ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ (Jammu Kashmir) ವೈದ್ಯನನ್ನು ಬಂಧಿಸಿದ ಬೆನ್ನಲ್ಲೇ ದೆಹಲಿಯ ಸಮೀಪದಲ್ಲಿ 2,900 ಕೆ.ಜಿ ಸ್ಫೋಟಕಗಳು, ರೈಫಲ್ ಹಾಗೂ ಮದ್ದುಗುಂಡುಗಳನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.
ಇತ್ತೀಚಿಗೆ ಶ್ರೀನಗರದಲ್ಲಿ (Srinagar) ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ (Jaish-e-Mohammed) ಅನ್ನು ಬೆಂಬಲಿಸುವ ಪೋಸ್ಟರ್‌ಗಳನ್ನು ಹಾಕಿದ್ದ ಹಿನ್ನೆಲೆ ಉತ್ತರ ಪ್ರದೇಶದ ಸಹರಾನ್‌ಪುರದಲ್ಲಿ ಕಾಶ್ಮೀರಿ ಮೂಲದ ವೈದ್ಯ ಆದಿಲ್ ಅಹ್ಮದ್ ರಾಥರ್‌ನನ್ನು ಪೊಲೀಸರು ಬಂಧಿಸಿದ್ದರು. ಅದರ ಬೆನ್ನಲ್ಲೇ ಹರಿಯಾಣದ ಫರಿದಾಬಾದ್‌ನಲ್ಲಿ ಪೊಲೀಸರು 1 ಚೈನೀಸ್ ಸ್ಟಾರ್ ಪಿಸ್ತೂಲ್, 1 ಬೆರೆಟ್ಟಾ ಪಿಸ್ತೂಲ್, 1 ಎಕೆ 57 ರೈಫೆಲ್, 1 ಎಕೆ ಕ್ರಿಂಕೋವ್ ರೈಫೆಲ್, 2,900 ಕೆ.ಜಿಯ ಸ್ಫೋಟಕ ಹಾಗೂ ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ.ಇದನ್ನೂ ಓದಿ: ಗುಜರಾತ್ | ದೇಶಾದ್ಯಂತ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದ ಮೂವರು ಐಸಿಸ್ ಉಗ್ರರ ಬಂಧನ
ಫರಿದಾಬಾದ್ ಪೊಲೀಸ್ ಕಮಿಷನರ್ ಸತೇಂದರ್ ಕುಮಾರ್ ಗುಪ್ತಾ ಅವರ ಮಾಹಿತಿ ಪ್ರಕಾರ, ವಿಚಾರಣೆ ವೇಳೆ ಆರೋಪಿ ವೈದ್ಯ ಸ್ಫೋಟಕಗಳ ಕುರಿತು ಮಾಹಿತಿ ಬಹಿರಂಗಪಡಿಸಿದ್ದಾನೆ. ಈ ಸ್ಫೋಟಕಗಳನ್ನು ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಮೂಲ ಮುಜಮ್ಮಿಲ್ ಶಕೀಲ್ ಎಂಬ ಇನ್ನೋರ್ವ ವೈದ್ಯ ಸಂಗ್ರಹಿಸಿದ್ದು, ಆರೋಪಿ ಮುಜಮ್ಮಿಲ್‌ನ್ನು ಸದ್ಯ ಬಂಧಿಸಲಾಗಿದೆ. ಈಗಾಗಲೇ ಆರೋಪಿ ರಾಥರ್ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆ ಮತ್ತು ಕಾನೂನುಬಾಹಿರ ಚಟುವಟಿಕೆಗಳು ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿದ್ದು. ಸದ್ಯ ಈ ಸ್ಫೋಟಕಗಳ ಸಂಗ್ರಹಣೆ, ಸಾಗಾಣೆ ಹಿಂದಿನ ಜಾಲ ಪತ್ತೆ ಹಚ್ಚಲು ತನಿಖೆ ನಡೆಸುತ್ತಿದ್ದೇವೆ. ಇದು ಹರಿಯಾಣ ಹಾಗೂ ಜಮ್ಮು ಕಾಶ್ಮೀರ ಪೊಲೀಸರ ಜಂಟಿ ಕಾರ್ಯಾಚರಣೆಯಾಗಿದೆ ಎಂದು ತಿಳಿಸಿದ್ದಾರೆ.
