ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿರುವ (Parappana Agrahara Jail ) ಕೈದಿಗಳಿಗೆ ರಾಜಾತಿಥ್ಯದ ವಿಡಿಯೋ ಬಿಡುಗಡೆಯಾದ ಬೆನ್ನಲ್ಲೇ ದರ್ಶನ್ (Darshan) ಆಪ್ತ ಗೆಳೆಯ ನಟ ಧನ್ವೀರ್‌ಗೆ (Dhanveer)
ಈಗ ಸಂಕಷ್ಟ ಎದುರಾಗಿದೆ.
ವಿಡಿಯೋ ಬಿಡುಗಡೆಯಾದ ಪ್ರಕರಣ ಪೊಲೀಸ್ ಇಲಾಖೆಗೆ ಮುಜುಗರ ತಂದ ಬೆನ್ನಲ್ಲೇ ಸಿಸಿಬಿ ಪೊಲೀಸರು (CCB Police) ಈಗ ಧನ್ವೀರ್ ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಈ ವಿಡಿಯೋಗಳನ್ನು ಧನ್ವೀರ್ ಬಿಡುಗಡೆ ಮಾಡಿದ್ದಾರೆ ಎಂಬ ಅನುಮಾನದ ಹಿನ್ನೆಲೆಯಲ್ಲಿ ಅವರನ್ನು ವಿಚಾರಣೆಗೆ ಒಳಪಡಿಸಲಾಗುತ್ತಿದೆ. ಇದನ್ನೂ ಓದಿ: ಐಸಿಸ್‌ಗೆ ಮುಸ್ಲಿಂ ಯುವಕರನ್ನ ನೇಮಿಸುತ್ತಿದ್ದ ಉಗ್ರನಿಗೆ ಬೆಂಗಳೂರು ಸೆಂಟ್ರಲ್ ಜೈಲಲ್ಲಿ ರಾಜಾತಿಥ್ಯ!
ಭಾನುವಾರದಿಂದ ಪೊಲೀಸರು ವಿಚಾರಣೆ ನಡೆಸುತ್ತಿದ್ದು ಧನ್ವೀರ್ ಅವರ ಮೊಬೈಲ್ ಅನ್ನು ವಶಕ್ಕೆ ಪಡೆದು ವಿಧಿ ವಿಜ್ಞಾನ ಪ್ರಯೋಗಾಲಕ್ಕೆ ಕಳುಹಿಸಲಾಗಿದೆ. ಅನುಮಾನದ ಮೇರೆಗೆ ಧನ್ವೀರ್ ಅವರನ್ನು ಸಿಸಿಬಿ ಡ್ರಿಲ್ ಮಾಡುತ್ತಿದ್ದು ಸೋಮವಾರವೂ ಸಿಸಿಬಿ ವಶದಲ್ಲೇ ಇದ್ದಾರೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಸಿಕ್ಕಿದೆ.
ದರ್ಶನ್‌ಗೆ ದಿಂಬು, ಹಾಸಿಗೆ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ದರ್ಶನ್ ಪರ ವಕೀಲರು ಬೇರೆ ಕೈದಿಗಳಿಗೆ ಜೈಲಿನಲ್ಲಿ ವಿಶೇಷ ಸವಲತ್ತುಗಳನ್ನು ಪಡೆಯುತ್ತಿದ್ದಾರೆ. ಆದರೆ ದರ್ಶನ್ ಅವರಿಗೆ ಸವಲತ್ತುಗಳು ಸಿಗುತ್ತಿಲ್ಲ ಎಂದು ವಾದಿಸಿದ್ದರು.

