Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರತಿ ವರ್ಷ ಸಾಲು ಮರದ ತಿಮ್ಮಕ್ಕ ಹೆಸರಿನಲ್ಲಿ ಪ್ರಶಸ್ತಿ – ಸಿದ್ದರಾಮಯ್ಯ ಘೋಷಣೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪ್ರತಿ ವರ್ಷ ಸಾಲು ಮರದ ತಿಮ್ಮಕ್ಕ ಹೆಸರಿನಲ್ಲಿ ಪ್ರಶಸ್ತಿ – ಸಿದ್ದರಾಮಯ್ಯ ಘೋಷಣೆ

Bengaluru City

ಪ್ರತಿ ವರ್ಷ ಸಾಲು ಮರದ ತಿಮ್ಮಕ್ಕ ಹೆಸರಿನಲ್ಲಿ ಪ್ರಶಸ್ತಿ – ಸಿದ್ದರಾಮಯ್ಯ ಘೋಷಣೆ

Public TV
Last updated: November 19, 2025 7:03 pm
Public TV
Share
3 Min Read
Siddaramaiah 8
SHARE

– ಬೆಂಗಳೂರು ನಗರದಲ್ಲೇ 900 ಟನ್ ಪ್ಲಾಸ್ಟಿಕ್ ಉತ್ಪಾದನೆ; ಸಿಎಂ ಕಳವಳ

ಬೆಂಗಳೂರು: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಒಂದು ಕೋಟಿ ದತ್ತಿ ನಿಧಿಯನ್ನು ಸ್ಥಾಪಿಸಿ ಠೇವಣಿ ಇರುವ ಹಣದ ಬಡ್ಡಿಯಲ್ಲಿ ಪ್ರತಿ ವರ್ಷವೂ ಕಾರ್ಯಕ್ರಮ ಆಯೋಜಿಸಲಾಗುವುದು ಹಾಗೂ ಕನಿಷ್ಠ 5 ಪರಿಸರವಾದಿಗಳಿಗೆ ಸಾಲು ಮರದ ತಿಮ್ಮಕ್ಕನವರ (Saalumarada Thimmakka) ಹೆಸರಿನಲ್ಲಿ ಪ್ರಶಸ್ತಿಯನ್ನು ಪ್ರತಿ ವರ್ಷ ಕೊಡಲಾಗುವುದು ಅಂತ ಸಿಎಂ ಸಿದ್ದರಾಮಯ್ಯ ( Siddaramaiah) ಘೋಷಣೆ ಮಾಡಿದರು.

ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ (Pollution Control Board) ಇವರ ವತಿಯಿಂದ ಆಯೋಜಿಸಲಾಗಿದ್ದ ಸುವರ್ಣ ಮಹೋತ್ಸವ -2025 ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ 50 ವರ್ಷಗಳ ಸುವರ್ಣ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂದು ಮಾಜಿ ಪ್ರಧಾನಿ ಶ್ರೀಮತಿ ಇಂದಿರಾಗಾಂಧಿಯವರ ಜನ್ಮದಿನ. 1974ರ ಇಂದಿನ ದಿನದಂದು ಮಾಲಿನ್ಯ ನಿಯಂತ್ರಣ ಮಂಡಳಿ ಸ್ಥಾಪಿತವಾಯಿತು. ಇಂದಿರಾ ಗಾಂಧಿಯವರು (Indira gandhi) ಪರಿಸರ ಮತ್ತು ಅರಣ್ಯ ರಕ್ಷಣೆಗೆ ಹಲವು ಪ್ರಮುಖ ಕಾಯ್ದೆಗಳನ್ನು ಜಾರಿಗೆ ತಂದಿದ್ದರು. ಪರಿಸರ ಸಂರಕ್ಷಣೆಯ ಜವಾಬ್ದಾರಿ ಕೇವಲ ಸರ್ಕಾರದ ಮೇಲಿಲ್ಲ. ಸಾರ್ವಜನಿಕರು ಪರಿಸರ ಸಂರಕ್ಷಣೆಯಲ್ಲಿ ಸಕ್ರಿಯರಾಗಿ ಪಾಲ್ಗೊಳ್ಳಬೇಕು. ಭೂಮಿಯ ಮೇಲಿನ ಜೀವಸಂಕುಲಕ್ಕೆ ಉತ್ತಮ ಪರಿಸರದಲ್ಲಿ ಬದುಕಲು ಅವಶ್ಯ.ಮಾಲಿನ್ಯ ರಹಿತ ಪರಿಸರವನ್ನು ನಿರ್ಮಿಸುವುದು ಅತ್ಯಂತ ಅವಶ್ಯವಾಗಿದೆ ಎಂದರು.

