ಬೆಂಗಳೂರು: ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ ಮತ್ತೆ ಹೈಕೋರ್ಟ್ (High Court) ಮೆಟ್ಟಿಲೇರಿದೆ. ಸೌಜನ್ಯ ತಾಯಿ (Sowjanya Mother) ಕುಸುಮಾವತಿ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (PIL) ಸಲ್ಲಿಸಿದ್ದು, ಅನಾಥ ಶವ ಮತ್ತು ನಾಪತ್ತೆ ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಗೆ ಮನವಿ ಮಾಡಿದ್ದಾರೆ.
ಮಾಹಿತಿಗಳ ಪ್ರಕಾರ 74 ನಾಪತ್ತೆ ಪ್ರಕರಣಗಳು ದಾಖಲಾಗಿವೆ. ಈ ಎಲ್ಲಾ ನಾಪತ್ತೆಯನ್ನು ಎಫ್‌ಐಆರ್ ಆಗಿ ಪರಿವರ್ತಿಸಬೇಕು ಎಂದು ಕುಸುಮಾವತಿ (Kusumavathi) ಮನವಿ ಮಾಡಿದ್ದಾರೆ.
ಧರ್ಮಸ್ಥಳದಲ್ಲಿ ನೂರಾರು ಮೃತ ದೇಹಗಳನ್ನು ಹೂತಿಟ್ಟಿದ್ದಾರೆ ಎನ್ನಲಾದ ಪ್ರಕರಣದ ಬಗ್ಗೆ ವಿಶೇಷ ತನಿಖಾ ತಂಡ (SIT) ನಡೆಸುತ್ತಿದ್ದ ತನಿಖೆಗೆ ಹೈಕೋರ್ಟ್ ತಡೆ ನೀಡಿದೆ. ಈ ಮಧ್ಯೆ ಕುಸುಮಾವತಿ ಹೊಸ ಅರ್ಜಿ ಸಲ್ಲಿಸುವ ಮೂಲಕ ಪ್ರಕರಣ ಮತ್ತೊಂದಿಷ್ಟು ಕುತೂಹಲ ಮೂಡಿಸಿದೆ. ಇದನ್ನೂ ಓದಿ: ಧರ್ಮಸ್ಥಳ ಬುರುಡೆ ಕೇಸ್‌ಗೆ ಮಹಿಳಾ ಆಯೋಗ ಮತ್ತೆ ಎಂಟ್ರಿ; ಎಸ್‌ಐಟಿ ವಿರುದ್ಧ ಅಸಮಾಧಾನ
ಪ್ರಕರಣ ಸಂಬಂಧ ಪ್ರಕರಣದಲ್ಲಿ ದೂರು ದಾರರಾಗಿರುವ ವಿಠಲಗೌಡ, ಗಿರೀಶ್ ಮಟ್ಟಣ್ಣವರ್, ಮಹೇಶ್ ತಿಮರೋಡಿ ಮತ್ತು ಟಿ.ಜಯಂತ್ ಅವರುಗಳಿಗೆ ಕಿರುಕುಳ ನೀಡಬಾರದು ಎಂದು ನ್ಯಾಯಪೀಠ ಈ ಹಿಂದೆ ಪೊಲೀಸರಿಗೆ ಸೂಚನೆ ನೀಡಿತ್ತು. ಇದನ್ನೂ ಓದಿ: ಬುರುಡೆ ಗ್ಯಾಂಗ್‌ಗೆ ತಾತ್ಕಾಲಿಕ ರಿಲೀಫ್ – ನ.12ರವರೆಗೆ ಎಸ್‌ಐಟಿ ತನಿಖೆಗೆ ಹೈಕೋರ್ಟ್ ತಡೆ
ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ತಮ್ಮ ವಿರುದ್ಧ ದಾಖಲಿಸಿರುವ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಬೆಳ್ತಂಗಡಿ ಪೊಲೀಸರು ಜಾರಿ ಮಾಡಿದ್ದ ನೋಟಿಸ್ ಪ್ರಶ್ನಿಸಿ ಗಿರೀಶ್ ಮಟ್ಟಣ್ಣವರ್, ಮಹೇಶ್ ಶೆಟ್ಟಿ ತಿಮರೋಡಿ, ಟಿ.ಜಯಂತ್ ಮತ್ತು ವಿಠಲ್‌ಗೌಡ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ.ಎಂ.ನವಾಜ್ ಅವರಿದ್ದ ನ್ಯಾಯಪೀಠ ಈ ಆದೇಶವನ್ನು ಜಾರಿ ಮಾಡಿತ್ತು.


