ಗದಗ: ವ್ಯಕ್ತಿಯೋರ್ವನನ್ನು ಬೆತ್ತಲೆಗೊಳಿಸಿ, ಕೈ,ಕಾಲು ಕಟ್ಟಿ ನೀರಿನಲ್ಲಿ ಎಸೆದಿರುವ ಘಟನೆ ತಾಲೂಕಿನ ಕಣಗಿನಹಾಳ ಗ್ರಾಮದಲ್ಲಿ ನಡೆದಿದೆ.
ಈಶಪ್ಪ ಕುರಿ ಎಂಬುವರ ಜಮೀನಿನ (Agricultutre Land) ನೀರಿನ ಹೊಂಡದಲ್ಲಿ ಸುಮಾರು 35 ರಿಂದ 40 ವರ್ಷದ ಅನಾಮಧೇಯ ವ್ಯಕ್ತಿಯ ಶವ ಪತ್ತೆಯಾಗಿದೆ. ಹೆಸರು ವಿಳಾಸ ಇನ್ನೂ ತಿಳಿದು ಬಂದಿಲ್ಲ.
ದುಷ್ಕರ್ಮಿಗಳು ವ್ಯಕ್ತಿಯನ್ನು ಒಳ ಉಡುಪುನಿಂದ ಕೈ ಹಾಗೂ ಪ್ಯಾಂಟ್‌ನಿಂದ ಕಾಲು ಕಟ್ಟಿ ನೀರಿನಲ್ಲಿ ಎಸೆದಿದ್ದಾರೆ. ಮುಖ, ಕುತ್ತಿಗೆ ಹಾಗೂ ತಲೆಗೆ ಗಾಯವಾಗಿರುವ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದಾರೆ. ಬೆತ್ತಲೆಗೊಳಿಸಿ ಉದ್ದೇಶ ಪೂರ್ವಕವಾಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗುತ್ತಿದೆ. ಇದನ್ನೂ ಓದಿ: ಬೆಂಗಳೂರಿಂದಲೇ ಐಪಿಎಲ್ ಎತ್ತಂಗಡಿ- ಪುಣೆಯಲ್ಲಿ ಆರ್‌ಸಿಬಿ ಮ್ಯಾಚ್!

