ಬೀದರ್: ದೇವರ ದರ್ಶನ ಮುಗಿಸಿ ವಾಪಸಾಗುತ್ತಿದ್ದಾಗ ಭೀಕರ ರಸ್ತೆ ಅಪಘಾತ ಸಂಭವಿಸಿ ನಾಲ್ವರು ಸಾವನ್ನಪ್ಪಿದ ಘಟನೆ ಬೀದರ್ (Bidar) ಜಿಲ್ಲೆಯ ಭಾಲ್ಕಿ (Bhalki) ತಾಲೂಕಿನ ನೀಲಮ್ಮನಳ್ಳಿ ತಾಂಡಾ ಬಳಿ ನಡೆದಿದೆ.
ಮೃತ ದುರ್ದೈವಿಗಳನ್ನು ತೆಲಂಗಾಣ ಮೂಲದ ಜಗನ್ನಾಥಪುರ ಗ್ರಾಮದವರಾದ ರಾಚಪ್ಪ, ನವೀನ್, ಕಾಶೀನಾಥ್ ಮತ್ತು ನಾಗರಾಜ್ ಎಂದು ಗುರುತಿಸಲಾಗಿದೆ.ಇದನ್ನೂ ಓದಿ: ಪಿಯುಸಿ ಮಕ್ಕಳಿಗೂ ಇನ್ಮುಂದೆ ಮಧ್ಯಾಹ್ನದ ಬಿಸಿಯೂಟ?
ಕಾರು ಮತ್ತು ಗೂಡ್ಸ್ ವಾಹನ ಮುಖಾಮುಖಿ ಡಿಕ್ಕಿಯಾಗಿದ್ದು, ಪರಿಣಾಮ ಕಾರಿನಲ್ಲಿದ್ದ ಐವರ ಪೈಕಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಂಭೀರವಾಗಿದ್ದ ಇಬ್ಬರನ್ನು ಬೀದರ್‌ನ ಬ್ರಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿತ್ತು. ಈ ವೇಳೆ ಚಿಕಿತ್ಸೆ ಫಲಕಾರಿಯಾಗದೇ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ. ಇನ್ನೋರ್ವ ವ್ಯಕ್ತಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಂಗಳವಾರ (ನ.4) ಜಗನ್ನಾಥಪುರದಿಂದ ಗಾಣಗಾಪುರ ದತ್ತಾತ್ರೇಯ ದೇವರ ದರ್ಶನಕ್ಕೆ ಹೋಗಿದ್ದು, ಬುಧವಾರ ದೇವರ ದರ್ಶನ ಮುಗಿಸಿ ವಾಪಸ್ ಜಗನ್ನಾಥಪುರಕ್ಕೆ ತೆರಳುತ್ತಿದ್ದರು. ಈ ವೇಳೆ ದುರ್ಘಟನೆಯಾಗಿದೆ.
ಧನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆಯಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.ಇದನ್ನೂ ಓದಿ: ಚಿತ್ತಾಪುರ ಆರ್‌ಎಸ್‌ಎಸ್ ಪರೇಡ್‌ಗೆ ಹೊಸ ಪ್ರಸ್ತಾಪ- ನ.13 ಅಥವಾ 16ಕ್ಕೆ ಅನುಮತಿ ಕೋರಿಕೆ