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಒಂದು ಕೋಟಿ ದತ್ತಿ ನಿಧಿಯನ್ನು ಸ್ಥಾಪಿಸಿ, ಠೇವಣಿ ಇರುವ ಹಣದ ಬಡ್ಡಿಯಲ್ಲಿ ಪ್ರತಿ ವರ್ಷವೂ ಕಾರ್ಯಕ್ರಮವನ್ನು ಆಯೋಜಿಸಲಾಗುವುದು ಹಾಗೂ ಕನಿಷ್ಠ ಐದು ಪರಿಸರವಾದಿಗಳಿಗೆ ತಿಮ್ಮಕ್ಕನವರ ಹೆಸರಿನಲ್ಲಿ ಪ್ರಶಸ್ತಿಯನ್ನು ಪ್ರತಿ ವರ್ಷ ಕೊಡಲಾಗುವುದು.

ಇಂದು ಮಾಜಿ ಪ್ರಧಾನಿ ಶ್ರೀಮತಿ ಇಂದಿರಾ… pic.twitter.com/ZA88r8qD1M

— Siddaramaiah (@siddaramaiah) November 19, 2025

ನಾವು ಉಸಿರಾಡುವ ಗಾಳಿ, ನೀರು ಹಾಗೂ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಅಗತ್ಯ.ಕೇಂದ್ರದ ವರದಿಯ ಪ್ರಕಾರ ದೇಶದ ಹಲವು ನಗರಗಳು ಮಾಲಿನ್ಯದಿಂದ ಕೂಡಿವೆ. ಈ ಪಟ್ಟಿಯಲ್ಲಿ ಬೆಂಗಳೂರು,ದಾವಣಗೆರೆ, ಕಲ್ಬುರ್ಗಿ ನಗರವೂ ಸೇರಿರುವುದು ಆತಂಕಕಾರಿ ವಿಷಯ. ನಮ್ಮ ರಾಜ್ಯವನ್ನು ವಾಸಯೋಗ್ಯವಾಗಿಸಲು , ಜನರೆಲ್ಲರೂ ಪರಿಸರ ಬಗ್ಗೆ ಕಾಳಜಿಯನ್ನು ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಬೆಂಗಳೂರಲ್ಲೇ 900 ಟನ್ ಪ್ಲಾಸ್ಟಿಕ್ ಉತ್ಪಾದನೆ
ಬೆಂಗಳೂರು ನಗರ ಒಂದರಲ್ಲೇ 900 ಟನ್ ಪ್ಲಾಸ್ಟಿಕ್ ಉತ್ಪಾದನೆಯಾಗುತ್ತದೆ. ಇದನ್ನು ಜನ ಅರ್ಥಮಾಡಿಕೊಳ್ಳದೇ ಹೋದರೆ ಪ್ಲಾಸ್ಟಿಕ್ ಮುಕ್ತ ನಗರವಾಗಲು ಸಾಧ್ಯವಿಲ್ಲ ಪರಿಸರದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿ, ಸರ್ಕಾರದ ಜೊತೆ ಕೈಜೋಡಿಸಿದಾಗ ಮಾತ್ರ 2030 ರ ಹೊತ್ತಿಗೆ ಬೆಂಗಳೂರನ್ನು ಪ್ಲಾಸ್ಟಿಕ್ ಮುಕ್ತ ನಗರವಾಗಿಸಲು ಸಾಧ್ಯ ಎಂದರು.

