವಿ,… pic.twitter.com/8NLvpKurQP
— Vijayendra Yediyurappa (@BYVijayendra) November 4, 2025
ನಾಳೆಯೂ ರೈತರ ಜೊತೆಯಾಗಿ ಹೋರಾಟದಲ್ಲಿ ಧುಮುಕುತ್ತೇನೆ. ನಾಳೆ ನನ್ನ ಜನ್ಮದಿನವಿದ್ದರೂ ಕಣ್ಣೀರು ಸುರಿಸುತ್ತಿರುವ ರೈತರಿಗೆ ನಾಳೆ ಮೀಸಲಿಡುತ್ತೇನೆ. ಒಂದು ವೇಳೆ ನಾಳೆಯು ಬಗೆಹರಿಯದಿದ್ದರೆ ರಾಜ್ಯಾದ್ಯಂತ ರೈತರ ಕಿಡಿ ಹರಡುತ್ತದೆ ಎಂದು ಎಚ್ಚರಿಸಿದರು.

