ರಾಮನಗರ: ಕಗ್ಗಲೀಪುರ (Kaggalipura) ಪೊಲೀಸ್ ಠಾಣಾ ವ್ಯಾಪ್ತಿಯ ಸೋಮನಹಳ್ಳಿ ಗ್ರಾಮದ ಕಾಳಿಕಾಂಬ ದೇವಸ್ಥಾನದ ರಸ್ತೆಯ ಬಳಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳ್ಳತನ (Theft) ಮಾಡಿದ್ದ ಖದೀಮನನ್ನ ಕಗ್ಗಲೀಪುರ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಕಗ್ಗಲೀಪುರ, ಹಾರೋಹಳ್ಳಿ, ಬಿಡದಿ, ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯ ಹಲವು ಕಳ್ಳತನ ಪ್ರಕರಣದ ಪ್ರಮುಖ ಆರೋಪಿ ಪೊಲೀಸರಿಗೆ ತಲೆನೋವಾಗಿದ್ದ. ಪ್ರಕರಣದ ತನಿಖೆ ನಡೆಸಿದ್ದ ಪೊಲೀಸರು ಕೊನೆಗೂ ಖದೀಮನನ್ನ ಬಂಧಿಸಿದ್ದಾರೆ. ಇದನ್ನೂ ಓದಿ: ಉಗ್ರ ಸಂಘಟನೆಗಳೊಂದಿಗೆ ನಂಟು; ಈ ಹಿಂದೆ ವಜಾಗೊಂಡಿದ್ದ ಪ್ರೊಫೆಸರ್ ನೇಮಿಸಿಕೊಂಡಿತ್ತು ಅಲ್ ಫಲಾಹ್ ವಿವಿ
ಬಂಧಿತ ಆರೋಪಿಯಿಂದ ಕಳ್ಳತನ ಮಾಡಿದ್ದ ಸುಮಾರು 2 ಲಕ್ಷ ರೂ. ಮೌಲ್ಯದ 4 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡು ಒಟ್ಟು 4 ಪ್ರಕರಣಗಳನ್ನು ಪತ್ತೆ ಮಾಡುವಲ್ಲಿ ಕಗ್ಗಲೀಪುರ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿ ಯಶಸ್ವಿಯಾಗಿರುತ್ತಾರೆ. ಇದನ್ನೂ ಓದಿ: Delhi Blast | ಭೂತಾನ್‌ನಿಂದ ನೇರವಾಗಿ ಆಸ್ಪತ್ರೆಗೆ ಪ್ರಧಾನಿ ಭೇಟಿ – ಗಾಯಾಳುಗಳ ಆರೋಗ್ಯ ವಿಚಾರಿಸಿದ ನಮೋ

