ತುಮಕೂರು: ಗೋಧಿ (Wheat) ತುಂಬಿದ್ದ ಲಾರಿ (Lorry) ಪಲ್ಟಿಯಾದ ಪರಿಣಾಮ ಗೋಧಿ ತುಂಬಿಕೊಳ್ಳಲು ಜನ ಮುಗಿಬಿದ್ದ ಘಟನೆ ತುಮಕೂರು (Tumakuru) ಜಿಲ್ಲೆ ಶಿರಾ (Sira) ತಾಲೂಕಿನ ಹುಯಿಲುದೊರೆ ಗ್ರಾಮದ ಬಳಿ ನಡೆದಿದೆ.
ವೇಗವಾಗಿ ಬಂದ ಲಾರಿ ಎದುರಿಗೆ ಬರುತ್ತಿದ್ದ ಮತ್ತೊಂದು ಲಾರಿಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಈ ಪರಿಣಾಮ ರಸ್ತೆ ಮೇಲೆ ಗೋಧಿ ಚೀಲಗಳು ಬಿದ್ದಿವೆ. ರಸ್ತೆ ತುಂಬೆಲ್ಲಾ ಗೋಧಿ ಬಿದ್ದ ಹಿನ್ನೆಲೆ ಗ್ರಾಮಸ್ಥರು ಗೋಧಿ ತುಂಬಿಸಿಕೊಳ್ಳಲು ಮುಗಿಬಿದ್ದಿದ್ದಾರೆ. ಇದನ್ನೂ ಓದಿ: ಎಡಿಜಿಪಿ ದಯಾನಂದ್ ಹೆಸರಿನಲ್ಲಿ ನಕಲಿ ಎಫ್‌ಬಿ ಖಾತೆ ಓಪನ್- ಹಣಕ್ಕೆ ಬೇಡಿಕೆ
ಶಿರಾದಿಂದ ಹುಳಿಯಾರು ಕಡೆಗೆ ಬರುತ್ತಿದ್ದ ಗೋಧಿ ತುಂಬಿದ್ದ ಲಾರಿ ಎದುರಿಗೆ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಶಿರಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಇದನ್ನೂ ಓದಿ: ಬೆಂಗ್ಳೂರಲ್ಲಿ ಎಲ್ಲೆಂದರಲ್ಲಿ ಕಸ ಸುಟ್ಟರೆ ಒಂದು ಲಕ್ಷ ದಂಡ, ಐದು ವರ್ಷ ಜೈಲು!

