ನವದೆಹಲಿ: ದೆಹಲಿಯ ಸುಭಾಷ್ ಮಾರ್ಗದ ಟ್ರಾಫಿಕ್ ಸಿಗ್ನಲ್ ಸ್ಫೋಟಗೊಂಡ ಕಾರಿನ (ಸಂಖ್ಯೆ HR 26, 7674) ಸುಳಿವು ಪತ್ತೆಯಾಗಿದ್ದು, ಹರಿಯಾಣ ಮೂಲದ ಸಲ್ಮಾನ್ ಎಂಬಾತನನ್ನ ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲಾಗಿದೆ.
ಆದ್ರೆ ಪೊಲೀಸರ ಪ್ರಾಥಮಿಕ ವಿಚಾರಣೆ ವೇಳೆ ತಾನು ಮೊಹಮ್ಮದ್ ನದೀಮ್ ಅನ್ನೋರಿಗೆ ಕಾರು ಮಾರಾಟ ಮಾಡಿರುವುದಾಗಿ ಸಲ್ಮಾನ್ ಹೇಳಿದ್ದಾನೆ. ಸದ್ಯ ವಶಕ್ಕೆ ಪಡೆದಿರುವ ದೆಹಲಿ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: Delhi Explosion | ದೆಹಲಿಯಲ್ಲಿ ಭಯಾನಕ ಸ್ಫೋಟ – ನೆತ್ತರು ಹರಿದ ನೆಲದಲ್ಲಿ ಸಜೀವ ಗುಂಡು ಪತ್ತೆ
ಘಟನಾ ಸ್ಥಳಕ್ಕೆ ಅಮಿತ್ ಶಾ ಭೇಟಿ
ಇನ್ನೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಘಟನಾ ಸ್ಥಳಕ್ಕೆ ಈಗಾಗಲೇ ಭೇಟಿ ನೀಡಿದ್ದು ಪರಿಸ್ಥಿತಿ ಅವಲೋಕಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರಿಗೂ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ:Delhi Explosion | ಚುನಾವಣಾ ಕಣ ಬಿಹಾರದಲ್ಲೂ ಹೈ ಅಲರ್ಟ್ ಘೋಷಣೆ
ಕೆಂಪುಕೋಟೆ ಬಳಿ ಹರಿದ ನೆತ್ತರು!
ಕೆಂಪು ಕೋಟೆ ಸಮೀಪದ ಲಾಲ್ ಕಿಲಾ ಮೆಟ್ರೋ ನಿಲ್ದಾಣ ಗೇಟ್ ಸಂಖ್ಯೆ-1ರ ಬಳಿ ಸೋಮವಾರ ಸಂಜೆ 6:45 ರಿಂದ 7 ಗಂಟೆ ಅವಧಿಯಲ್ಲಿ ಸ್ಫೋಟ ಸಂಭವಿಸಿದ್ದು, ಸಾವಿನ ಸಂಖ್ಯೆ ಈವರೆಗೆ 13ಕ್ಕೆ ಏರಿಕೆಯಾಗಿದ್ದು, 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. 10ಕ್ಕೂ ಹೆಚ್ಚು ಗಾಯಾಳುಗಳನ್ನು ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, 6 ಮಂದಿ ಸ್ಥಿತಿ ಚಿಂತಾಜನಕವಾಗಿದೆ. ಇದನ್ನೂ ಓದಿ: Delhi Explosion | ಕೆಂಪು ಕೋಟೆ ಬಳಿ ಭೀಕರ ಸ್ಫೋಟ – ಕಂಬನಿ ಮಿಡಿದ ಮೋದಿ, ರಾಜನಾಥ್ ಸಿಂಗ್
6 ಕಾರ್‌ಗಳು, ಇ-ರಿಕ್ಷಾಗಳು ಸೇರಿದಂತೆ 22 ವಾಹನಗಳು ಬೆಂಕಿಗಾಹುತಿಯಾಗಿವೆ. ಕೆಂಪುಕೋಟೆ ಮೆಟ್ರೋದ ಗೇಟ್ ನಂ.1ರ ಪಾರ್ಕಿಂಗ್‌ನಲ್ಲಿ ನಿಗೂಢ ಸ್ಫೋಟ ಸಂಭವಿಸಿದೆ. ಆಕಸ್ಮಿಕ ಭೀಕರ ಸ್ಫೋಟದ ಸದ್ದು- ಬೆಂಕಿಗೆ ಜನ ನಡುಗಿಹೋಗಿದ್ದಾರೆ. 20ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸಿವೆ. ಇದು ಬಾಂಬ್ ಸ್ಫೋಟವಾ..? ಅಥವಾ ಸಿಎನ್‌ಜಿ ಸ್ಫೋಟವಾ..? ಏನು ಅನ್ನೋದು ನಿಖರವಾಗಿ ಗೊತ್ತಾಗ್ತಿಲ್ಲ. ದೆಹಲಿ ಪೊಲೀಸರು, ಸಿಆರ್‌ಪಿಎಫ್ ತಂಡ ಘಟನಾ ಸ್ಥಳದಲ್ಲಿ ಇದ್ದು, ಇಂಚಿಂಚೂ ಶೋಧ ನಡೆಸುತ್ತಿದ್ದಾರೆ.