#WATCH | Haryana | Regarding the 360 kg of possible ammonium nitrate recovered in Faridabad, CP Satender Kumar says, “… “It is an ongoing joint operation between Haryana police and J&K police. An accused, Dr Muzammil, was nabbed. 360 kg of inflammable material was recovered… pic.twitter.com/HvtN5qvFb0
— ANI (@ANI) November 10, 2025
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರಿಫ್ ನಿಸಾರ್ ದಾರ್, ಯಾಸಿರ್-ಉಲ್-ಅಶ್ರಫ್, ಮಕ್ಸೂದ್ ಅಹ್ಮದ್ ದಾರ್, ಮುಲ್ವಿ ಇರ್ಫಾನ್ ಅಹ್ಮದ್, ಜಮೀರ್ ಅಹ್ಮದ್ ಅಹಂಗರ್, ಮುಜಮ್ಮಿಲ್ ಅಹ್ಮದ್ ಗನೈ, ಡಾ. ಅದೀಲ್‌ನ್ನು ಬಂಧಿಸಲಾಗಿದೆ. ಇನ್ನೂ ಕೆಲವರ ಪಾತ್ರ ಬೆಳಕಿಗೆ ಬಂದಿದ್ದು, ಶೀಘ್ರದಲ್ಲೇ ಪತ್ತೆಹಚ್ಚಿ ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ.
ತನಿಖೆ ವೇಳೆ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಶ್ರೀನಗರ, ಅನಂತನಾಗ್, ಗಂಡರ್‌ಬಾಲ್ ಮತ್ತು ಶೋಪಿಯಾನ್ ಸೇರಿದಂತೆ ಅನೇಕ ಸ್ಥಳಗಳಲ್ಲಿ ಶೋಧ ನಡೆಸಿದ್ದಾರೆ. ಅದಲ್ಲದೇ ಹರಿಯಾಣ ಪೊಲೀಸರೊಂದಿಗೆ ಫರಿದಾಬಾದ್‌ನಲ್ಲಿ ಮತ್ತು ಉತ್ತರ ಪ್ರದೇಶ ಪೊಲೀಸರೊಂದಿಗೆ ಸಹರಾನ್‌ಪುರದಲ್ಲಿಯೂ ಶೋಧ ಕಾರ್ಯ ನಡೆಸಿದ್ದಾರೆ ಎಂದಿದ್ದಾರೆ.
ಅ.27ರಂದು ಶ್ರೀನಗರದಲ್ಲಿ ಜೈಶ್-ಎ-ಮೊಹಮ್ಮದ್ ಭಯೋತ್ಪಾದಕ ಸಂಘಟನೆಯನ್ನು ಬೆಂಬಲಿಸುವ ಪೋಸ್ಟರ್‌ಗಳು ಕಾಣಿಸಿಕೊಂಡಿದ್ದವು. ಈ ಕುರಿತು ಸ್ಥಳೀಯ ಪೊಲೀಸರು ತನಿಖೆ ನಡೆಸಿದಾಗ ಸಿಸಿಟಿವಿ ದೃಶ್ಯಾವಳಿಗಳಲ್ಲಿ ವೈದ್ಯ ಆದಿಲ್ ಅಹ್ಮದ್ ರಾಥರ್ ಪೋಸ್ಟರ್ ಅಂಟಿಸುವುದು ಕಂಡುಬಂದಿತ್ತು. ಅದರ ಬೆನ್ನಲ್ಲೇ ಆರೋಪಿಯನ್ನು ಬಂಧಿಸಲಾಗಿತ್ತು. ಬಳಿಕ ತನಿಖೆ ವೇಳೆ ನೀಡಿದ್ದ ಮಾಹಿತಿ ಪ್ರಕಾರ, ಅನಂತ್‌ನಾಗ್ ಸರ್ಕಾರಿ ಕಾಲೇಜುವೊಂದರಲ್ಲಿ ರಾಥರ್ ಲಾಕರ್‌ನಿಂದ ಎಕೆ-47 ರೈಫಲ್ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದರು.
2019ರ ಪುಲ್ವಾಮಾ ದಾಳಿಯ ಸಂದರ್ಭದಲ್ಲಿ 80 ಕೆ.ಜಿಯಷ್ಟು ಆರ್‌ಡಿಎಕ್ಸ್ ಬಳಸಿ ಸಿಆರ್‌ಪಿಎಫ್ ಬಸ್ಸನ್ನು ಸ್ಫೋಟಿಸಲಾಗಿತ್ತು. ಇದನ್ನೂ ಓದಿ: ಪಹಲ್ಗಾಮ್ ನರಹಂತಕರಿಗೆ ತರಬೇತಿ ನೀಡಿದ್ದು ಐಎಸ್‌ಐನ `S1′ ಘಟಕ – ಸ್ಫೋಟಕ ರಹಸ್ಯ ಬಯಲು