PLASTIC 1

ಕೇಂದ್ರದ ವರದಿಯ ಪ್ರಕಾರ 131 ನಗರಗಳು ಮಾಲಿನ್ಯದಿಂದ ಕೂಡಿದ್ದು, ನಿಗದಿತ ಮಟ್ಟಕ್ಕಿಂತಲೂ ಹೆಚ್ಚಿದೆ.ಅದರಲ್ಲಿ ಬೆಂಗಳೂರು, ಹುಬ್ಬಳ್ಳಿ-ಧಾರವಾಡ, ದಾವಣಗೆರೆ ಮತ್ತು ಕಲಬುರಗಿ ಜಿಲ್ಲೆಗಳು ಸೇರಿವೆ. ಇದು ಆತಂಕಕಾರಿ ವಿಷಯ. ಬೆಂಗಳೂರಿನಲ್ಲಿ ವಾಸ ಮಾಡಲು ಸಾಧ್ಯವಾಗದಂತಹ ಪರಿಸ್ಥಿತಿ ಮುಂದಿನ ದಿನಗಳಲ್ಲಿ ನಿರ್ಮಾಣವಾಗುವ ಸಾಧ್ಯತೆ ಇದೆ. ಅದಕ್ಕಾಗಿ ಎಲ್ಲರೂ ಪರಿಸರದ ಬಗ್ಗೆ ಪ್ರೀತಿಯನ್ನು ಬೆಳೆಸಿಕೊಳ್ಳಬೇಕು. ಸಾಲು ಮರದ ತಿಮ್ಮಕ್ಕ ಇದಕ್ಕೆ ಶ್ರೇಷ್ಠ ಉದಾಹರಣೆ ಎಂದರು.

ಇತ್ತೀಚೆಗೆ ನಿಧನರಾದ ಅವರು ಬಹಳಷ್ಟು ಮರಗಿಡಗಳನ್ನು ತಮ್ಮ ಮಕ್ಕಳಂತೆ ಬೆಳೆಸುವ ಪ್ರವೃತ್ತಿಯನ್ನು ಬೆಳೆಸಿಕೊಂಡಿದ್ದರು. ಪ್ರತಿಯೊಬ್ಬರೂ ಸಾಲಮರದ ತಿಮ್ಮಕ್ಕನವರಂತೆ ಆಗಬೇಕು ಎನ್ನುವ ಆಶಯ ನಮ್ಮದು ಎಂದರು. ಬೆಂಗಳೂರು ಗಾರ್ಬೇಜ್ ನಗರ ಎಂಬ ಟೀಕೆಗೆ ನಗರ ಗುರಿಯಾಗುತ್ತಿದ್ದು,ಬೆಂಗಳೂರನ್ನು ಗಾರ್ಬೇಜ್ ನಗರವಾಗಿಸುವುದು ನಮ್ಮ ಉದ್ದೇಶವಲ್ಲ. ಪ್ಲಾಸ್ಟಿಕ್ ಮತ್ತು ಕಸ ಮುಕ್ತ ನಗರವಾಗಿಸಬೇಕು ಎನ್ನುವುದು ಸರ್ಕಾರದ ಉದ್ದೇಶ. ಜನರೂ ಹಸಿ ಮತ್ತು ಒಣ ತ್ಯಾಜ್ಯವನ್ನು ಬೇರ್ಪಡಿಸಬೇಕು ಎಂದು ಮನವಿ ಮಾಡಿದರು.

ಕೈಗಾರಿಕೋದ್ಯಮಿಗಳು ತ್ಯಾಜ್ಯವನ್ನು ಸಾರ್ವಜನಿಕರಿಗೆ, ಸಮಾಜಕ್ಕೆ ಹಾಗೂ ಪರಿಸರಕ್ಕೆ ಹಾನಿಯಾಗದಂತೆ ನಿರ್ವಹಿಸುವುದು ಕೈಗಾರಿಕೋದ್ಯಮಿಗಳ ಜವಾಬ್ದಾರಿ ಎಂದರು. ನಿರುದ್ಯೋಗದ ಸಮಸ್ಯೆ ಬಗೆಹರಿಸಲು ಕೈಗಾರಿಕೆಗಳು ಅಗತ್ಯ. ಆದರೆ ಪರಿಸರ ಮಾಲಿನ್ಯ ಉಂಟಾಗದಂತೆ ಎಚ್ಚರ ವಹಿಸುವುದು ಅವಶ್ಯಕ.ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆಯಲ್ಲಿ ತೊಡಗಿ ಇತರರಿಗೆ ಮಾದರಿಯಾಗಬೇಕು.ತಿಮ್ಮಕ್ಕ ಪರಿಸರವಾದಿಯಾಗಿದ್ದರಿಂದ ನಾವು ಅವರನ್ನು ನೆನೆಸುತ್ತಿದ್ದೇವೆ. ವಿದ್ಯಾರ್ಥಿಗಳು ಪ್ರತಿ ವರ್ಷ ಇಂಥ ಸಮಾರಂಭಗಳನ್ನು ಆಯೋಜಿಸಿ ಜಾಗೃತಿ ಉಂಟುಮಾಡಬೇಕು ಎಂದರು.

ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರಿಂದ ಸ್ಥಾಪಿಸಲ್ಪಟ್ಟ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ 50 ವರ್ಷ ತುಂಬಿದ ಹಿನ್ನೆಲೆಯಲ್ಲಿ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ “ಸುವರ್ಣ ಮಹೋತ್ಸವ”ವನ್ನು ಉದ್ಘಾಟಿಸಿದ ಕ್ಷಣ pic.twitter.com/vD6CTCdxQv

— Siddaramaiah (@siddaramaiah) November 19, 2025

ಕಾರ್ಯಕ್ರಮದಲ್ಲಿ ಡಿಸಿಎಂ ಡಿಕೆ ಶಿವಕುಮಾರ್, ದಿನೇಶ್ ಗುಂಡೂರಾವ್, ಚೆಲುವರಾಯಸ್ವಾಮಿ, ಈಶ್ವರ್ ಖಂಡ್ರೆ ಸೇರಿ ಹಲವರು ಭಾಗಿಯಾಗಿದ್ದರು.

TAGGED:bengaluruDK ShivakumarPollution Control Boardsaalumarada thimmakkasiddaramaiahಡಿಕೆ ಶಿವಕುಮಾರ್ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಸಾಲುಮರದ ತಿಮ್ಮಕ್ಕಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood

You Might Also Like

Bommai
Districts

ರಾಜ್ಯದಲ್ಲಿ ತಮಿಳುನಾಡು ಮಾದರಿ ಶಿಕ್ಷಕರ ನೇಮಕ ವ್ಯವಸ್ಥೆ ಬರಲಿ: ಬಸವರಾಜ ಬೊಮ್ಮಾಯಿ

Public TV
By Public TV
42 seconds ago
Police lathicharge on farmers Sringeri bandh on Monday
Chikkamagaluru

ರೈತ ಹೋರಾಟಗಾರರ ಮೇಲೆ ಪೊಲೀಸರ ಲಾಠಿಚಾರ್ಜ್‌- ಸೋಮವಾರ ಶೃಂಗೇರಿ ಬಂದ್‌

Public TV
By Public TV
26 minutes ago
Cauvery River
Districts

ಕಾವೇರಿ ನದಿಯಲ್ಲಿ ಈಜಲು ಹೋದ ಯುವಕ ಸಾವು

Public TV
By Public TV
29 minutes ago
Lashkar Module
Latest

ಭಾರತದಲ್ಲಿ ದಾಳಿಗೆ ಸಂಚು ಪ್ರಕರಣ – ಮುಂಬೈ ದಾಳಿಯ ಮಾಸ್ಟರ್‌ ಮೈಂಡ್‌ ಸಂಪರ್ಕದಲ್ಲಿದ್ದ ಕಾಶ್ಮೀರಿ ಉಗ್ರ

Public TV
By Public TV
38 minutes ago
HC Balakrishna
Districts

ಡಿಕೆಶಿ ಬಿಜೆಪಿ ಜೊತೆ ರಾಜಿ ಆಗಿದ್ರೆ ಎಲ್ಲೋ ಇರ್ತಿದ್ರು – ಹೆಚ್‌.ಸಿ ಬಾಲಕೃಷ್ಣ

Public TV
By Public TV
1 hour ago
Bagalkote stone pelting Case 7 innocent people arrested Muslims appeal for their release
Bagalkot

ಬಾಗಲಕೋಟೆ ಕಲ್ಲುತೂರಾಟ| ಬಂಧನಕ್ಕೆ ಒಳಗಾದ 7 ಮಂದಿ ಅಮಾಯಕರು: ಬಿಡುಗಡೆ ಮಾಡುವಂತೆ ಮುಸ್ಲಿಮರ ಮನವಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?