ಚಾಮರಾಜನಗರ: ಸುಳ್ವಾಡಿ ವಿಷ ಪ್ರಸಾದ (Sulwadi Prasada Poisoning Case) ಪ್ರಕರಣದ ಮೊದಲನೇ ಆರೋಪಿ ಇಮ್ಮಡಿ ಮಹದೇವಸ್ವಾಮಿಗೆ ಜಾಮೀನು (Bail) ಮಂಜೂರು ಮಾಡಲಾಗಿದೆ.
ಅನಾರೋಗ್ಯದ ಹಿನ್ನೆಲೆ ವೈದ್ಯಕೀಯ ಚಿಕಿತ್ಸೆಗೆಂದು ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಒಂದು ವರ್ಷದ ಅವಧಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. ಇದನ್ನೂ ಓದಿ: ಹೈಕಮಾಂಡ್ ಅಂಗಳದಲ್ಲಿ ಕಾಂಗ್ರೆಸ್ ಪವರ್ ಫೈಟ್ – ನ.15ಕ್ಕೆ ಸಿಎಂ, ಡಿಸಿಎಂ ದೆಹಲಿಗೆ ಭೇಟಿ
2018ರ ಡಿಸೆಂಬರ್ 14ರಂದು ಸುಳ್ವಾಡಿ ಕಿಚ್‌ಗುತ್ ಮಾರಮ್ಮ ದೇವಸ್ಥಾನದ ಆಡಳಿತ ಚುಕ್ಕಾಣಿ ಹಿಡಿಯಲು ಹುನ್ನಾರ ನಡೆಸಿ ಪ್ರಸಾದಕ್ಕೆ ವಿಷ ಬೆರೆಸಲಾಗಿತ್ತು. ಪ್ರಸಾದ ಸೇವಿಸಿ 17 ಜನ ಮೃತಪಟ್ಟು, 123ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದರು. ಇದನ್ನೂ ಓದಿ: ಮದುವೆ ಮಂಟಪದಲ್ಲಿ ವರನಿಗೆ ಚಾಕು ಇರಿತ; ಆರೋಪಿಯನ್ನ 2 ಕಿಮೀ ವರೆಗೆ ಬೆನ್ನಟ್ಟಿದ ವೆಡ್ಡಿಂಗ್ ಡ್ರೋನ್
ಪ್ರಕರಣ ಸಂಬಂಧ ಎ1 ಆರೋಪಿ ಇಮ್ಮಡಿ ಮಹದೇವಸ್ವಾಮಿ ಏಳು ವರ್ಷಗಳಿಂದ ಜೈಲಿನಲ್ಲಿದ್ದ. ಅನಾರೋಗ್ಯದ ಹಿನ್ನೆಲೆ ಮಹದೇವಸ್ವಾಮಿ ಹೈಕೋರ್ಟ್ ಮೊರೆ ಹೋಗಿದ್ದ. ಸದ್ಯ ಹೈಕೋರ್ಟ್‌ನ ಏಕಸದಸ್ಯ ಪೀಠದ ನ್ಯಾಯಮೂರ್ತಿ ರಾಚಯ್ಯ ಒಂದು ವರ್ಷದ ಅವಧಿಗೆ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ಕೊಡಗು | ಭೂಕುಸಿತ ಸಂಭವಿಸಿದ್ದ ಬೆಟ್ಟಗುಡ್ಡಗಳ ಸಾಲಿನಲ್ಲಿ ಮತ್ತೆ ಚಿಗುರಿದ ಹಸಿರು!

