ಬೀದರ್: ಧರ್ಮಸ್ಥಳದಲ್ಲಿ (Dharmasthala) ಕಾಣೆಯಾದ ಮಹಿಳೆಯರ ಕೊಲೆಗೆ ಕಾರಣರಾದವರ ಪತ್ತೆಗೆ ಸಮಗ್ರ ತನಿಖೆ ನಡೆಸಿ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಎಸ್‌ಐಟಿಗೆ (SIT) ಪತ್ರ ಬರೆದಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಎಸ್‌ಐಟಿ ಸರಿಯಾಗಿ ತನಿಖೆ ಮಾಡಿಲ್ಲ ಎಂದು ನಾನು ಪತ್ರ ಬರೆದಿಲ್ಲ, ಎಸ್‌ಐಟಿ ತನಿಖೆ ಬುರುಡೆ ಚಿನಯ್ಯಗೆ ಮಾತ್ರ ಸೀಮಿತವಾಗಬಾರದು. ಧರ್ಮಸ್ಥಳದಲ್ಲಿ ಸತ್ತವರ ಮತ್ತು ಅಸಹಜವಾಗಿ ಸತ್ತ ಮಹಿಳೆಯರ ಬಗ್ಗೆ ಸಮಗ್ರ ತನಿಖೆ ಮಾಡಬೇಕು. ತನಿಖೆ ನಡೆಸಿ ಮಹಿಳಾ ಆಯೋಗಕ್ಕೆ ವರದಿ ನೀಡುವಂತೆ ಎಸ್‌ಐಟಿಗೆ ಪತ್ರ ಬರೆದಿದ್ದೇನೆ ಎಂದು ತಿಳಿಸಿದ್ದಾರೆ.ಇದನ್ನೂ ಓದಿ: Delhi Explosion | ಕೆಂಪು ಕೋಟೆ ಬಳಿ ಕಾರು ಸ್ಫೋಟ – ಇಬ್ಬರು ದುರ್ಮರಣ, ಸ್ಫೋಟದ ತೀವ್ರತೆಗೆ ದೇಹ ಛಿದ್ರ
ಇನ್ನೂ ಸರ್ಕಾರದಿಂದ ಕೋಟ್ಯಂತರ ಹಣ ಬಸ್ ನಿಲ್ದಾಣದ ದುರಸ್ತಿಗಾಗಿ ಬರುತ್ತಿದೆ. ಆದರೆ ನಿಲ್ದಾಣದಲ್ಲಿ ಕೆಲವು ಸಿಸಿಟಿವಿ ಕ್ಯಾಮೆರಾಗಳು ಕಾರ್ಯನಿರ್ವಹಿಸುತ್ತಿಲ್ಲ. ಒಂದು ಗಂಟೆಯಾದರೂ ಒಂದು ಬಸ್ ಕೂಡ ಬರಲ್ಲ. ಇದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಬಸ್ ನಿಲ್ದಾಣದಲ್ಲಿ ಶೌಚಾಲಯ ಸ್ವಚ್ಛವಾಗಿಲ್ಲದೇ ಗಬ್ಬೆದ್ದು ನಾರುತ್ತಿದೆ. ಬೀದರ್ ಬಸ್‌ನಿಲ್ದಾಣ ಅವ್ಯವಸ್ಥೆಯ ಆಗರವಾಗಿದೆ ಎಂದು ಕಿಡಿಕಾರಿದ್ದಾರೆ.

