– ಯುವಕನ ಮನೆ ಮುಂದೆ ಶವವಿಟ್ಟು ಪ್ರತಿಭಟಿಸಿದ ಮೃತಳ ಕುಟುಂಬಸ್ಥರು
ಹಾವೇರಿ: ಪರಸ್ಪರ ನಾಲ್ಕು ವರ್ಷಗಳ ಕಾಲ ಪ್ರೀತಿಸಿ, ಮದುವೆಯಾಗುತ್ತೇನೆ ಅಂತಾ ನಂಬಿಸಿ ಯುವಕ ದೈಹಿಕ ಸಂಪರ್ಕ ಬೆಳೆಸಿ ಗರ್ಭಿಣಿ ಮಾಡಿದ್ದ. ಆದರೆ ಈಗ ಮದುವೆಯಾಗಲು ನಿರಾಕರಿಸಿದ್ದಕ್ಕೆ ಯುವತಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಸದ್ಯ ಯುವತಿಯ ಕುಟುಂಬಸ್ಥರು ಯುವಕನ ಮನೆಯ ಮುಂದೆ ಶವವಿಟ್ಟು ಪ್ರತಿಭಟನೆ ನಡೆಸಿದ್ದಾರೆ
ಈ ಘಣನೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಕುದರಿಹಾಳ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ಯುವತಿಯನ್ನು ಬ್ಯಾಡಗಿ ತಾಲೂಕಿನ ಶಂಕ್ರಿಕೊಪ್ಪ ಗ್ರಾಮದ ನಿವಾಸಿಯಾಗಿರುವ ಸಿಂದೂ (25) ಎಂದು ಗುರುತಿಸಲಾಗಿದೆ.
ಹಲಗೇರಿ ಗ್ರಾಮದ ಅಜ್ಜ-ಅಜ್ಜಿ ಮನೆಯಲ್ಲಿದ್ದು, ವಿದ್ಯಾಭ್ಯಾಸ ಮಾಡುತ್ತಿದ್ದಳು. ಈ ವೇಳೆ ಸಿಂದೂಗೆ ಗೆಳೆತಿಯ ಮೂಲಕ ಶರತ್ ಪರಿಚಯಾಗಿತ್ತು. ಪರಿಚಯ ಪ್ರೀತಿಯಾಗಿ ಪರಸ್ಪರ ಇಬ್ಬರೂ ನಾಲ್ಕು ವರ್ಷಗಳಿಂದ ಪ್ರೀತಿಸುತ್ತಿದ್ದರು. ಈ ಸಮಯದಲ್ಲಿ ಶರತ್ ಮದುವೆಯಾಗುವುದಾಗಿ ನಂಬಿಸಿ, ದೈಹಿಕ ಸಂಪರ್ಕ ಬೆಳೆಸಿದ್ದು, ಯುವತಿ ಗರ್ಭಿಣಿಯಾಗಿದ್ದಳು. ಇದೀಗ ಮದುವೆಯಾಗು ಅಂದಿದ್ದಕ್ಕೆ ಶರತ್ ನಿರಾಕರಿಸಿದ್ದ. ಇದರಿಂದ ಮನನೊಂದ ಯುವತಿ ಸಿಂದೂ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಇದರಿಂದ ರೊಚ್ಚಿಗೆದ್ದ ಕುಟುಂಬಸ್ಥರು ಮೃತದೇಹವನ್ನ ಕುದುರಿಹಾಳ ಗ್ರಾಮದ ಯುವಕ ಶರತ್ ಮನೆಯ ಮುಂದೆ ಇಟ್ಟು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಪೊಲೀಸರು ಹಣದ ಆಮೀಷೆ ತೋರಿಸಿ, ರಾಜಿ ಪಂಚಾಯತಿ ಮಾಡಲು ಮುಂದಾಗಿದ್ದಾರೆ. ಇತ್ತ ಯುವಕನ ಕುಟುಂಬಸ್ಥರು ಮನೆಗೆ ಬೀಗ ಹಾಕಿ, ಪರಾರಿಯಾಗಿದ್ದಾರೆ.

