ಉಡುಪಿ: ಪಾಕಿಸ್ತಾನ (Pakistan) ಪರ ಬೇಹುಗಾರಿಕೆ ಮಾಡುತ್ತಿದ್ದ ಇಬ್ಬರನ್ನು ಉಡುಪಿ (Udupi) ಜಿಲ್ಲೆಯ ಮಲ್ಪೆಯಲ್ಲಿ (Malpe) ಬಂಧಿಸಲಾಗಿದೆ.
ಮಲ್ಪೆಯಲ್ಲಿರುವ ಕೊಚ್ಚಿನ್‌ಶಿಪ್ ಯಾರ್ಡ್ (Cochin Shipyard) ಘಟಕದಲ್ಲಿ ಕೆಲಸ ಮಾಡುತ್ತಿದ್ದ ಉತ್ತರ ಪ್ರದೇಶ ಮೂಲದ ರೋಹಿತ್ ಮತ್ತು ಸಂತ್ರಿ ಬಂಧಿತರು. ಆರೋಪಿಗಳು ಪಾಕಿಸ್ತಾನಕ್ಕೆ (Pakistan) ರಹಸ್ಯ ಮಾಹಿತಿಯನ್ನು ರವಾನಿಸುತ್ತಿದ್ದರು ಎನ್ನಲಾಗಿದೆ. ಇದನ್ನೂ ಓದಿ: Explainer | 24 ವರ್ಷಗಳ ಇತಿಹಾಸದಲ್ಲಿ 2ನೇ ದುರಂತ – ಒಂದು ʻತೇಜಸ್ʼಗೆ ತಗುಲುವ ವೆಚ್ಚ ಎಷ್ಟು?
ಸುಷ್ಮಾ ಮೆರಿನ್ ಪ್ರೈವೇಟ್ ಲಿಮಿಟೆಡ್ ಮೂಲಕ ಗುತ್ತಿಗೆ ಆಧಾರದಲ್ಲಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ ಕೆಲಸಕ್ಕೆ ಸೇರಿಕೊಂಡಿದ್ದರು. ಕಳೆದ ಒಂದೂವರೆ ವರ್ಷಗಳಿಂದ ಆರೋಪಿಗಳು ಹಡಗುಗಳಿಗೆ ಸಂಬಂಧಿಸಿದ ಗೌಪ್ಯ ಮಾಹಿತಿ, ರಹಸ್ಯ ತಾಂತ್ರಿಕ ಮಾಹಿತಿಗಳನ್ನು ವಾಟ್ಸಾಪ್ ಮೂಲಕ ಪಾಕಿಸ್ತಾನದಲ್ಲಿ ಸಂಪರ್ಕದಲ್ಲಿದ್ದವರಿಗೆ ಕಳುಹಿಸುತ್ತಿದ್ದರು.
ಈ ಕುರಿತು ಕೊಚ್ಚಿನ್ ಶಿಪ್ ಯಾರ್ಡ್ ಸಿಇಒ ನೀಡಿದ ದೂರಿನ ಆಧಾರದಲ್ಲಿ ಉಡುಪಿ ಪೊಲೀಸರು ಇಬ್ಬರನ್ನೂ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ತನಿಖೆ ವೇಳೆ ಮಾಹಿತಿ ಹಂಚಿಕೆ ಮಾಡಿ ಹಣ ಪಡೆಯುತ್ತಿದ್ದರೆಂಬ ಅಂಶವೂ ಬೆಳಕಿಗೆ ಬಂದಿದೆಕೊ. ಕೊಚ್ಚಿನ್ ಶಿಪ್ ಯಾರ್ಡ್ ಭಾರತೀಯ ನೌಕಾಪಡೆಗೆ ಟಗ್‌ಗಳನ್ನು ನಿರ್ಮಿಸಿ ಕೊಡುವ ಸಂಸ್ಥೆಯಾಗಿದ್ದು, ಖಾಸಗಿ ಸಂಸ್ಥೆಗಳಿಗೂ ಹಡಗುಗಳನ್ನು ನಿರ್ಮಿಸಿಕೊಡುತ್ತಿದೆ.
