ಬೆಂಗಳೂರು: ಚಲನಚಿತ್ರ ನಟಿಗೆ ಲೈಂಗಿಕ ಕಿರುಕುಳ (Sexual Harassment) ಆರೋಪ ಪ್ರಕರಣದಡಿ ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿಯನ್ನ ಪೊಲೀಸರು ಬಂಧಿಸಿದ್ದಾರೆ.
ಅರವಿಂಣದ್ ರೆಡ್ಡಿ ಎವಿಆರ್ ಗ್ರೂಪ್ (AVR Group) ಮಾಲೀಕನಾಗಿದ್ದ. 2021ರಲ್ಲಿ ಪರಿಚಯವಾಗಿದ್ದ ನಟಿಗೆ ಲೈಂಗಿಕ ಕಿರುಕುಳ ನೀಡಿದ ಸಂಬಂಧ ಆರ್‌ಆರ್ ನಗರ (RR Nagar) ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಐದು ದಿನದ ಹಿಂದೆ ಈ ಪ್ರಕರಣ ಗೋವಿಂದರಾಜನಗರ ಠಾಣೆಗೆ ವರ್ಗಾವಣೆಗೊಂಡಿತ್ತು. ಅಲ್ಲದೇ ಆರೋಪಿ ಬಂಧನಕ್ಕೆ ಎಸಿಪಿ ಚಂದನ್ ಮತ್ತು ಸುಬ್ರಹ್ಮಣಿ ತಂಡ ರಚಿಸಲಾಗಿತ್ತು. ಇದನ್ನೂ ಓದಿ: ಕೋಲ್ಕತ್ತಾದ ಎಜ್ರಾ ಸ್ಟ್ರೀಟ್ ಬಳಿ ಬೆಂಕಿ ಅವಘಡ- 20 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ದೌಡು
ಶ್ರೀಲಂಕದಿಂದ ಬೆಂಗಳೂರಿಗೆ ಬರುವಾಗ ಆರೋಪಿಯನ್ನ ಅರೆಸ್ಟ್ ಮಾಡಲಾಗಿದೆ. ಈ ಮೊದಲು ಆರೋಪಿ ಬಂಧನಕ್ಕೆ ಪೊಲೀಸರು ಲುಕ್ ಔಟ್ ನೋಟಿಸ್ ಜಾರಿ ಮಾಡಿದ್ದರು. ಇಂದು ಬೆಳಗಿನ ಜಾವ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಆರೋಪಿಯನ್ನ ಬಂಧಿಸಲಾಗಿದೆ. ಇದನ್ನೂ ಓದಿ: IPL 2026 Retention | ರಿಟೇನ್ ಪಟ್ಟಿ ಬಿಡುಗಡೆಗೆ ಇಂದೇ ಡೆಡ್‌ಲೈನ್ – ಸಂಜು ಸಿಎಸ್‌ಕೆಗೆ, ಜಡ್ಡು ರಾಜಸ್ಥಾನ್‌ಗೆ
ರಿಯಲ್ ಎಸ್ಟೇಟ್ ಉದ್ಯಮಿಯಾಗಿರುವ ಅರವಿಂದ್ ರೆಡ್ಡಿ ಮಹಾರಾಜ ಬಳ್ಳಾರಿ ಟಸ್ಕರ್ಸ್ ಕ್ರಿಕೆಟ್ ತಂಡದ ಮಾಲೀಕನಾಗಿದ್ದ. ಅಲ್ಲದೇ ಚಲನಚಿತ್ರ ನಿರ್ಮಾಪಕ ಆಗಿರುವ ಅರವಿಂದ್ ರೆಡ್ಡಿ ಸಿನಿಮಾ ಇಂಡಸ್ಟ್ರಿ ಜೊತೆಗೆ ಹೆಚ್ಚಾಗಿ ಗುರುತಿಸಿಕೊಂಡಿದ್ದ. ಚಲನ ಚಿತ್ರ ನಟ, ನಟಿಯರಿಗಾಗಿಯೇ ಹಲವು ಕ್ರಿಕೆಟ್ ಪಂದ್ಯಾವಳಿ ಕೂಡ ಆಯೋಜಿಸಿದ್ದ. ಅರವಿಂದ್ ರೆಡ್ಡಿ ಒಡೆತನದ ಎವಿಆರ್ ಗ್ರೂಪ್ ದುಬೈ, ಶ್ರೀಲಂಕಾ ಸೇರಿದಂತೆ ಹಲವು ಕಡೆ ನಡೆದ ಟೂರ್ನಮೆಂಟ್‌ಗೆ ಸ್ಪಾನ್ಸರ್ ಮಾಡಿತ್ತು. ಇದನ್ನೂ ಓದಿ: ಬಿಹಾರ ಫಲಿತಾಂಶ ಕರ್ನಾಟಕದಲ್ಲಿ ಬಿಜೆಪಿಗೆ ಉತ್ಸಾಹ ಮೂಡಿಸಿದೆ: ಶೋಭಾ ಕರಂದ್ಲಾಜೆ

